Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:14 - ಕನ್ನಡ ಸತ್ಯವೇದವು J.V. (BSI)

14 ಧರ್ಮಶಾಸ್ತ್ರವು ಪಾರಮಾರ್ಥಿಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ ಪಾಪದ ಸ್ವಾಧೀನದಲ್ಲಿರುವದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಧರ್ಮಶಾಸ್ತ್ರವು ಆತ್ಮೀಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ದೇಹಧರ್ಮಕ್ಕೆ ಒಳಗಾದವನೂ, ಪಾಪದ ಅಧೀನದಲ್ಲಿ ಗುಲಾಮನಾಗಿರುವುದಕ್ಕೆ ಮಾರಲ್ಪಟ್ಟವನೂ ಆಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಧರ್ಮಶಾಸ್ತ್ರ ಪಾರಮಾರ್ಥಿಕವಾದುದೆಂದು ನಾವು ಬಲ್ಲೆವು. ನಾನಾದರೋ ನರಮಾನವನು; ಪಾಪಕ್ಕೆ ನನ್ನನ್ನೇ ಗುಲಾಮನನ್ನಾಗಿ ಮಾರಿಕೊಂಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಧರ್ಮಶಾಸ್ತ್ರವು ಆತ್ಮಿಕವಾದದ್ದೆಂದು ನಾವು ಬಲ್ಲೆವು. ಆದರೆ ನಾನು ಆತ್ಮಿಕನಲ್ಲ. ನಾನು ಪಾಪಕ್ಕೆ ಮಾರಲ್ಪಟ್ಟ ಗುಲಾಮನೋ ಎಂಬಂತೆ ಪಾಪವು ನನ್ನನ್ನು ಆಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಯಮವು ಆತ್ಮಿಕವಾದದ್ದೆಂದು ಬಲ್ಲೆವು. ಆದರೆ ನರಮಾನವನಾದ ನಾನು ಪಾಪಕ್ಕೆ ಗುಲಾಮನಂತೆ ಮಾರಿಕೊಂಡವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖಾಯ್ದೊ ಆತ್ಮಿಕ್ ಮನುನ್ ಅಮ್ಕಾ ಗೊತ್ತ್ ಹಾಯ್; ಖರೆ ಮಿಯಾ ಎಕ್‍ ಬುರ್ಸೊ, ಪಾಪಾಚೊ ಗುಲಾಮ್ ಕರುನ್ ಇಕಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:14
38 ತಿಳಿವುಗಳ ಹೋಲಿಕೆ  

ಹೆಂಡತಿಯಾದ ಈಜೆಬೆಲಳಿಂದ ಪ್ರೇರಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡುವದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿಕೊಟ್ಟರು; ಯೆಹೋವನ ದೃಷ್ಟಿಯಲ್ಲಿ ಕೆಟ್ಟವುಗಳಾಗಿರುವ ಕಣಿಹೇಳುವದು, ಯಂತ್ರಮಂತ್ರಗಳನ್ನು ಮಾಡುವದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ಮಾರಿಬಿಟ್ಟು ಆತನಿಗೆ ಕೋಪವನ್ನೆಬ್ಬಿಸಿದರು.


ಅಹಾಬನು ಎಲೀಯನನ್ನು ಕಂಡು ಅವನನ್ನು - ನನ್ನ ವೈರಿಯೇ, ನೀನು ನನ್ನನ್ನು ಕಂಡುಕೊಂಡಿಯಾ ಎಂದು ಕೇಳಲು ಅವನು - ಹೌದು, ಕಂಡುಕೊಂಡೆನು; ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.


ನನ್ನಲ್ಲಿ ಅಂದರೆ ನನ್ನ ಶರೀರಾಧೀನಸ್ವಭಾವದಲ್ಲಿ ಒಳ್ಳೇದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ. ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.


ಯೆಹೋವನ ಈ ಮಾತನ್ನು ಕೇಳಿರಿ, ಲಾಭಪಡೆಯದೆ ನಿಮ್ಮನ್ನು ಮಾರಿದೆನು, ಹಣತಕ್ಕೊಳ್ಳದೆ ನಿಮ್ಮನ್ನು ಬಿಡುಗಡೆ ಮಾಡುವೆನು.


ನಾನು ಕ್ರಿಸ್ತನ ಅಪ್ರಮೇಯವಾದ ಐಶ್ವರ್ಯದ ವಿಷಯವಾದ ಶುಭಸಮಾಚಾರವನ್ನು ಅನ್ಯಜನರಿಗೆ ಪ್ರಸಿದ್ಧಿಪಡಿಸುವ ಹಾಗೆಯೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಮರೆಯಾಗಿದ್ದ ಮರ್ಮವು ಪ್ರಕಟವಾಗುವ ವಿಧ ಎಂಥದೆಂದು ತಿಳಿಸುವ ಹಾಗೆಯೂ ದೇವಜನರೊಳಗೆ ಅತ್ಯಲ್ಪನಾದ ನನಗೆ ಅನುಗ್ರಹಿಸೋಣವಾಯಿತು.


ಆದರೆ ನಾನು ನಿಮಗೆ ಹೇಳುವದೇನಂದರೆ - ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾದನು.


ಆದರೆ ನಾನು ನಿಮಗೆ ಹೇಳುವದೇನಂದರೆ - ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿ ಮನುಷ್ಯನು ನ್ಯಾಯವಿಚಾರಣೆಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ - ಛೀ ನೀಚಾ ಅನ್ನುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ಮೂರ್ಖಾ ಅನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ಯೆಹೋವನು ಹೀಗನ್ನುತ್ತಾನೆ - ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ ನೋಡಿರಿ, ನಿಮ್ಮ ದೋಷಗಳ ನಿವಿುತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು; ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ.


ನನ್ನ ಪ್ರಾಣವು ಧೂಳಿನಲ್ಲಿ ಸೇರಿಹೋಗುತ್ತದೆ; ನಿನ್ನ ವಾಗ್ದಾನಕ್ಕನುಸಾರವಾಗಿ ನನ್ನನ್ನು ಉಜ್ಜೀವಿಸಮಾಡು.


ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ - ಪ್ರಭುವೇ, ತೊಂದರೆ ತೆಗೆದುಕೊಳ್ಳಬೇಡ; ನೀನು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನ್ನಲ್ಲಿಲ್ಲ.


ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು - ಸ್ವಾಮೀ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗಬೇಕು ಅಂದನು.


ಆ ಸಾಲಾ ತೀರಿಸುವದಕ್ಕೆ ಅವನಲ್ಲಿ ಏನೂ ಇಲ್ಲದ್ದರಿಂದ ಅವನ ಒಡೆಯನು ಅವನನ್ನೂ ಅವನ ಹೆಂಡತಿಮಕ್ಕಳನ್ನೂ ಅವನ ಬದುಕೆಲ್ಲವನ್ನೂ ಮಾರಿ ಅದನ್ನು ತೀರಿಸಬೇಕೆಂದು ಅಪ್ಪಣೆ ಮಾಡಿದನು.


ಆತನು ತಿರುಗಿಕೊಂಡು ಪೇತ್ರನಿಗೆ - ಸೈತಾನನೇ, ನನ್ನ ಮುಂದೆ ನಿಲ್ಲಬೇಡ, ನಡೆ, ನನಗೆ ನೀನು ವಿಘ್ನವಾಗಿದ್ದೀ; ನಿನ್ನ ಯೋಚನೆ ಮನುಷ್ಯರ ಯೋಚನೆಯೇ ಹೊರತು ದೇವರದಲ್ಲ ಎಂದು ಹೇಳಿದನು.


ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಇಸ್ರಾಯೇಲ್ಯರು ನ್ಯಾಯವಂತನನ್ನು ಬೆಳ್ಳಿಗೆ ಮಾರುತ್ತಾರೆ, ಒಂದು ಜೊತೆಕೆರದ ಸಾಲಕ್ಕಾಗಿ ದಿಕ್ಕಿಲ್ಲದವನನ್ನು ವಿಕ್ರಯಿಸುತ್ತಾರೆ;


ಆಗ ನಾನು - ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ನಾಶವಾದೆನಲ್ಲಾ; ನಾನು ಹೊಲಸು ತುಟಿಯವನು, ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು; ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡವು ಎಂದು ಕೂಗಿಕೊಳ್ಳಲು


ಇವನು ಇಥಿಯೇಲನಿಗೆ, ಇಥಿಯೇಲನಿಗೂ ಉಕ್ಕಾಲನಿಗೂ ಹೀಗೆ ಹೇಳಿದನು. ಮನುಷ್ಯರಲ್ಲಿ ನನ್ನಂಥ ಪಶುಪ್ರಾಯನು ಇಲ್ಲವಷ್ಟೆ! ಮಾನುಷವಿವೇಕವು ನನಗಿಲ್ಲ.


ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.


ಆದಕಾರಣ [ನಾನು ಆಡಿದ್ದನ್ನು] ತಿರಸ್ಕರಿಸಿ ಧೂಳಿಯಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ.


ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ನಿಮ್ಮ ಸ್ವಜನರಲ್ಲಿ ಯಾರಿಗಾದರೂ ಕೇಡಿಗೆ ಕೇಡನ್ನು ಮಾಡದೆ ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.


ಸೂರ್ಯೋದಯವಾದನಂತರ ಒಬ್ಬನು ಕಳ್ಳನನ್ನು ಹೊಡೆದು ಕೊಂದರೆ ಅದು ನರಹತ್ಯವೇ ಸರಿ.) ಅವನು ಪೂರ್ತಿಯಾಗಿ ಸಲ್ಲಿಸಬೇಕು. ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ ಅವನು ಆ ಕಳ್ಳತನ ಮಾಡಿದ್ದರಿಂದ ದಾಸನಾಗಿ ಮಾರಲ್ಪಡಬೇಕು.


ನಾನು ಇಬ್ರಿಯದೇಶಸ್ಥನು; ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನೇನೂ ತಪ್ಪಿಲ್ಲದವನಾಗಿ ಸೆರೆಯಲ್ಲಿ ಬಿದ್ದೆನು ಅಂದನು.


ವಿುದ್ಯಾನ್ಯರು ಯೋಸೇಫನನ್ನು ಐಗುಪ್ತದೇಶಕ್ಕೆ ತೆಗೆದುಕೊಂಡು ಹೋಗಿ ಫರೋಹನ ಬಳಿಯಲ್ಲಿದ್ದ ದೊಡ್ಡ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು; ಇವನು ಮೈಗಾವಲಿನವರ ದಳವಾಯಿ.


ಅವನನ್ನು ಆ ಇಷ್ಮಾಯೇಲ್ಯರಿಗೆ ಮಾರಿಬಿಡೋಣ ಬನ್ನಿ; ನಾವು ಅವನ ಮೇಲೆ ಕೈಹಾಕಬಾರದು; ಅವನು ನಮ್ಮ ಒಡಹುಟ್ಟಿದ ತಮ್ಮನಲ್ಲವೇ ಎಂದು ಹೇಳಿದನು. ಆ ಮಾತಿಗೆ ಅವನ ಅಣ್ಣಂದಿರು ಒಪ್ಪಿದರು.


ಯಾಕಂದರೆ ದೇವರ ವಾಕ್ಯವು ಸಜೀವವಾದದ್ದು, ಕಾರ್ಯಸಾಧಕವಾದದ್ದು, ಯಾವ ಇಬ್ಬಾಯಿಕತ್ತಿಗಿಂತಲೂ ಹದವಾದದ್ದು, ಪ್ರಾಣಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದು ಆಗಿದೆ.


ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಉತ್ತಮಸ್ಥಾನದಲ್ಲಿದ್ದೇವೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಬಿದ್ದವರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.


ಪಾಪಾಧೀನಸ್ವಭಾವವು ನಾಶವಾಗಿ ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿತೆಂದು ತಿಳಿದಿದ್ದೇವೆ.


ಹಾಗೆಯೇ ನಾವು ಸಹ ಬಾಲಕರಾಗಿದ್ದಾಗ ಲೋಕದವರ ಬಾಲಬೋಧೆಗೆ ಅಧೀನರಾಗಿದ್ದೆವು.


ಆದರೆ ಒಬ್ಬನ ಚರ್ಮದಲ್ಲಿ ತೊನ್ನು ಹತ್ತಿ ಯಾಜಕನು ನೋಡುವ ಎಲ್ಲಾ ಕಡೆಯಲ್ಲಿಯೂ ತಲೆ ಮೊದಲುಗೊಂಡು ಅಂಗಾಲಿನವರೆಗೂ ಹರಡಿಕೊಂಡಿದ್ದರೆ


ಆದರೆ ಆ ಮಾಂಸವು ಅದೇ ಪ್ರಕಾರವಾಗಿ ಇರದೆ ತಿರಿಗಿ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು