Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:2 - ಕನ್ನಡ ಸತ್ಯವೇದವು J.V. (BSI)

2 ಅಬ್ರಹಾಮನು ಪುಣ್ಯಕ್ರಿಯೆಗಳಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವದಕ್ಕೆ ಅವನಿಗೆ ಆಸ್ಪದವಿರುವದು. ಆದರೆ ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಆಸ್ಪದವಿರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಬ್ರಹಾಮನು ಪುಣ್ಯಕ್ರಿಯೆಯಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವುದಕ್ಕೆ ಅವನಿಗೆ ಆಸ್ಪದವಿರುವುದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಆಸ್ಪದವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆತನು ತನ್ನ ಸತ್ಕಾರ್ಯಗಳಿಂದ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರೆ ಆಗ ಹೊಗಳಿಕ್ಕೊಳ್ಳುವುದಕ್ಕೆ ಆತನಿಗೆ ಆಸ್ಪದವಿರುತ್ತಿತ್ತು; ಆದರೆ ಅದು ದೇವರ ಸಾನ್ನಿಧ್ಯದಲ್ಲಿ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನು ತನ್ನ ಕ್ರಿಯೆಗಳಿಂದ ನೀತಿವಂತನಾಗಿದ್ದರೆ ಹೊಗಳಿಕೊಳ್ಳಲು ಅವನಿಗೆ ಕಾರಣವಿರುತ್ತಿತ್ತು. ಆದರೆ ಅಬ್ರಹಾಮನು ದೇವರ ಮುಂದೆ ಹೊಗಳಿಕೊಳ್ಳಲು ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಬ್ರಹಾಮನು ಕ್ರಿಯೆಗಳ ಮೂಲಕ ನೀತಿವಂತನೆಂದು ನಿರ್ಣಯ ಹೊಂದಿದವನಾಗಿದ್ದರೆ, ದೇವರ ಮುಂದೆ ಹೊಗಳಿಸಿಕೊಳ್ಳಲು ಅವನಿಗೆ ಆಸ್ಪದ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಖರೆ ಅಬ್ರಾಹಾಮಾನ್ ಕರಲ್ಲ್ಯಾ ಕಾಮಾಂಚ್ಯಾ ವೈನಾ ತೊ ದೆವಾಚ್ಯಾ ಇದ್ರಾಕ್ ನಿತಿವಂತ್ ಮನುನ್ ರ್‍ಹಾಲ್ಯಾರ್, ಮೊಟೆಪಾನ್ ಬೊಲುಕ್ ತೆಕಾ ಕಾರನ್ ಹಾಯ್ ಮನುನ್ ಹೊಲೆ, ಖರೆ ದೆವಾಚ್ಯಾ ನದ್ರೆತ್ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:2
21 ತಿಳಿವುಗಳ ಹೋಲಿಕೆ  

ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂಬ ವೇದೋಕ್ತಿ ನೆರವೇರುವದಕ್ಕೆ ಇದರಿಂದ ಮಾರ್ಗವಾಯಿತು.


ನಾನು ಹೊಗಳಿಕೊಳ್ಳಬೇಕಾದರೆ ನನ್ನ ಬಲಹೀನತೆಯನ್ನು ತೋರ್ಪಡಿಸುವ ವಿಷಯಗಳಲ್ಲಿ ಹೊಗಳಿಕೊಳ್ಳುವೆನು.


ಇದರಲ್ಲಿ ನನ್ನ ಉದ್ದೇಶವೇನಂದರೆ - ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ನೇಮನಿಷ್ಠೆಗಳ ಫಲವಾಗಿರುವ ಸ್ವನೀತಿಯನ್ನಾಶ್ರಯಿಸದೆ ಕ್ರಿಸ್ತನನ್ನು ನಂಬುವದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿ ಕಾಣಿಸಿಕೊಳ್ಳಬೇಕೆಂಬದೇ.


ಅದು ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.


ಹಾಗಾಗದೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವದರಿಂದ ಉಂಟಾಗುವ ಆ ವಾಗ್ದಾನದ ಫಲವು ನಂಬುವವರಿಗೇ ಕೊಡಲ್ಪಡಬೇಕೆಂದು ಶಾಸ್ತ್ರವು ಸಮಸ್ತವನ್ನು ಪಾಪಕ್ಕೊಳಗಾಗಿದೆಯೆಂದು ತೀರ್ಮಾನಿಸಿತು.


ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇಬೇಕೆಂಬ ನಿರ್ಬಂಧ ನನಗುಂಟು. ಸಾರದಿದ್ದರೆ ನನ್ನ ಗತಿಯನ್ನು ಏನು ಹೇಳಲಿ.


ನಾವು ನಮ್ಮನ್ನು ತಿರಿಗಿ ನಿಮ್ಮ ಮುಂದೆ ಹೊಗಳಿಕೊಳ್ಳುವದಿಲ್ಲ; ಆದರೆ ಯಾರು ಹೃದಯದ ವಿಷಯದಲ್ಲಿ ಹಿಗ್ಗದೆ ತೋರಿಕೆಯ ವಿಷಯದಲ್ಲಿ ಮಾತ್ರ ಹಿಗ್ಗುತ್ತಾರೋ ಅವರಿಗೆ ಪ್ರತ್ಯುತ್ತರ ಹೇಳುವದಕ್ಕೆ ನಿಮಗೆ ಆಧಾರವಿರಬೇಕೆಂದು ನಮ್ಮ ವಿಷಯದಲ್ಲಿ ಹಿಗ್ಗುವದಕ್ಕೆ ನಿಮಗೆ ಆಸ್ಪದಕೊಡುತ್ತೇವೆ.


ದೇವರ ಸೇವೆಯಲ್ಲಿ ಹೊಗಳಿಕೊಳ್ಳುವದಕ್ಕೆ ಕ್ರಿಸ್ತ ಯೇಸುವಿನಲ್ಲಿ ನನಗೆ ಕಾರಣವುಂಟು.


ಆಗ ಫರೋಹನು ಅಬ್ರಾಮನನ್ನು ಕರಿಸಿ - ಯಾಕೆ ಹೀಗೆ ಮಾಡಿದೆ? ಹೆಂಡತಿಯೆಂದು ಯಾಕೆ ನನಗೆ ತಿಳಿಸಲಿಲ್ಲ?


ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಆಸ್ಪದವೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು. ಅವರು ಯಾವದರಲ್ಲಿ ಹಿಗ್ಗುತ್ತಾರೋ ಅದರಲ್ಲಿ ನಮ್ಮಂತೆಯೇ ನಡೆಯುವವರಾಗಿ ಕಂಡು ಬರಲಿ.


ನಿನಗೂ ಇತರರಿಗೂ ತಾರತಮ್ಯ ಮಾಡಿದವರು ಯಾರು? ದೇವರಿಂದ ಹೊಂದದಿರುವಂಥದು ನಿನ್ನಲ್ಲಿ ಒಂದಾದರೂ ಉಂಟೋ? ಹೊಂದಿದ ಮೇಲೆ ಹೊಂದದವನಂತೆ ನೀನು ಯಾಕೆ ಹಿಗ್ಗಿಕೊಳ್ಳುತ್ತೀ?


ಆತನು ನನಗೆ - ನೀನು ಒಳಹೊಕ್ಕು ಜನರು ಇಲ್ಲಿ ನಡಿಸುವ ಅಸಹ್ಯವಾದ ದುಷ್ಕಾರ್ಯಗಳನ್ನು ನೋಡು ಎಂದು ಹೇಳಿದಾಗ ನಾನು ಹೊಕ್ಕು ನೋಡಿದೆನು;


ಯೆಹೋಶುವನು ಅವರೆಲ್ಲರಿಗೆ - ನಿಮ್ಮ ದೇವರಾದ ಯೆಹೋವನು ಹೇಳುವದೇನಂದರೆ - ಅಬ್ರಹಾಮ್, ನಾಹೋರ್ ಎಂಬವರ ತಂದೆಯಾದ ತೆರಹ ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ [ಯೂಫ್ರೇಟೀಸ್] ಹೊಳೆಯ ಆಚೆಯಲ್ಲಿದ್ದು ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.


ಅವನ ವಿಷಯವಾಗಿ ತನ್ನ ಸೇವಕರಿಗೆ ಅಪ್ಪಣೆಕೊಡಲು ಅವರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗಿದ್ದ ಸರ್ವಸ್ವಸಹಿತವಾಗಿ ಸಾಗಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು