Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:17 - ಕನ್ನಡ ಸತ್ಯವೇದವು J.V. (BSI)

17 ಆದರೆ ನೀವು ಮುಂಚೆ ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಲ್ಪಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದದರಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ನೀವು ಮೊದಲು ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಿಕೊಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದ್ದರಿಂದಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ. ಏಕೆಂದರೆ, ಹಿಂದೊಮ್ಮೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಕಲಿಸಿದ ಬೋಧನೆಯನ್ನು ನೀವು ಮನಃಪೂರ್ವಕವಾಗಿ ಅಂಗೀಕರಿಸಿ ವಿಧೇಯರಾದಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಹಿಂದಿನ ಕಾಲದಲ್ಲಿ ನೀವು ಪಾಪಕ್ಕೆ ಗುಲಾಮರಾಗಿದ್ದಿರಿ. ಪಾಪವು ನಿಮ್ಮನ್ನು ತನ್ನ ಹಿಡಿತದಲ್ಲಿಟ್ಟುಕೊಂಡಿತ್ತು. ನಿಮಗೆ ಬೋಧಿಸಿದ ವಿಷಯಗಳಿಗೆ ನೀವು ಸಂಪೂರ್ಣವಾಗಿ ವಿಧೇಯರಾದ್ದರಿಂದ ದೇವರಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಒಪ್ಪಿಸಿದ ಬೋಧನೆಗೆ ಹೃದಯದಿಂದ ವಿಧೇಯರಾದುದ್ದಕ್ಕಾಗಿ, ದೇವರಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಖರೆ ದೆವಾಕ್ ಧನ್ಯವಾದ್ ಹೊಂವ್ದಿತ್! ಕಶ್ಯಾಕ್ ಮಟ್ಲ್ಯಾರ್ ಎಕ್ ಎಳಾರ್ ತುಮಿ ಪಾಪಾಚಿ ಗುಲಾಮಾ ಹೊವ್ನ್ ಹೊತ್ತ್ಯಾಶಿ, ಜಾಲ್ಯಾರ್‍ಬಿ ತುಮಿ ಸ್ವಿಕಾರ್ ಕರಲ್ಲ್ಯಾ ಶಿಕಾಪಾತ್ನಿ ತುಮ್ಕಾ ಗಾವಲ್ಲ್ಯಾ ಖರ್ಯ್ಯಾ ವಿಶಯಾಕ್ನಿ ತುಮಿ ತುಮ್ಚ್ಯಾ ಫುರಾ ಮನಾನಿ ಖಾಲ್ತಿ ಹೊವ್ನ್ ಚಲ್ಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:17
37 ತಿಳಿವುಗಳ ಹೋಲಿಕೆ  

ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥಬೋಧನಾವಾಕ್ಯಗಳನ್ನು ಮಾದರಿಮಾಡಿಕೊಂಡು ಅನುಸರಿಸು.


ಕ್ರಿಸ್ತನ ಅನ್ಯೋನ್ಯತೆಯಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರವು.


ಮೊದಲನೇದು, ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ.


ಸಹೋದರರು ಆಗಾಗ್ಗೆ ನನ್ನ ಬಳಿಗೆ ಬಂದು ನಿನ್ನಲ್ಲಿರುವ ಸತ್ಯವನ್ನು ಕುರಿತು ತಿಳಿಸಿ ನೀನು ಸತ್ಯವಂತನಾಗಿ ನಡೆಯುವವನು ಎಂದು ಹೇಳುವಾಗ ನಾನು ಬಹಳ ಸಂತೋಷಪಡುತ್ತೇನೆ.


ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವದಕ್ಕಾಗಿ ನನ್ನ ಕೈಯಿಂದ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ ಸೂಚಕಕಾರ್ಯ ಅದ್ಭುತಕಾರ್ಯಗಳ ಬಲದಿಂದಲೂ ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವದಕ್ಕೆ ನನಗೆ ಧೈರ್ಯಸಾಲದು.


ಹೀಗೆಂದ ಮಾತುಗಳನ್ನು ಆ ಸುನ್ನತಿಯವರು ಕೇಳಿ ಆಕ್ಷೇಪಣೆ ಮಾಡುವದನ್ನು ಬಿಟ್ಟು - ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ ಎಂದು ದೇವರನ್ನು ಕೊಂಡಾಡಿದರು.


ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಮಗುಂಟಾದ ಆಜ್ಞಾನುಸಾರ ಸತ್ಯವಂತರಾಗಿ ನಡೆಯುವದನ್ನು ಕಂಡು ಬಹಳ ಸಂತೋಷವುಳ್ಳವನಾದೆನು.


ಇದಲ್ಲದೆ ಆತನು ಸಿದ್ಧಿಗೆ ಬಂದು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆನಿಸಿಕೊಂಡವನಾಗಿ ತನಗೆ ವಿಧೇಯರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಕಾರಣನಾದನು.


ನಾನು ಪ್ರಾರ್ಥನೆಮಾಡುವಾಗೆಲ್ಲಾ ದೇವರಿಗೆ ಯಾವಾಗಲೂ ಸ್ತೋತ್ರವನ್ನು ಸಲ್ಲಿಸಿ ನಿನಗೋಸ್ಕರ ವಿಜ್ಞಾಪನೆ ಮಾಡುತ್ತೇನೆ.


ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಬರುತ್ತದೆ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚುತ್ತಾ ಬರುತ್ತದೆ.


ನ್ಯಾಯವಿಚಾರಣೆಯ ಸಮಯ ಬಂದದೆ; ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಯಿತಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗಲು ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಗತಿ ಏನಾಗಬಹುದು?


ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟ ಕೂಡಲೆ ಕರೆದಾತನ ಮಾತನ್ನು ಕೇಳಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.


ನಿಮ್ಮ ನಿವಿುತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಸಂತೋಷಕ್ಕಾಗಿ ದೇವರಿಗೆ ತಕ್ಕಷ್ಟು ಸ್ತೋತ್ರಮಾಡುವದು ನಮ್ಮಿಂದ ಹೇಗಾದೀತು?


ನನ್ನ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆಮಾಡಿ -


ಕ್ರಿಸ್ತ ಯೇಸುವಿನಲ್ಲಿ ದೇವರು ನಿಮಗೆ ಅನುಗ್ರಹಿಸಿದ ಕೃಪೆಯ ನಿವಿುತ್ತ ನಾನು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರನ್ನು ಕೊಂಡಾಡುತ್ತೇನೆ.


ಆತನ ಹೆಸರಿನ ಪ್ರಸಿದ್ಧಿಗಾಗಿ ಎಲ್ಲಾ ಅನ್ಯಜನಗಳಲ್ಲಿ ನಂಬಿಕೆಯೆಂಬ ವಿಧೇಯತ್ವ ಉಂಟಾಗುವದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದೆವು.


ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು; ದೇಶಾಂತರದವರು ನನ್ನ ಮುಂದೆ ಮುದುರಿಕೊಳ್ಳುವರು.


[ಎಜ್ರನು ಹೇಳಿದ್ದು - ] ನಮ್ಮ ಪಿತೃಗಳ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇವಿುನಲ್ಲಿರುವ ಯೆಹೋವನ ಆಲಯವನ್ನು ಶೋಭಿಸುವ ಸ್ಥಿತಿಗೆ ತರುವದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸು ಮಾಡಿದ್ದಾನೆ;


ಯಾರು ಸ್ವೇಚ್ಫೆಯುಳ್ಳವರಾಗಿ ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ ಅವರಿಗೆ ಕೋಪ ರೌದ್ರಗಳು ಬರುವವು.


ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ ನಮ್ಮನ್ನು ಎದುರುಗೊಳ್ಳುವದಕ್ಕಾಗಿ ಕೆಲವರು ಅಪ್ಪಿಯಪೇಟೆಯವರೆಗೂ ಕೆಲವರು ತ್ರಿಛತ್ರವೆಂಬ ಸ್ಥಳದವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರ ಸ್ತೋತ್ರವನ್ನು ಮಾಡಿ ಧೈರ್ಯಗೊಂಡನು.


ಹೀಗಿರುವದರಿಂದ ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರು ತಿಳಿಸಿದ್ದನ್ನು ಪ್ರಕಟಿಸದೆ ಜ್ಞಾನವಾಕ್ಯವನ್ನಾಡದೆ ಪ್ರವಾದನೆಯನ್ನು ಹೇಳದೆ ಉಪದೇಶಮಾಡದೆ ವಾಣಿಗಳನ್ನು ಮಾತ್ರ ಆಡುವವನಾಗಿದ್ದರೆ ನನ್ನಿಂದ ನಿಮಗೇನು ಪ್ರಯೋಜನವಾದೀತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು