ರೋಮಾಪುರದವರಿಗೆ 5:5 - ಕನ್ನಡ ಸತ್ಯವೇದವು J.V. (BSI)5 ಈ ನಿರೀಕ್ಷೆಯು ನಮ್ಮ ಆಶೆಯನ್ನು ಭಂಗಪಡಿಸುವದಿಲ್ಲ; ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿರಸವು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆಯಲ್ಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಮ್ಮ ಈ ನಿರೀಕ್ಷೆಯು ನಮ್ಮನ್ನು ಎಂದಿಗೂ ನಿರಾಶರನ್ನಾಗಿ ಮಾಡುವುದಿಲ್ಲ. ಅದು ಎಂದಿಗೂ ವ್ಯರ್ಥವಾಗುವುದಿಲ್ಲ. ಏಕೆಂದರೆ ದೇವರು ನಮಗೆ ಉಡುಗೊರೆಯಾಗಿ ಕೊಟ್ಟಿರುವ ಪವಿತ್ರಾತ್ಮನ ಮೂಲಕ ತನ್ನ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಈ ನಿರೀಕ್ಷೆಯು ನಮ್ಮನ್ನು ನಿರಾಶೆ ಪಡಿಸುವುದಿಲ್ಲ. ಏಕೆಂದರೆ ದೇವರು ನಮಗೆ ಅನುಗ್ರಹಿಸಿರುವ ಪವಿತ್ರಾತ್ಮ ಮೂಲಕ ನಮ್ಮ ಹೃದಯಗಳಲ್ಲಿ ತಮ್ಮ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತೊ ಬರೊಸೊ ಅಮ್ಕಾ ನಿರಾಸಿ ಹೊವ್ಕ್ ಸೊಡಿನಾ, ಕಶ್ಯಾಕ್ ಮಟ್ಲ್ಯಾರ್, ಅಮ್ಚ್ಯಾಸಾಟ್ನಿ ದೆವಾಚಿ ಎಕ್ ದೆನ್ಗಿ ಹೊವ್ನ್ ಹೊತ್ತ್ಯಾ ಪವಿತ್ರ್ ಆತ್ಮ್ಯಾಚ್ಯಾ ರುಪಾತ್ ದೆವಾನ್ ಅಪ್ನಾಚೊ ಪ್ರೆಮ್ ಅಮ್ಚ್ಯಾ ಮನಾತ್ನಿ ವೊತ್ಲ್ಯಾನಾಯ್. ಅಧ್ಯಾಯವನ್ನು ನೋಡಿ |