Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 6:5 - ಕನ್ನಡ ಸತ್ಯವೇದವು J.V. (BSI)

5 ಹೇಗಂದರೆ ನಾವು ಆತನ ಮರಣಕ್ಕೆ ಸದೃಶವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೇಗೆಂದರೆ ನಾವು ಆತನ ಮರಣಕ್ಕೆ ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವರು ಮರಣ ಹೊಂದಿದಂತೆ ನಾವೂ ಅವರೊಂದಿಗೆ ಐಕ್ಯವಾಗಿ ಮರಣವನ್ನು ಹೊಂದುತ್ತೇವೆ. ಅಂತೆಯೇ, ಅವರು ಪುನರುತ್ಥಾನ ಆದಂತೆ ನಾವೂ ಅವರೊಡನೆ ಐಕ್ಯವಾಗಿ ಪುನರುತ್ಥಾನ ಹೊಂದುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕ್ರಿಸ್ತನ ಮರಣಕ್ಕೆ ಸದೃಶ್ಯವಾದ ಮರಣದ ಮೂಲಕ ನಾವು ಸಹ ಆತನೊಂದಿಗೆ ಐಕ್ಯರಾದೆವು. ಆದ್ದರಿಂದ ಕ್ರಿಸ್ತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದಂತೆಯೇ ನಾವು ಸಹ ಜೀವಂತವಾಗಿ ಎದ್ದುಬರುವುದರ ಮೂಲಕವಾಗಿ ಆತನೊಂದಿಗೆ ಐಕ್ಯರಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾವು ಕ್ರಿಸ್ತ ಯೇಸುವಿನೊಂದಿಗೆ ಸೇರಿ ಅವರ ಮರಣದಲ್ಲಿ ಪಾಲುಗಾರರಾದರೆ, ಅವರ ಪುನರುತ್ಥಾನದಲ್ಲಿಯೂ ಪಾಲುಗಾರರಾಗುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಕಶ್ಯಾಕ್ ಮಟ್ಲ್ಯಾರ್ ಕಶೆ ತೆಚ್ಯಾ ಮರ್ತಲ್ಯಾತ್ ಅಮಿ ತೆಚ್ಯಾ ವಾಂಗ್ಡಾ ಎಕ್ ಹೊಲಾಂವ್, ತಸೆಚ್ ಅಮಿ ತೆಚ್ಯಾ ಝಿತ್ತೊ ಹೊವ್ನ್ ಉಟ್ತ್ಯಾಲಾತ್ಬಿ ತೆಚೆ ವಾಂಗ್ಡಾ ಎಕ್ ಹೊತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 6:5
12 ತಿಳಿವುಗಳ ಹೋಲಿಕೆ  

ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟದ್ದರಿಂದಲೇ ಆ ಸುನ್ನತಿಯನ್ನು ಹೊಂದಿದಿರಿ. ಇದಲ್ಲದೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಸಾಮರ್ಥ್ಯದಲ್ಲಿ ನಂಬಿಕೆಯಿಡುವದರ ಮೂಲಕ ಅದರಲ್ಲಿ ಆತನ ಕೂಡ ಎದ್ದು ಬಂದಿರಿ.


ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿಬರುವದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುತ್ತಾ ತಿರುಗಾಡುತ್ತೇವೆ.


ಆದಕಾರಣ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವದರಿಂದ ಮೇಲಿರುವವುಗಳನ್ನು ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ಅದಕ್ಕೆ ಆತನು - ಪರಲೋಕದಲ್ಲಿರುವ ನನ್ನ ತಂದೆಯು ನೆಡದೆ ಇರುವ ಗಿಡಗಳೆಲ್ಲಾ ಬೇರಿನೊಂದಿಗೆ ಕಿತ್ತುಹಾಕಲ್ಪಡುವವು.


ನಾನು ನಿನ್ನನ್ನು ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೇಯ ದ್ರಾಕ್ಷಾಲತೆಯನ್ನಾಗಿ ನೆಟ್ಟಿರಲು ನೀನು ನನಗೆ ಕಾಡುದ್ರಾಕ್ಷೇಬಳ್ಳಿಯ ಕೆಟ್ಟ ರೆಂಬೆಗಳಾದದ್ದೇನು?


ಅವನು ಅದನ್ನು ಅಗತೆಮಾಡಿ ಕಲ್ಲುಗಳನ್ನು ತೆಗೆದುಹಾಕಿ ಒಳ್ಳೊಳ್ಳೇ ದ್ರಾಕ್ಷೆಯ ಸಸಿಗಳನ್ನು ನೆಟ್ಟು ಮಧ್ಯದಲ್ಲಿ ಬುರುಜನ್ನು ಕಟ್ಟಿ ದ್ರಾಕ್ಷೆಯ ತೊಟ್ಟಿಯನ್ನು ಕೊರೆಯಿಸಿ ಮಾಡಿಕೊಂಡು ತೋಟವು [ಒಳ್ಳೇ] ದ್ರಾಕ್ಷೆಯ ಹಣ್ಣನ್ನು ಕೊಡುವದೆಂದು ಎದುರುನೋಡುತ್ತಿರಲು ಅದು ಹೊಲಸುಹಣ್ಣನ್ನು ಬಿಟ್ಟಿತು.


ಯೆಹೋವನ ಆಲಯದಲ್ಲಿ [ಸಸಿಗಳಂತೆ] ನೆಡಲ್ಪಟ್ಟವರು ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂವಿುಯಲ್ಲಿ ಬಿದ್ದು ಸಾಯದಿದ್ದರೆ ಒಂದೇಯಾಗಿ ಉಳಿಯುವದು; ಸತ್ತರೆ ಬಹಳ ಫಲಕೊಡುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು