Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:21 - ಕನ್ನಡ ಸತ್ಯವೇದವು J.V. (BSI)

21 ಹೀಗೆ ಪಾಪವು ಮರಣವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯನ್ನು ಕೊಟ್ಟು ನಿತ್ಯಜೀವವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೀಗೆ ಪಾಪವು ಮರಣವನ್ನುಂಟು ಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯಿಂದ ನಿತ್ಯಜೀವವನ್ನುಂಟುಮಾಡುತ್ತಾ ಆಳುವಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹೀಗೆ ಪಾಪವು ಮರಣದ ಮೂಲಕ ಆಳ್ವಿಕೆ ನಡೆಸಿದಂತೆ, ದೈವಾನುಗ್ರಹವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿರಿಸಿ, ಅಮರಜೀವದತ್ತ ಒಯ್ದು, ಆಳ್ವಿಕೆ ನಡೆಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಒಂದು ಕಾಲದಲ್ಲಿ ಪಾಪವು ಮರಣದ ಮೂಲಕ ನಮ್ಮ ಮೇಲೆ ಆಳ್ವಿಕೆ ನಡೆಸಿತು. ಆದರೆ ದೇವರು ಜನರನ್ನು ನೀತಿವಂತರನ್ನಾಗಿ ಮಾಡಬೇಕೆಂದು ತನ್ನ ಕೃಪೆಯನ್ನು ಹೆಚ್ಚಾಗಿ ಅನುಗ್ರಹಿಸಿದನು. ಈ ಕೃಪೆಯು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಮಗೆ ನಿತ್ಯಜೀವವನ್ನು ತರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಹೀಗೆ ಪಾಪವು ಮರಣದ ಮೂಲಕ ಆಳಿದಂತೆಯೇ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಿತ್ಯಜೀವವನ್ನುಂಟು ಮಾಡಲು ಕೃಪೆಯು ನೀತಿಯ ಮೂಲಕ ಆಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತಸೆಮನುನ್, ಕಶೆ ಪಾಪಾಕ್ ಲಾಗುನ್ ಮರ್ನಾನ್ ಅಪ್ಲೊ ಅದಿಕಾರ್ ಚಾಲ್ವುಲ್ಯಾನ್, ತಸೆಚ್ ದೆವಾಚಿ ಕುರ್ಪಾ ಖರ್ಯಾ ವಾಟೆನ್ ಚಲ್ತಲ್ಯಾ ವೈನಾ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ವೈನಾ ಕನ್ನಾಚ್ ಮರಾನ್ ನಸಲ್ಲ್ಯಾ ಜಿವನಾಕ್ಡೆ ಚಾಲ್ವುನ್ ನ್ಹೆತಾ, ಅನಿ ಅಪ್ನಾಚೊ ಅದಿಕಾರ್ ಚಾಲ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:21
19 ತಿಳಿವುಗಳ ಹೋಲಿಕೆ  

ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;


ಆದರೂ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನು ದೇವಾಜ್ಞೆಮೀರಿ ಮಾಡಿದ ಪಾಪಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚಕಪುರುಷನಾಗಿದ್ದಾನೆ.


ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ ಆತ್ಮವು ನೀತಿಯ ದೆಸೆಯಿಂದ ಜೀವಸ್ವರೂಪವಾಗಿದೆ.


ಯಾಕಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಉಚಿತಾರ್ಥವರವು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ಯಾಕಂದರೆ ಪಾಪವು ನಿಮ್ಮ ಮೇಲೆ ಅಧಿಕಾರನಡಿಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಷ್ಟೆ.


ಈ ವಿಷಯ ಹೇಗಂದರೆ - ಒಬ್ಬ ಮನುಷ್ಯನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕದೊಳಗೆ ಸೇರಿದವು; ಎಲ್ಲರು ಪಾಪ ಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.


ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳುವದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವದು ಮತ್ತೂ ನಿಶ್ಚಯವಲ್ಲವೇ.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.


ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; [ನಂಬಿಕೆಯೆಂಬ] ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ.


ಕ್ರಿಸ್ತನು ತಾನು ಕೊಡುತ್ತೇನೆಂದು ನಮಗೆ ವಾಗ್ದಾನ ಮಾಡಿದ್ದು ನಿತ್ಯಜೀವವು.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವದೇನಂದರೆ -


ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ದಯೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾಸನದ ಮುಂದೆ ಬರೋಣ.


ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ. ನಂಬಿಕೆಯೆಂಬ ನೀತಿಯಿಂದ ಆದದ್ದೇ.


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದೇ ಇಲ್ಲ; ಅವುಗಳನ್ನು ಯಾರೂ ನನ್ನ ಕೈಯೊಳಗಿಂದ ಕಸಕೊಳ್ಳರು.


ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪಗಳನ್ನು ಆಳಗೊಡಿಸಿ ನೀವು ದೇಹದ ದುರಾಶೆಗಳಿಗೆ ಒಳಪಡಬೇಡಿರಿ.


ಮತ್ತು ಇವರು ನಿತ್ಯಶಿಕ್ಷೆಗೂ ನೀತಿವಂತರು ನಿತ್ಯಜೀವಕ್ಕೂ ಹೋಗುವರು.


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು