Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:20 - ಕನ್ನಡ ಸತ್ಯವೇದವು J.V. (BSI)

20 ಅಪರಾಧಗಳು ಹೆಚ್ಚಾಗಿ ಕಂಡುಬರುವ ಹಾಗೆ ಧರ್ಮಶಾಸ್ತ್ರವು ಮಧ್ಯೆ ಬಂತು. ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಧರ್ಮಶಾಸ್ತ್ರದ ಪ್ರವೇಶ ಆದಂತೆ, ಅಪರಾಧಗಳು ಹೆಚ್ಚಿದವು. ಅಪರಾಧಗಳು ಹೆಚ್ಚಿದಂತೆ, ದೇವರ ಅನುಗ್ರಹವು ಹೆಚ್ಚುಹೆಚ್ಚು ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಧರ್ಮಶಾಸ್ತ್ರ ಬಂದದ್ದರಿಂದ ಜನರಲ್ಲಿ ಹೆಚ್ಚು ಪಾಪಗಳು ಕಂಡುಬಂದವು. ಆದರೆ ಜನರು ಹೆಚ್ಚು ಪಾಪಗಳನ್ನು ಮಾಡಿದಾಗ, ದೇವರು ಅವರಿಗೆ ಹೆಚ್ಚು ಕೃಪೆಯನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅಪರಾಧವು ಹೆಚ್ಚುವಂತೆ ನಿಯಮವು ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗ, ಕೃಪೆಯು ಇನ್ನೂ ಹೆಚ್ಚಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಖಾಯ್ದೆ ಯೆಲ್ಲ್ಯಾ ವೈನಾ ಚುಕ್ ಕರ್ತಲೆಬಿ ಜಾಸ್ತಿ ಹೊಲೆ; ಖರೆ ಪಾಪ್ ಜಾಸ್ತಿ ಹೊಲ್ಲ್ಯಾ ತನ್ನಾ, ದೆವಾಚಿ ಕುರ್ಪಾ ಜಾಸ್ತಿ-ಜಾಸ್ತಿ ಹೊವ್ನ್ ಗೆತ್ ಗೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:20
28 ತಿಳಿವುಗಳ ಹೋಲಿಕೆ  

ಹಾಗಾದರೆ ಏನು ಹೇಳೋಣ? ದೇವರ ಕೃಪೆಯು ಹೆಚ್ಚಲಿ ಎಂದು ನಾವು ಪಾಪದಲ್ಲಿ ಇನ್ನೂ ಇರಬೇಕೋ? ಎಂದಿಗೂ ಇರಬಾರದು.


ಯಾಕಂದರೆ ಪಾಪವು ನಿಮ್ಮ ಮೇಲೆ ಅಧಿಕಾರನಡಿಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಷ್ಟೆ.


ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿವಿುತ್ತ ಅದನ್ನು ಕ್ಷವಿುಸು.


ಯಾಕಂದರೆ ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದು. ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಮೀರೋಣವೆಂಬದೂ ಇಲ್ಲ.


ಹೀಗಿರಲು ನಾನು ಹೇಳುವ ಮಾತೇನಂದರೆ - ಇವಳ ಪಾಪಗಳು ಬಹಳವಾಗಿದ್ದರೂ ಅವು ಕ್ಷವಿುಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷವಿುಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ ಅಂದನು.


ಕಳ್ಳನು ಕದ್ದುಕೊಳ್ಳುವದಕ್ಕೂ ಕೊಯ್ಯುವದಕ್ಕೂ ಹಾಳುಮಾಡುವದಕ್ಕೂ ಬರುತ್ತಾನೆ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿ ಇರಬೇಕೆಂತಲೂ ಬಂದೆನು.


ಬನ್ನಿರಿ ವಾದಿಸುವ ಎಂದು ಯೆಹೋವನು ಅನ್ನುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದ ಹಾಗೆ ಬಿಳುಪಾಗುವವು; ಕಿರಮಂಜಿಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.


ನಾನು ಬಂದು ಅವರ ಕೂಡ ಮಾತಾಡದಿದ್ದರೆ ಅವರಿಗೆ ಪಾಪವು ಇರುತ್ತಿದ್ದಿಲ್ಲ; ಆದರೆ ಅವರು ಮಾಡಿದ ಪಾಪಕ್ಕಾಗಿ ಅವರಿಗೆ ಈಗ ನೆವವಿಲ್ಲ.


ನೀವು ಹೋಗಿ - ನನಗೆ ಯಜ್ಞವು ಬೇಡ, ಕರುಣೆಯೇಬೇಕು ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು.


ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪಕ್ಷವಾಗಿ ನಿಂತದರಿಂದ ನೀನು ನಾಚಿಕೆಪಡು; ಅವರಿಗಿಂತ ಅಧಿಕವಾಗಿ ನೀನು ಮಾಡಿದ ಅಸಹ್ಯಪಾಪಗಳ ಮೂಲಕ ಅವರು ನಿನಗಿಂತ ಉತ್ತಮರೆಂದು ಕಂಡುಬಂದಿದ್ದಾರೆ; ಹೌದು, ನೀನು ಲಜ್ಜೆಪಡು, ನಾಚಿಕೆಗೊಳ್ಳು; ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿದ್ದೀಯಷ್ಟೆ.


ಆದಕಾರಣ ಮೋಶೆ ತಾಮ್ರದಿಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಗಾಯಪಟ್ಟವರಲ್ಲಿ ಯಾರು ಆ ತಾಮ್ರದ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.


ಆಗ ಸಾಯಂಕಾಲ ಐದು ಗಂಟೆಗೆ ಬಂದವರಿಗೆ ಒಂದೊಂದು ಪಾವಲಿ ಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು