Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:4 - ಕನ್ನಡ ಸತ್ಯವೇದವು J.V. (BSI)

4 ಯಾಕಂದರೆ ಉಪದ್ರವದಿಂದ ತಾಳ್ಮೆ ಹುಟ್ಟುತ್ತದೆ, ತಾಳ್ಮೆಯಿಂದ ಅನುಭವಸಿದ್ಧಿ ಹುಟ್ಟುತ್ತದೆ, ಅನುಭವದಿಂದ ನಿರೀಕ್ಷಣ ಹುಟ್ಟುತ್ತದೆಂದು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಏಕೆಂದರೆ ಕಷ್ಟಸಂಕಟಗಳು ತಾಳ್ಮೆಯನ್ನು, ತಾಳ್ಮೆಯೂ ಸದ್ಗುಣವನ್ನು, ಸದ್ಗುಣವು ನಿರೀಕ್ಷೆಯನ್ನು ಉಂಟುಮಾಡುತ್ತದೆಂದು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಸಹನೆಯು ಸದ್ಗುಣವನ್ನು, ಸದ್ಗುಣವು ನಂಬಿಕೆನಿರೀಕ್ಷೆಯನ್ನು ಬೆಳೆಸುತ್ತವೆಂದು ನಾವು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾವು ಬಲಶಾಲಿಗಳಾಗಿದ್ದೇವೆ ಎಂಬುದಕ್ಕೆ ಈ ತಾಳ್ಮೆಯೇ ಆಧಾರ. ನಮಗೆ ನಿರೀಕ್ಷೆಯನ್ನು ಕೊಡುವಂಥದ್ದು ಈ ಆಧಾರವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ತಾಳ್ಮೆಯು ಸದ್ಗುಣವನ್ನೂ ಸದ್ಗುಣವು ನಿರೀಕ್ಷೆಯನ್ನೂ ಉಂಟು ಮಾಡುತ್ತದೆಂದು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಸೊಸುನ್ ಘೆವ್ನ್ ಜಾತಲೆ ಬರೊ ಸ್ವಬಾವ್ ಉತ್ಪನ್ನ್ ಕರ್‍ತಾ, ತೊ ಸ್ವಬಾವ್ ಬರೊಸೊ ಉತ್ವನ್ನ್ ಹೊಯ್ ಸರ್ಕೆ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:4
17 ತಿಳಿವುಗಳ ಹೋಲಿಕೆ  

ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.


ಕಷ್ಟವನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಜೀವವೆಂಬ ಜಯಮಾಲೆಯನ್ನು ಹೊಂದುವನು; ಸ್ವಾವಿುಯು ತನ್ನನ್ನು ಪ್ರೀತಿಸುವವರಿಗೆ ಇದನ್ನು ವಾಗ್ದಾನಮಾಡಿದ್ದಾನೆ.


ನಾನಂತೂ ನಿರೀಕ್ಷಿಸಿಕೊಂಡೇ ಇರುವೆನು; ನಿನ್ನನ್ನು ಅಧಿಕಾಧಿಕವಾಗಿ ಹೊಗಳುತ್ತಿರುವೆನು.


ಪೂರ್ವದಲ್ಲಿ ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಗ್ರಂಥಗಳು ಬರೆಯಲ್ಪಟ್ಟವು.


ನಿಮ್ಮ ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡಕೊಳ್ಳುವಿರಿ.


ತಿಮೊಥೆಯನ ಗುಣವನ್ನು ನೀವು ನೋಡಿ ತಿಳಿದುಕೊಂಡಿದ್ದೀರಿ; ಮಗನು ತಂದೆಗೆ ಹೇಗೋ ಹಾಗೆಯೇ ಅವನು ನನ್ನ ಜೊತೆಯಲ್ಲಿ ಸುವಾರ್ತಾಪ್ರಚಾರಕ್ಕಾಗಿ ಕಷ್ಟಪಟ್ಟು ಕೆಲಸನಡಿಸಿದನೆಂಬದು ನಿಮಗೆ ಗೊತ್ತುಂಟು.


ಈ ಆಧಾರಗಳನ್ನು ಕೊಟ್ಟದ್ದರಲ್ಲಿ ದೇವರು ಸುಳ್ಳಾಡಿರಲಾರನು. ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಭರವಸಕ್ಕೆ ಯೋಗ್ಯವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಣ ದೇವಸಾನ್ನಿಧ್ಯವನ್ನು ಪ್ರವೇಶಿಸುವಂಥದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು