Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:19 - ಕನ್ನಡ ಸತ್ಯವೇದವು J.V. (BSI)

19 ದೇವಪುತ್ರರ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಜಗತ್ತು ಬಹು ಲವಲವಿಕೆಯಿಂದ ಎದುರುನೋಡುತ್ತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೋ ಎಂದು ಸೃಷ್ಟಿಸಮಸ್ತವು ಬಹು ಉತ್ಸುಕತೆಯಿಂದ ಎದುರು ನೋಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರು ತನ್ನ ಮಕ್ಕಳನ್ನು ಪ್ರತ್ಯಕ್ಷಪಡಿಸುವ ಕಾಲಕ್ಕಾಗಿ ದೇವರ ಸರ್ವಸೃಷ್ಟಿಯು ಉತ್ಸುಕತೆಯಿಂದ ಎದುರು ನೋಡುತ್ತಿದೆ. ಅದು ಸಂಭವಿಸಲೆಂದು ಇಡೀ ಜಗತ್ತೇ ಹಂಬಲಿಸುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದೇವರ ಮಕ್ಕಳ ಪ್ರತ್ಯಕ್ಷತೆಯನ್ನು ಸೃಷ್ಟಿಯು ಆತುರದಿಂದ ಎದುರು ನೋಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅಪ್ನಾಚ್ಯಾ ಪೊರಾಂಚಿ ಮಹಿಮಾ ದೆವ್ ಕನ್ನಾ ದಾಕ್ವುನ್ ದಿತಾ ಮನುನ್ ಬಗುಕ್ ಸಗ್ಳಿ ಸೃಸ್ಟಿ ಉಮ್ಮೆದಿನ್ ವಾಟ್ ಬಗುನ್ಗೆತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:19
26 ತಿಳಿವುಗಳ ಹೋಲಿಕೆ  

ಪ್ರಿಯರೇ, ಈಗ ದೇವರ ಮಕ್ಕಳಾಗಿದ್ದೇವೆ; ಮುಂದೆ ನಾವು ಏನಾಗುವೆವೋ ಅದು ಇನ್ನು ಪ್ರತ್ಯಕ್ಷವಾಗಲಿಲ್ಲ. ಕ್ರಿಸ್ತನು ಪ್ರತ್ಯಕ್ಷನಾಕುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು;


ಇದು ಮಾತ್ರವಲ್ಲದೆ ಪ್ರಥಮ ಫಲವಾಗಿರುವ ಪವಿತ್ರಾತ್ಮವರವನ್ನು ಹೊಂದಿದ ನಾವಾದರೂ ದೇವಪುತ್ರರ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತೇವೆ.


ಹೇಗಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯದೆ; ಹಾಗೆಯೇ ಆಗುವದೆಂದು ಭರವಸವುಂಟು.


ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಆ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಹೇಳಿಸಿದ್ದಾನೆ.


ಇಗೋ, ನೂತನಾಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಸೃಷ್ಟಿಸುವೆನು; ಮೊದಲಿದ್ದದ್ದನ್ನು ಯಾರೂ ಜ್ಞಾಪಿಸಿಕೊಳ್ಳರು, ಅದು ನೆನಪಿಗೆಬಾರದು.


ಇಸ್ರಾಯೇಲ್ಯರ ಸಂಖ್ಯೆಯು ಅಳೆಯುವದಕ್ಕೂ ಲೆಕ್ಕಿಸುವದಕ್ಕೂ ಅಸಾಧ್ಯವಾದ ಸಮುದ್ರತೀರದ ಉಸುಬಿನಂತಾಗುವದು; ಆಗ ಅವರು ನನ್ನ ಪ್ರಜೆಯಲ್ಲದವರು ಎನಿಸಿಕೊಳ್ಳುವದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ಸಮಾಧಾನ ಪಡಿಸುವವರು ಧನ್ಯರು; ಅವರು ದೇವರ ಮಕ್ಕಳು ಅನ್ನಿಸಿಕೊಳ್ಳುವರು.


ಯಾರಾರು ಆತನನ್ನು ಅಂಗೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ, ಅವರಿಗೆ ದೇವರ ಮಕ್ಕಳಾಗುವ ಅಧಿಕಾರ ಕೊಟ್ಟನು.


ಯಾರಾರು ದೇವರ ಆತ್ಮನಿಂದ ನಡಿಸಿಕೊಳ್ಳುತ್ತಾರೋ ಅವರು ದೇವರ ಮಕ್ಕಳು.


ನಾವು ದೇವರ ಮಕ್ಕಳಾಗಿದ್ದೇವೆಂಬದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.


ನಮಗೋಸ್ಕರ ಮುಂದಿನ ಕಾಲದಲ್ಲಿ ಪ್ರತ್ಯಕ್ಷವಾಗುವ ಮಹಿಮಪದವಿಯನ್ನು ಆಲೋಚಿಸಿ ಈಗಿನ ಕಾಲದ ಕಷ್ಟಗಳು ಅಲ್ಪವೇ ಸರಿ ಎಂದು ಎಣಿಸುತ್ತೇನೆ.


ಮತ್ತು ಯಾವ ಸ್ಥಳದಲ್ಲಿ - ನೀವು ನನ್ನ ಜನರಲ್ಲವೆಂದು ಅವರಿಗೆ ಹೇಳಲ್ಪಟ್ಟಿತೋ ಆ ಸ್ಥಳದಲ್ಲಿಯೇ ಅವರು ಜೀವವುಳ್ಳ ದೇವರ ಪುತ್ರರು ಎನಿಸಿಕೊಳ್ಳುವರು ಎಂಬದು.


ಹೀಗೆ ನೀವು ಯಾವ ಕೃಪಾವರದಲ್ಲಿಯೂ ಕೊರತೆಯಿಲ್ಲದವರಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇದ್ದೀರಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪು ಹೊರಿಸಲಾಗದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.


ಇದಲ್ಲದೆ - ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರಿಯರು ಆಗಿರುವಿರೆಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.


ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಪುತ್ರರಾಗಿದ್ದೀರಿ.


ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷರಾಗುವಿರಿ.


ಇನ್ನೊಂದೇ ಸಾರಿ ಎಂಬೀ ಮಾತನ್ನು ಯೋಚಿಸಿದರೆ ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡಬೇಕೆಂಬದು ಸ್ಪಷ್ಟವಾಗುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.


ಬಂಗಾರವು ನಾಶವಾಗುವಂಥದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟಾಹಾಕಿ ಶೋಧಿಸುವದುಂಟಷ್ಟೆ. ಬಂಗಾರಕ್ಕಿಂತ ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವ ಮಾನಗಳನ್ನು ಉಂಟುಮಾಡುವದು.


ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಭಾಗ್ಯದ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ದೇವರ ಮಕ್ಕಳೆಂಬ ಹೆಸರನ್ನು ನಮಗೆ ಕೊಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನೆ ನೋಡಿರಿ; ನಾವು ಆತನ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವದಿಲ್ಲ, ಅದು ಆತನನ್ನು ತಿಳಿದುಕೊಳ್ಳಲಿಲ್ಲವಲ್ಲಾ.


ಜಯಹೊಂದುವವನು ಇವುಗಳಿಗೆ ಬಾಧ್ಯನಾಗುವನು; ನಾನು ಅವನಿಗೆ ದೇವರಾಗಿರುವೆನು, ಅವನು ನನಗೆ ಮಗನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು