Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:18 - ಕನ್ನಡ ಸತ್ಯವೇದವು J.V. (BSI)

18 ನಮಗೋಸ್ಕರ ಮುಂದಿನ ಕಾಲದಲ್ಲಿ ಪ್ರತ್ಯಕ್ಷವಾಗುವ ಮಹಿಮಪದವಿಯನ್ನು ಆಲೋಚಿಸಿ ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಮಗೋಸ್ಕರ ಮುಂದಿನ ಕಾಲದಲ್ಲಿ ಪ್ರತ್ಯಕ್ಷವಾಗುವ ಮಹಿಮಾಪದವಿಯನ್ನು ಆಲೋಚಿಸಿದರೆ ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಂದಿನ ಕಾಲದಲ್ಲಿ ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಮುಂದೆ ನಮಗೆ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಹೋಲಿಸುವುದಕ್ಕೂ ಬಾರದವುಗಳೆಂದು ನಾನು ಎಣಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಈಗ ನಾವು ಕಷ್ಟಸಂಕಟಗಳನ್ನು ಸಹಿಸಿಕೊಳ್ಳುತ್ತೇವೆ. ಆದರೆ ನಮಗೆ ಮುಂದೆ ಕೊಡಲ್ಪಡುವ ಮಹಿಮೆಗೆ ಈ ಕಷ್ಟಸಂಕಟಗಳನ್ನು ಹೋಲಿಸಿದರೆ ಇವು ಗಣನೆಗೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಮಗೆ ಮುಂದೆ ಪ್ರಕಟವಾಗಲಿರುವ ಮಹಿಮೆಯೊಂದಿಗೆ ಹೋಲಿಸುವಾಗ ಈಗಿನ ಸಂಕಟಗಳು ಅಲ್ಪವೆಂದು ನಾನು ಎಣಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಫಿಡೆ ಅಮ್ಚ್ಯಾಸಾಟ್ನಿ ಮನುನ್ ಯೆತಲ್ಯಾ ಮಹಿಮೆಚ್ಯಾ ವಿಶಯಾತ್ ಚಿಂತುನ್ ಬಗಟ್ಲ್ಯಾರ್, ಅತ್ತಾ ಅಮಿ ಸೊಸ್ತಲೊ ಹ್ಯೊ ಕಸ್ಟ್ ಕಾಯ್ಬಿ ನ್ಹಯ್ ಮನ್ತಾ ಮಿಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:18
15 ತಿಳಿವುಗಳ ಹೋಲಿಕೆ  

ಆದರೆ ನೀವು ಎಷ್ಟರ ಮಟ್ಟಿಗೂ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷವುಳ್ಳವರಾಗಿರ್ರಿ; ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ.


ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷರಾಗುವಿರಿ.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವದೇ ವಿಶೇಷವೆಂದು ನಾನು ಎಣಿಸುವದಿಲ್ಲ. ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಪ್ರಕಟಿಸಬೇಕೆಂಬದಾಗಿ ಕರ್ತನಾದ ಯೇಸುವಿನಿಂದ ನಾನು ಹೊಂದಿರುವ ಸೇವೆಯೆಂಬ ಓಟವನ್ನು ಕಡೆಗಾಣಿಸುವದೊಂದೇ ನನ್ನ ಅಪೇಕ್ಷೆ.


ಪ್ರಿಯರೇ, ಈಗ ದೇವರ ಮಕ್ಕಳಾಗಿದ್ದೇವೆ; ಮುಂದೆ ನಾವು ಏನಾಗುವೆವೋ ಅದು ಇನ್ನು ಪ್ರತ್ಯಕ್ಷವಾಗಲಿಲ್ಲ. ಕ್ರಿಸ್ತನು ಪ್ರತ್ಯಕ್ಷನಾಕುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು;


ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಭಾಗ್ಯದ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ನೀವು ಹೀಗೆ ರಕ್ಷಿಸಲ್ಪಟ್ಟು ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಕರೆದನು.


ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ ಇನ್ನು ಮುಂದೆ ಪ್ರತ್ಯಕ್ಷವಾಗುವ ಪ್ರಭಾವದಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಎಚ್ಚರಿಸಿ ಹೇಳುವದೇನಂದರೆ -


ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಪುನರುತ್ಥಾನದಿಂದ ತಿರಿಗಿ ಹೊಂದಿದರು. ಕೆಲವರು ತಾವು ಯಾತನೆಯ ಯಂತ್ರಕ್ಕೆ ಕಟ್ಟಲ್ಪಟ್ಟಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿ ಮುರಿಸಿಕೊಂಡು ಸತ್ತರು.


ದೇವಪುತ್ರರ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಜಗತ್ತು ಬಹು ಲವಲವಿಕೆಯಿಂದ ಎದುರುನೋಡುತ್ತಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು