Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 7:25 - ಕನ್ನಡ ಸತ್ಯವೇದವು J.V. (BSI)

25 ಬಿಡಿಸುವವನು ಇದ್ದಾನೆಂಬದಕ್ಕಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ. ಹೀಗಿರಲಾಗಿ ನನ್ನಷ್ಟಕ್ಕೆ ನಾನೇ ಮನಸ್ಸಿನಿಂದ ದೇವರ ನಿಯಮಕ್ಕೆ ಆಳಾಗಿಯೂ ಶರೀರಭಾವದಿಂದ ಪಾಪವೆಂಬ ನಿಯಮಕ್ಕೆ ಆಳಾಗಿಯೂ ನಡಕೊಳ್ಳುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಮಾಡುತ್ತೇನೆ. ಹೀಗಿರಲಾಗಿ, ನಾನು ಬುದ್ಧಿಯಿಂದ ದೇವರ ನಿಯಮಕ್ಕೆ ದಾಸನಾಗಿಯೂ, ಮತ್ತೊಂದು ಕಡೆ ಶರೀರದಿಂದ ಪಾಪದ ನಿಯಮಕ್ಕೆ ಆಳಾಗಿಯೂ ನಡೆದುಕೊಳ್ಳುವವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ದೇವರೇ; ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಕೃತಜ್ಞತೆ ಸಲ್ಲಲಿ! ನನ್ನಷ್ಟಕ್ಕೆ ನಾನೇ ದೇವರ ನಿಯಮವನ್ನು ಮನಃಪೂರ್ವಕವಾಗಿ ಪಾಲಿಸಲು ಬಯಸುತ್ತೇನೆ. ನನ್ನ ಈ ದೇಹದಲ್ಲಾದರೋ ಪಾಪದ ನಿಯಮಕ್ಕೆ ಬದ್ಧನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ದೇವರು ನನ್ನನ್ನು ರಕ್ಷಿಸುವನು! ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನ ಮೂಲಕ ಆತನು ದಯಪಾಲಿಸುವ ರಕ್ಷಣೆಗಾಗಿ ಆತನಿಗೆ ಸ್ತೋತ್ರವಾಗಲಿ! ಆದ್ದರಿಂದ ನನ್ನ ಅಂತರಂಗದಲ್ಲಿ ನಾನು ದೇವರ ನಿಯಮಕ್ಕೆ ಗುಲಾಮನಾಗಿದ್ದೇನೆ. ಆದರೆ ನನ್ನ ಪಾಪಾಧೀನಸ್ವಭಾವದಲ್ಲಿ ನಾನು ಪಾಪದ ನಿಯಮಕ್ಕೆ ಗುಲಾಮನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ದೇವರಿಗೆ ಸ್ತೋತ್ರ! ಏಕೆಂದರೆ ನನ್ನಷ್ಟಕ್ಕೆ ನಾನೇ ನನ್ನ ಮನಸ್ಸಿನಲ್ಲಿ ದೇವರ ನಿಯಮಕ್ಕೆ ಗುಲಾಮನಾಗಿಯೂ ನನ್ನ ಮಾಂಸಭಾವದ ದೇಹದಲ್ಲಿ ಪಾಪದ ನಿಯಮಕ್ಕೆ ಗುಲಾಮನಾಗಿಯೂ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಧನಿಯಾ ಜೆಜು ಕ್ರಿಸ್ತಾಚ್ಯಾ ವೈನಾ ಅಮ್ಚ್ಯಾ ದೆವಾಕ್ ಧನ್ಯವಾದ್ ಹೊಂವ್ದಿತ್! ತಸೆ ಹೊಲ್ಯಾರ್ ಮಾಜಿ ಪರಿಸ್ಥಿತಿ ಕಶಿ ಕಾಯ್ ಮಟ್ಲ್ಯಾರ್: ಮಿಯಾ ಮಾಜ್ಯಾ ಬಳಾನ್ ಖಾಲಿ ಮನಾತ್ ಎವ್ಡೆಚ್ ದೆವಾಚ್ಯಾ ಖಾಯ್ದ್ಯಾಚಿ ಸೆವಾ ಕರ್‍ತಾ ಅನಿ ಎಕಾಕ್ಡೆ ಮಾಜೊ ಮಾನುಸ್ಪಾನಾಚೊ ಸ್ವಬಾವ್ ಪಾಪಾಚಿ ಸೆವಾ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 7:25
20 ತಿಳಿವುಗಳ ಹೋಲಿಕೆ  

ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ.


ಆಕಾಶವೇ, ಹರ್ಷಧ್ವನಿಗೈ! ಭೂವಿುಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಕೋಲಾಹಲಮಾಡಿರಿ! ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುತ್ತಿದ್ದಾನೆ.


ಆದರೆ ದೇವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಟ್ಟಿದ್ದಾನೆ; ಆತನಿಗೆ ಸ್ತೋತ್ರ.


ಆದರೆ ನೀವು ಮುಂಚೆ ಪಾಪಕ್ಕೆ ದಾಸರಾಗಿದ್ದರೂ ನಿಮಗೆ ಕಲಿಸಲ್ಪಟ್ಟ ಬೋಧನೆಗೆ ನೀವು ಮನಃಪೂರ್ವಕವಾಗಿ ಅಧೀನರಾದದರಿಂದಲೂ


ಯಾಕಂದರೆ ಪಾಪವು ನಿಮ್ಮ ಮೇಲೆ ಅಧಿಕಾರನಡಿಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಷ್ಟೆ.


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ನಿಜವಾದ ಸುನ್ನತಿಯವರು ಯಾರಂದರೆ - ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವೇ.


ವರ್ಣಿಸಲಶಕ್ಯವಾದ ದೇವರ ವರಕ್ಕಾಗಿ ಆತನಿಗೆ ಸ್ತೋತ್ರ.


ಆಕೆಯು ಒಬ್ಬ ಮಗನನ್ನು ಹಡೆಯುವಳು; ನೀನು ಆತನಿಗೆ ಯೇಸು ಎಂದು ಹೆಸರಿಡಬೇಕು; ಯಾಕಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ಕಾಯುವನು ಅಂದನು.


ಹೊರಟುಹೋಗಿರಿ, ಕತ್ತಲಲ್ಲಿರುವವರಿಗೆ - ಬೆಳಕಿಗೆ ಹೊರಡಿರಿ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವಾಸ್ತ್ಯಗಳನ್ನು ಅವರಿಗೆ ಹಂಚಿ ದೇಶವನ್ನು ಜೀರ್ಣೋದ್ಧಾರಮಾಡುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಅದಕ್ಕೆ ಹುಲ್ಲುಗಾವಲಾಗುವವು.


ಆ ದಿನದಲ್ಲಿ ನೀನು ಹೇಳುವದೇನಂದರೆ - ಯೆಹೋವನೇ, ನಾನು ನಿನಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀನು ನನ್ನ ಮೇಲೆ ಕೋಪಗೊಂಡಿದ್ದರೂ ಆ ನಿನ್ನ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀಯಲ್ಲವೆ.


ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯಪಡಿಸಿರಿ.


ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಕ್ರಿಸ್ತನಿಗೆ ಭಯಪಡುವವರಾಗಿದ್ದು


ಯಾಕಂದರೆ ಜೀವವನ್ನುಂಟುಮಾಡುವ ಪವಿತ್ರಾತ್ಮನಿಂದಾದ ನಿಯಮವು ನಿನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ಕ್ರಿಸ್ತ ಯೇಸುವಿನ ಮೂಲಕ ಬಿಡಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು