ರೋಮಾಪುರದವರಿಗೆ 4:25 - ಕನ್ನಡ ಸತ್ಯವೇದವು J.V. (BSI)25 ದೇವರು ಆತನನ್ನು ನಮ್ಮ ಅಪರಾಧಗಳ ನಿವಿುತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ನಿವಿುತ್ತ ಜೀವದಿಂದ ಎಬ್ಬಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಮ್ಮ ಪಾಪಗಳ ನಿಮಿತ್ತ ಯೇಸುವನ್ನು ಮರಣಕ್ಕೆ ಗುರಿಪಡಿಸಲಾಯಿತು. ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿ ಇರಿಸುವುದಕ್ಕಾಗಿ ಅವರು ಪುನರುತ್ಥಾನ ಹೊಂದಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನಮ್ಮ ಪಾಪಗಳ ದೆಸೆಯಿಂದ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು. ನಮ್ಮನ್ನು ನೀತಿವಂತರನ್ನಾಗಿ ಮಾಡುವುದಕ್ಕಾಗಿ ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನಮ್ಮ ಪಾಪಗಳ ನಿಮಿತ್ತವಾಗಿ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು ಮತ್ತು ನಮ್ಮನ್ನು ನೀತಿವಂತರನ್ನಾಗಿ ನಿರ್ಣಯಿಸಲು, ಜೀವದಿಂದ ಎಬ್ಬಿಸಲಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಅಮ್ಚ್ಯಾ ಪಾಪಾಕ್ನಿ ಲಾಗುನ್ ತೆಕಾ ಮರ್‍ನಾಚ್ಯಾ ತಾಬೆತ್ ದಿವ್ನ್ ಹೊಲ್ಲೆ, ಅನಿ ಅಮ್ಕಾ ದೆವಾಚ್ಯಾ ವಾಂಗ್ಡಾ ಖರ್‍ಯಾ ವಾಟೆನ್ ಚಲ್ತಲಿ ಲೊಕಾ ಕರುಸಾಟ್ನಿ ತೆ ಮರ್‍ನಾತ್ನಾ ಝಿತ್ತೊ ಕರುನ್ ಉಟ್ವುನ್ ಹೊಲೆ. ಅಧ್ಯಾಯವನ್ನು ನೋಡಿ |
ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.