Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 5:9 - ಕನ್ನಡ ಸತ್ಯವೇದವು J.V. (BSI)

9 ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕ ಬರುವ ಕೋಪಕ್ಕೆ ತಪ್ಪಿಸಿಕೊಳ್ಳುವದು ಮತ್ತೂ ನಿಶ್ಚಯವಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈಗ ನಾವು ಆತನ ರಕ್ತದಿಂದ ನೀತಿವಂತರಾಗಿರಲಾಗಿ ಆತನ ಮೂಲಕವಾಗಿ ದೇವರ ಕೋಪದಿಂದ ಖಂಡಿತವಾಗಿಯೂ ರಕ್ಷಣೆಯಾಗುವುದು ಅಷ್ಟೇ ನಿಶ್ಚಯವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕ್ರಿಸ್ತಯೇಸುವಿನ ರಕ್ತಧಾರೆಯಿಂದ ನಾವೀಗ ದೇವರೊಡನೆ ಸತ್ಸಂಬಂಧದಲ್ಲಿದ್ದೇವೆ. ಹೀಗಿರಲಾಗಿ, ಬರಲಿರುವ ದೈವಕೋಪಾಗ್ನಿಯಿಂದ ಯೇಸುಕ್ರಿಸ್ತರ ಮುಖಾಂತರವೇ ಪಾರಾಗುತ್ತೇವೆ ಎಂಬುದು ಮತ್ತಷ್ಟು ನಿಶ್ಚಯವಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾವು ಕ್ರಿಸ್ತನ ರಕ್ತದ ಮೂಲಕವಾಗಿ ನೀತಿವಂತರಾಗಿದ್ದೇವೆ. ಆದ್ದರಿಂದ ಆತನ ಮೂಲಕ ದೇವರ ಕೋಪದಿಂದ ಖಂಡಿತವಾಗಿ ತಪ್ಪಿಸಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈಗ ನಾವು ಕ್ರಿಸ್ತ ಯೇಸುವಿನ ರಕ್ತದಿಂದ ನೀತಿವಂತರೆಂದು ನಿರ್ಣಯ ಹೊಂದಿರುವುದರಿಂದ, ಕ್ರಿಸ್ತ ಯೇಸುವಿನ ಮೂಲಕವಾಗಿಯೇ ದೇವರ ಕೋಪದಿಂದ ರಕ್ಷಿಸಲಾಗುವುದು ಇನ್ನೂ ಖಂಡಿತವಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆಚ್ಯಾ ರಗ್ತಾ ವೈನಾ ಅಮ್ಕಾ ದೆವಾಚ್ಯಾ ಇದ್ರಾಕ್ ನಿತಿವಂತ್ ಮನುನ್ ಠರ್‍ವುನ್ ಹೊಲ್ಲೆ ಹಾಯ್; ಅಶೆ ರ್‍ಹಾತಾನ್ ಖರೆಚ್ ತೆನಿ ಅಮ್ಕಾ ದೆವಾಚ್ಯಾ ರಾಗಾತ್ನಾ ಹುರ್ವುನ್ ಘೆಟ್ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 5:9
13 ತಿಳಿವುಗಳ ಹೋಲಿಕೆ  

ಆತನು ಸತ್ತವರೊಳಗಿಂದ ಎಬ್ಬಿಸಿದಂಥ ಆಕಾಶದೊಳಗಿಂದ ಬರುವಂಥ ಆತನ ಕುಮಾರನನ್ನು ಎದುರುನೋಡುವವರಾದಿರೆಂತಲೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.


ಆದದರಿಂದ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ಅಪರಾಧನಿರ್ಣಯವು ಈಗ ಇಲ್ಲವೇ ಇಲ್ಲ.


ಈಗಲಾದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವನ್ನು ಸೇರಿದವರಾಗಿದ್ದು ಆತನ ರಕ್ತದ ಮೂಲಕ ಸಮೀಪಸ್ಥರಾದಿರಿ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಮರಣದಿಂದ ಪಾರಾಗಿ ಜೀವಕ್ಕೆ ಸೇರಿದ್ದಾನೆ.


ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ಉಂಟಾದ ಸಮಾಧಾನದಲ್ಲಿ ಇರೋಣ.


ದುಷ್ಟತನವನ್ನು ನಡಿಸಿ ಸತ್ಯವನ್ನು ಅಣಗಿಸುವವರಾದ ಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ತೋರಿಬರುತ್ತದೆ.


ಧರ್ಮಶಾಸ್ತ್ರದ ಪ್ರಕಾರ ಸ್ವಲ್ಪಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತಧಾರೆಯಿಲ್ಲದೆ ಪಾಪಪರಿಹಾರ ಉಂಟಾಗುವದಿಲ್ಲ.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ.


ಮತ್ತು ಯಾರನ್ನು ಮೊದಲು ನೇವಿುಸಿದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಪದವಿಗೆ ಸೇರಿಸಿದನು.


ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವು ಬೆಳಕಿನಲ್ಲಿ ನಡೆದರೆ ನಾವು ಒಬ್ಬರಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಮತ್ತು ಆತನ ಮಗನಾದ ಯೇಸುವಿನ ರಕ್ತವು ಸಕಲಪಾಪವನ್ನು ನಿವಾರಣಮಾಡಿ ನಮ್ಮನ್ನು ಶುದ್ಧಿಮಾಡುತ್ತದೆ.


ದೇವರಿಗೆ ವೈರಿಗಳಾಗಿದ್ದ ನಾವು ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿರಲಾಗಿ ಆತನ ಕೂಡ ಸಮಾಧಾನವಾದ ನಮಗೆ ಆ ಮಗನಿಗಿರುವ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.


ನಾವೆಲ್ಲರೂ ಪೂರ್ವದಲ್ಲಿ ಅವಿಧೇಯರಾಗಿದ್ದು ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಫೆಗಳನ್ನು ನೆರವೇರಿಸುತ್ತಾ ನಡೆದು ವಿುಕ್ಕಾದವರಂತೆ ಸ್ವಭಾವಸಿದ್ಧವಾಗಿ ದೇವರ ಕೋಪಕ್ಕೆ ಗುರಿಯಾಗಿದ್ದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು