Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:19 - ಕನ್ನಡ ಸತ್ಯವೇದವು J.V. (BSI)

19 ಅವನು ಹೆಚ್ಚುಕಡಿಮೆ ನೂರು ವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ಹೆಚ್ಚು ಕಡಿಮೆ ನೂರು ವರ್ಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದು ಹೋಯಿತೆಂದು ಪರಿಗಣಿಸಿದ್ದಾಗ್ಯೂ ಅವನ ನಂಬಿಕೆಯು ಕುಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ಆತನಿಗೆ ಹೆಚ್ಚುಕಡಿಮೆ ನೂರು ವರ್ಷ ಪ್ರಾಯವಾಗಿತ್ತು. ಆತನ ದೇಹವು ದುರ್ಬಲವಾಗಿತ್ತು. ಸಾರಳಿಗೆ ಗರ್ಭಕಾಲವು ಕಳೆದುಹೋಗಿತ್ತು. ಆದರೂ ಆತನ ವಿಶ್ವಾಸ ಕುಂದಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅಬ್ರಹಾಮನು ಸುಮಾರು ನೂರು ವರ್ಷದವನಾಗಿದ್ದರಿಂದ ಅವನ ದೇಹವು ದುರ್ಬಲವಾಗಿತ್ತು. ಆದಕಾರಣ ಅವನು ಮಕ್ಕಳನ್ನು ಪಡೆಯುವ ಸಾಧ್ಯತೆ ಇರಲಿಲ್ಲ. ಅಲ್ಲದೆ ಸಾರಳಿಗೂ ಮಕ್ಕಳಾಗುವ ಸಾಧ್ಯತೆ ಇರಲಿಲ್ಲ. ಅಬ್ರಹಾಮನು ಇದರ ಬಗ್ಗೆ ಆಲೋಚಿಸಿದನು. ಆದರೂ ದೇವರ ಮೇಲೆ ಅವನಿಗಿದ್ದ ನಂಬಿಕೆಯು ಬಲಹೀನವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವನು ಆಗಲೇ ಸುಮಾರು ನೂರು ವರ್ಷದವನಾಗಿದ್ದು, ತನ್ನ ದೇಹವು ದುರ್ಬಲವಾಗಿದ್ದರೂ ಹೆಂಡತಿಯಾದ ಸಾರಳಿಗೆ ಗರ್ಭಧರಿಸುವ ಕಾಲ ಮುಗಿದು ಹೋಗಿದ್ದರೂ ನಂಬಿಕೆಯಲ್ಲಿ ಬಲಹೀನನಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ತೊ ಜಗ್ಗೊಳ್ ಸೆಂಬರ್ ವರ್ಸಾಂಚೊ ಹೊತ್ತೊ, ಜಾಲ್ಯಾರ್‍ಬಿ ತೆನಿ ಅಪ್ನಾಚ್ಯಾ ಆಂಗಾತ್ಲೆ ಸಗ್ಳೆ ಬಳ್ ಸರುನ್ ಗೆಲಾ, ಅನಿ ಸಾರಾಕ್ ಪೊರಾ ಹೊಯ್‍ನ್ಯಾತ್ ಮನ್ತಲೆ ಯೌವಜ್ತಾನಾಬಿ ತೆನಿ ಅಪ್ನಾಚೊ ವಿಶ್ವಾಸ್ ಕಮಿ ಕರುಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:19
11 ತಿಳಿವುಗಳ ಹೋಲಿಕೆ  

ನೂರು ವರುಷದವನಿಗೆ ಮಗ ಹುಟ್ಟುವದುಂಟೇ? ತೊಂಭತ್ತು ವರುಷದವಳಾದ ಸಾರಳು ಹೆತ್ತಾಳೇ ಎಂದು ಮನಸ್ಸಿನಲ್ಲಿ ಅಂದುಕೊಂಡು ದೇವರಿಗೆ -


ಆ ಕ್ಷಣವೇ ಯೇಸು ಕೈ ಚಾಚಿ ಅವನನ್ನು ಹಿಡಿದು - ಅಲ್ಪ ವಿಶ್ವಾಸಿಯೇ, ಯಾಕೆ ಸಂದೇಹಪಟ್ಟೆ ಎಂದು ಹೇಳಿದನು.


ಆತನು ಅವರಿಗೆ - ಅಲ್ಪವಿಶ್ವಾಸಿಗಳೇ, ಯಾಕೆ ಧೈರ್ಯಗೆಡುತ್ತೀರಿ ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಎಲ್ಲಾ ಶಾಂತವಾಯಿತು.


ಎಲೈ ಅಲ್ಪವಿಶ್ವಾಸಿಗಳೇ, ಈ ಹೊತ್ತು ಇದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸಿ ತೊಡಿಸುವನಲ್ಲವೇ.


ಮಾಂಸ ತಿನ್ನುವದನ್ನಾಗಲಿ ದ್ರಾಕ್ಷಾರಸ ಕುಡಿಯುವದನ್ನಾಗಲಿ ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವದನ್ನಾಗಲಿ ಬಿಟ್ಟುಬಿಡುವದೇ ಒಳ್ಳೇದು.


ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು