Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:7 - ಕನ್ನಡ ಸತ್ಯವೇದವು J.V. (BSI)

7 ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವದು ಅಪರೂಪ. ಉಪಕಾರಿಗೋಸ್ಕರ ಪ್ರಾಣಕೊಡುವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಿಗಾಗಿ ಪ್ರಾಣಕೊಡುವುದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀತಿವಂತನಿಗಾಗಿ ಒಬ್ಬನು ತನ್ನ ಪ್ರಾಣಕೊಡುವುದು ವಿರಳ. ಸತ್ಪುರುಷನಿಗಾಗಿ ಒಬ್ಬನು ತನ್ನ ಪ್ರಾಣವನ್ನು ಕೊಟ್ಟರೂ ಕೊಟ್ಟಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀತಿವಂತನ ಪ್ರಾಣವನ್ನು ರಕ್ಷಿಸುವುದಕ್ಕಾಗಿ ಒಬ್ಬನು ಪ್ರಾಣಕೊಡುವುದು ಅಪರೂಪ. ನಿಜವಾಗಿಯೂ ಒಳ್ಳೆಯವನಾಗಿರುವ ಒಬ್ಬನಿಗಾಗಿ ಪ್ರಾಣಕೊಡಲು ಒಬ್ಬನು ಧೈರ್ಯಮಾಡಿದರೂ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀತಿವಂತನಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ಒಬ್ಬ ಸತ್ಪುರುಷನಿಗಾಗಿ ಯಾರಾದರೂ ಪ್ರಾಣಕೊಡುವುದಕ್ಕೆ ಧೈರ್ಯ ಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರ್ಯ್ಯಾ ವಾಟೆನ್ ಚಲ್ತಲ್ಯಾಚ್ಯಾ ಸಾಟಿಚ್ ಕೊನ್‍ಬಿ ಮರ್‍ತಲೆ ಮಟ್ಲ್ಯಾರ್ ಲೈ ಕಸ್ಟಾಚೆ, ಎಕ್ ಬರ್‍ಯಾ ಮಾನ್ಸಾಚ್ಯಾಸಾಟಿ ಮರುಕ್ ಮನುನ್ ಕೊನ್‍ಬಿ ಎಕ್ಲೊ ತಯಾರ್ ಹೊಲ್ಯಾರ್ ಹೊವ್ಕ್ ಫಿರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:7
11 ತಿಳಿವುಗಳ ಹೋಲಿಕೆ  

ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದರಲ್ಲಿಯೇ ಪ್ರೀತಿ ಇಂಥದೆಂದು ನಮಗೆ ತಿಳಿದು ಬಂದದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.


ಅವರು ನನ್ನ ಪ್ರಾಣದ ಸಂರಕ್ಷಣೆಗಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಗುರಿಮಾಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರ ಉಪಕಾರವನ್ನು ಸ್ಮರಿಸುತ್ತಾರೆ.


ಪ್ರಾಣವನ್ನೇ ಸ್ನೇಹಿತರಿಗೋಸ್ಕರ ಕೊಡುವ ಪ್ರೀತಿಗಿಂತ ಹೆಚ್ಚಿನ ಪ್ರೀತಿಯು ಯಾವದೂ ಇಲ್ಲ.


ದಯಾಳುವಾಗಿ ಧನಸಹಾಯಮಾಡುವವನೂ ತನ್ನ ಕಾರ್ಯಗಳನ್ನು ನೀತಿಯಿಂದ ನಡಿಸುವವನೂ ಭಾಗ್ಯವಂತನು.


ಕಾವಲುಗಾರನು - ಮುಂದಾಗಿ ಬರುತ್ತಿರುವವನ ಓಟವು ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ ಎಂದನು. ಅದಕ್ಕೆ ಅರಸನು - ಅವನು ಒಳ್ಳೆಯವನು; ಶುಭವರ್ತಮಾನತರುವವನು ಅಂದನು.


ಆಗ ಸೈನ್ಯದವರು ಅವನಿಗೆ - ನೀನು ಬರಬಾರದು; ನಾವು ಸೋತು ಓಡಿ ಹೋದರೆ ಶತ್ರುಗಳು ಲಕ್ಷಿಸುವದಿಲ್ಲ; ನಮ್ಮಲ್ಲಿ ಅರ್ಧ ಜನರು ಸತ್ತರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರ ಬೆಲೆ ನಿನ್ನೊಬ್ಬನಿಗೇ ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು ಅಂದರು.


ಈ ಜನರ ಹೃದಯವು ಕೊಬ್ಬಿತು; ಇವರ ಕಿವಿ ಮಂದವಾಯಿತು; ಇವರು ಕಣ್ಣು ಮುಚ್ಚಿಕೊಂಡಿದ್ದಾರೆ. ತಾವು ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ತಿಳಿದು ನನ್ನ ಕಡೆಗೆ ತಿರುಗುಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದಬಾರದೆಂದು ಮಾಡಿಕೊಂಡಿದ್ದಾರೆ ಎಂಬದು.


ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇವಿುತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.


ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ಸಿದ್ಧಾಂತಪಡಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು