Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:23 - ಕನ್ನಡ ಸತ್ಯವೇದವು J.V. (BSI)

23 ಯಾಕಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಉಚಿತಾರ್ಥವರವು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಜನರು ಮಾಡುವ ಪಾಪಕ್ಕೆ ಮರಣವೇ ಸಂಬಳ. ಆದರೆ ದೇವರ ಉಚಿತವಾದ ಕೊಡುಗೆಯು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಕಶ್ಯಾಕ್ ಮಟ್ಲ್ಯಾರ್ ಪಾಪಾಚಿ ಮಜುರಿ ಮರಾನ್, ಖರೆ ದೆವಾಚಿ ಫುಕೊಟ್ಚಿ ದೆನ್ಗಿ ಕಾಯ್ ಮಟ್ಲ್ಯಾರ್ ಅಮ್ಚ್ಯಾ ಧನಿಯಾ ಕ್ರಿಸ್ತಾ ಜೆಜುಚ್ಯಾ ಎಕ್ವಟ್ಟಾತ್ ಕನ್ನಾಚ್ ಮರಾನ್ ನಸಲ್ಲೆ ಜಿವನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:23
41 ತಿಳಿವುಗಳ ಹೋಲಿಕೆ  

ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು; ಮಗನಿಗೆ ಒಳಗಾಗದವನು ಜೀವವನ್ನು ಕಾಣುವದೇ ಇಲ್ಲ; ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವದು.


ಈ ವಿಷಯ ಹೇಗಂದರೆ - ಒಬ್ಬ ಮನುಷ್ಯನಿಂದಲೇ ಪಾಪವೂ ಪಾಪದಿಂದ ಮರಣವೂ ಲೋಕದೊಳಗೆ ಸೇರಿದವು; ಎಲ್ಲರು ಪಾಪ ಮಾಡಿದ್ದರಿಂದ ಮರಣವು ಹೀಗೆ ಎಲ್ಲರಲ್ಲಿಯೂ ವ್ಯಾಪಿಸಿತು.


ಆಮೇಲೆ ಆಶೆಯು ಬಸುರಾಗಿ ಪಾಪವನ್ನು ಹೆರುತ್ತದೆ; ಪಾಪವು ತುಂಬಾ ಬೆಳೆದು ಮರಣವನ್ನು ಹಡೆಯುತ್ತದೆ.


ನಿತ್ಯ ಜೀವವು ಸಿಕ್ಕಬೇಕೆಂಬದೇ ನನ್ನ ತಂದೆಯ ಚಿತ್ತವಾಗಿದೆ; ಮತ್ತು ನಾನು ಕಡೇದಿನದಲ್ಲಿ ಅವನನ್ನು ಎಬ್ಬಿಸುವೆನು ಎಂದು ಹೇಳಿದನು.


ಮತ್ತು ಇವರು ನಿತ್ಯಶಿಕ್ಷೆಗೂ ನೀತಿವಂತರು ನಿತ್ಯಜೀವಕ್ಕೂ ಹೋಗುವರು.


ಪಾಪಮಾಡುವವನೇ ಸಾಯುವನು; ಮಗನು ತಂದೆಯ ದೋಷಫಲವನ್ನು ಅನುಭವಿಸನು, ತಂದೆಯು ಮಗನ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಮರಣದಿಂದ ಪಾರಾಗಿ ಜೀವಕ್ಕೆ ಸೇರಿದ್ದಾನೆ.


ಹೀಗೆ ಪಾಪವು ಮರಣವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯನ್ನು ಕೊಟ್ಟು ನಿತ್ಯಜೀವವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸುವದು.


ಯಾರು ಪ್ರಭಾವ ಮಾನ ನಿರ್ಲಯತ್ವಗಳನ್ನು ಹೊಂದಬೇಕೆಂದು ಒಳ್ಳೇದನ್ನು ಬೇಸರಗೊಳ್ಳದೆ ಮಾಡುತ್ತಾರೋ ಅವರಿಗೆ ನಿತ್ಯಜೀವವನ್ನು ಕೊಡುವನು.


ಒಳ್ಳೇದರ ಕೆಟ್ಟದ್ದರ ಅರುಹನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದ ದಿನ ಸತ್ತೇಹೋಗುವಿ ಎಂದು ವಿಧಿಸಿದನು.


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದೇ ಇಲ್ಲ; ಅವುಗಳನ್ನು ಯಾರೂ ನನ್ನ ಕೈಯೊಳಗಿಂದ ಕಸಕೊಳ್ಳರು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳುವದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವದು ಮತ್ತೂ ನಿಶ್ಚಯವಲ್ಲವೇ.


ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; [ನಂಬಿಕೆಯೆಂಬ] ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ.


ನೀನು ಅವನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೆ ಅವನು ನಿತ್ಯಜೀವವನ್ನು ಕೊಡಬೇಕೆಂದು ಅವನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿಯಲ್ಲಾ.


ನೀನು ತಿರಿಗಿ ಮಣ್ಣಿಗೆ ಸೇರುವತನಕ ಬೆವರಿಡುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಲ್ಲವೋ; ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ ಎಂದು ಹೇಳಿದನು.


ಸ್ವಾಮೀ, ನಿನ್ನನ್ನು ಬಿಟ್ಟು ನಾವು ಇನ್ನಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವವನ್ನು ಉಂಟುಮಾಡುವ ವಾಕ್ಯಗಳುಂಟು;


ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು.


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ಲಭಿಸುವದಲ್ಲವೆ.


ಕ್ರಿಸ್ತನು ತಾನು ಕೊಡುತ್ತೇನೆಂದು ನಮಗೆ ವಾಗ್ದಾನ ಮಾಡಿದ್ದು ನಿತ್ಯಜೀವವು.


ನೇಮನಿಷ್ಠೆಗಳನ್ನು ಆಧಾರಮಾಡಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ಧರ್ಮಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತನೆಂದು ಶಾಸ್ತ್ರದಲ್ಲಿ ಬರೆದದೆ.


ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ; ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ಒರತೆಯಾಗಿದ್ದು ನಿತ್ಯಜೀವವನ್ನು ಉಂಟುಮಾಡುವದು ಎಂದು ಹೇಳಿದನು.


ಧರ್ಮನಿರತನಿಗೆ ಜೀವ, ಅಧರ್ಮಾಸಕ್ತನಿಗೆ ಮರಣ.


ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ; ತಮ್ಮ ಪಾಪವನ್ನು ಮರೆಮಾಜದೆ ಸೊದೋವಿುನವರಂತೆ ಮೆರೆಯಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.


ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ; ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ; ಹೀಗೆ ಬಿತ್ತುವವನಿಗೂ ಕೊಯ್ಯುವವನಿಗೂ ಕೂಡ ಸಂತೋಷವಾಗುವದು.


ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವದಲ್ಲದೆ ಮಾಡುವವರನ್ನೂ ಅನುಮೋದಿಸುತ್ತಾರೆ.


ಆದರೆ ನೀವು ಆಗ ಮಾಡಿದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ. ಕಡೆಗೆ ಅವುಗಳಿಂದ ಬರುವದು ಮರಣವಲ್ಲವೇ.


ಶರೀರಭಾವದವುಗಳ ಮೇಲೆ ಮನಸ್ಸಿಡುವದು ಮರಣ; ಪವಿತ್ರಾತ್ಮನವುಗಳ ಮೇಲೆ ಮನಸ್ಸಿಡುವದು ಜೀವವೂ ಮನಶ್ಶಾಂತಿಯೂ ಆಗಿದೆ.


ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವದಾದರೆ ಜೀವಿಸುವಿರಿ.


ಹೇಗಂದರೆ ಮರಣವಾಗಲಿ ಜೀವವಾಗಲಿ ದೇವದೂತರಾಗಲಿ ದುರಾತ್ಮಗಳಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ


ಮಹತ್ವಗಳಾಗಲಿ ಮೇಲಣ ಲೋಕವಾಗಲಿ ಕೆಳಗಣ ಲೋಕವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ತೋರಿಬಂದ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು