Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 4:21 - ಕನ್ನಡ ಸತ್ಯವೇದವು J.V. (BSI)

21 ದೇವರನ್ನು ಘನಪಡಿಸುವವನಾಗಿ ಆತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟು ದೃಢನಂಬಿಕೆಯುಳ್ಳವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದೇವರನ್ನು ಘನಪಡಿಸುವವನಾಗಿ ಆತನು ತನ್ನ ವಾಗ್ದಾನವನ್ನು ನೆರವೇರಿಸುವುದಕ್ಕೆ ಸಮರ್ಥನೆಂದು ಪೂರ್ಣದೃಢತೆಯುಳ್ಳವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೇವರು ತಾವು ವಾಗ್ದಾನ ಮಾಡಿದ್ದನ್ನು ಖಂಡಿತವಾಗಿಯೂ ನೆರವೇರಿಸಬಲ್ಲರೆಂದು ದೃಢವಾಗಿ ನಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇವರು ತಾನು ಮಾಡಿದ ವಾಗ್ದಾನವನ್ನು ಖಂಡಿತವಾಗಿ ನೆರವೇರಿಸಬಲ್ಲನೆಂದು ಅಬ್ರಹಾಮನು ದೃಢವಾಗಿ ನಂಬಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನು ವಾಗ್ದಾನವನ್ನು ನೆರವೇರಿಸಲು ದೇವರು ಶಕ್ತರಾಗಿದ್ದಾರೆಂದು ಪೂರ್ಣ ದೃಢತೆಯುಳ್ಳವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ದೆವಾಕ್ ದಿಲ್ಲಿ ಗೊಸ್ಟ್ ಪುರಾ ಕರ್‍ತಲೊ ಬಳ್ ಹಾಯ್ ಮನುನ್ ತೆಕಾ ಪುರಾ ವಿಶ್ವಾಸ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 4:21
15 ತಿಳಿವುಗಳ ಹೋಲಿಕೆ  

ದೇವರಿಂದ ಬರುವ ಯಾವ ಮಾತಾದರೂ ನಿಷ್ಫಲವಾಗುವದಿಲ್ಲ ಅಂದನು.


ತನ್ನ ಮಗನು ಸತ್ತರೂ ದೇವರು ಅವನನ್ನು ಬದುಕಿಸ ಸಮರ್ಥನಾಗಿದ್ದಾನೆಂದು ತಿಳುಕೊಂಡನು. ಮತ್ತು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಹೊಂದಿದನು.


ಎಲೈ, ಕರ್ತನಾದ ಯೆಹೋವನೇ! ಆಹಾ, ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.


ಯೆಹೋವನಿಗೆ ಅಸಾಧ್ಯವಾದದ್ದುಂಟೋ? ನಾನು ಹೇಳಿದಂತೆಯೇ ಬರುವ ವರುಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುವನು ಎಂದು ಹೇಳಿದನು.


ಇದರ ನಿವಿುತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶದಲ್ಲಿಟ್ಟಿರುವದನ್ನು ಆತನು ಆ ದಿನಕ್ಕಾಗಿ ಕಾಪಾಡುವದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ನಂಬಿದವಳಾದ ನೀನು ಧನ್ಯಳೇ; ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು.


ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?


ಯೇಸು ಅವರನ್ನು ದೃಷ್ಟಿಸಿ ನೋಡಿ - ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಅಂದನು.


ದೇವರು ಸಕಲವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು.


ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೋಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ಕರ್ತನು ಶಕ್ತನಾಗಿದ್ದಾನೆ.


ಹೇಗಂದರೆ ಮರಣವಾಗಲಿ ಜೀವವಾಗಲಿ ದೇವದೂತರಾಗಲಿ ದುರಾತ್ಮಗಳಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ


ನಮ್ಮ ದೇವರು ಪರಲೋಕದಲ್ಲಿದ್ದಾನೆ; ಆತನು ತನಗೆ ಬೇಕಾದದ್ದನ್ನೆಲ್ಲಾ ಮಾಡುತ್ತಾನೆ.


ಇವರೆಲ್ಲರು ವಾಗ್ದಾನದ ಫಲಗಳನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ಉಲ್ಲಾಸದೊಡನೆ ವಂದಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂವಿುಯ ಮೇಲೆ ಪರದೇಶದವರೂ ಪ್ರವಾಸಿಗಳೂ ಆಗಿದ್ದೇವೆಂದು ಒಪ್ಪಿಕೊಂಡರು.


ಶ್ರೀಮತ್ ಥೆಯೊಫಿಲನೇ, ನಮ್ಮಲ್ಲಿ ನಿಶ್ಚಯಕ್ಕೆ ಬಂದಿರುವ ಕಾರ್ಯಗಳನ್ನು ಮೊದಲಿಂದ ಕಣ್ಣಾರೆ ಕಂಡು ಸುವಾರ್ತಾ ವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಕಾರ್ಯಗಳನ್ನು ಚರಿತ್ರ ರೂಪವಾಗಿ ಬರೆಯುವದಕ್ಕೆ ಅನೇಕರು ಪ್ರಯತ್ನಿಸಿರಲಾಗಿ


ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ವಿಶೇಷವೆಂದೆಣಿಸುತ್ತಾನೆ; ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು