Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:2 - ಕನ್ನಡ ಸತ್ಯವೇದವು J.V. (BSI)

2 ಯಾಕಂದರೆ ಜೀವವನ್ನುಂಟುಮಾಡುವ ಪವಿತ್ರಾತ್ಮನಿಂದಾದ ನಿಯಮವು ನಿನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ಕ್ರಿಸ್ತ ಯೇಸುವಿನ ಮೂಲಕ ಬಿಡಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನಗೆ ಅಪರಾಧಿಯೆಂದು ತೀರ್ಪಾಗದಿರುವುದೇಕೆ? ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವ ಜನರಿಗೆ ಜೀವವನ್ನು ತರುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪ ಮತ್ತು ಮರಣಗಳನ್ನು ತರುವ ನಿಯಮದಿಂದ ಬಿಡುಗಡೆ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕಶ್ಯಾಕ್ ಮಟ್ಲ್ಯಾರ್ ಜೆಜು ಕ್ರಿಸ್ತಾಚ್ಯಾ ಎಕ್ವಟ್ಟಾತ್ ರ್‍ಹಾವ್ನ್ ಅಮ್ಕಾ ಜಿವ್ ದಿತಲ್ಯಾ ಪವಿತ್ರ್ ಆತ್ಮ್ಯಾಚ್ಯಾ ಖಾಯ್ದ್ಯಾನ್, ಪಾಪಾಚ್ಯಾ ಅನಿ ಮರ್‍ನಾಚ್ಯಾ ಖಾಯ್ದ್ಯಾತ್ನಾ ಮಾಕಾ ಸ್ವತಂತ್ರ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:2
29 ತಿಳಿವುಗಳ ಹೋಲಿಕೆ  

ಯಾಕಂದರೆ ಪಾಪವು ನಿಮ್ಮ ಮೇಲೆ ಅಧಿಕಾರನಡಿಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಷ್ಟೆ.


ಆ ಕರ್ತನು ದೇವರಾತ್ಮನೇ; ಕರ್ತನ ಆತ್ಮನು ಯಾರಲ್ಲಿದ್ದಾನೋ ಅವರಿಗೆ ಬಿಡುಗಡೆ ಉಂಟು.


ಪಾಪದಿಂದ ಬಿಡುಗಡೆಯನ್ನು ಹೊಂದಿ ನೀತಿಗೆ ದಾಸರಾದದರಿಂದಲೂ ದೇವರಿಗೆ ಸ್ತೋತ್ರವಾಗಲಿ.


ಆತನು ಹೊಸ ಒಡಂಬಡಿಕೆಗೆ ಸೇವಕರಾಗಿರುವ ಸಾಮರ್ಥ್ಯವನ್ನು ನಮಗೆ ಅನುಗ್ರಹಿಸಿದ್ದಾನೆ. ಈ ಒಡಂಬಡಿಕೆಯು ಲಿಖಿತ ರೂಪವಾದದ್ದಾಗಿರದೆ ದೇವರಾತ್ಮ ಸಂಬಂಧವಾದದ್ದು ಆಗಿದೆ. ಲಿಖಿತರೂಪವಾದ ಒಡಂಬಡಿಕೆಯು ಮರಣವನ್ನುಂಟುಮಾಡುತ್ತದೆ; ದೇವರಾತ್ಮ ಸಂಬಂಧವಾದದ್ದು ಜೀವವನ್ನುಂಟುಮಾಡುತ್ತದೆ.


ಮೊದಲನೆಯ ಮನುಷ್ಯನಾದ ಆದಾಮನು ಬದುಕುವ ಪ್ರಾಣಿಯಾದನೆಂದು ಬರೆದದೆಯಲ್ಲಾ. ಕಡೇ ಆದಾಮನೋ ಬದುಕಿಸುವ ಆತ್ಮನು.


ಆದದರಿಂದ ಮಗನು ನಿಮ್ಮನ್ನು ಬಿಡುಗಡೆಮಾಡಿದರೆ ನಿಜವಾಗಿ ನಿಮಗೆ ಬಿಡುಗಡೆಯಾಗುವದು.


ಮತ್ತು ಸತ್ಯವು ನಿಮ್ಮನ್ನು ಬಿಡುಗಡೆಮಾಡುವದು ಎಂದು ಹೇಳಿದನು.


ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತಿರಿ. ದೇವರಿಗೆ ಫಲವಾಗುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.


ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧರಾಗುವದೇ ನಿಮಗೆ ಫಲ; ಕಡೆಗೆ ದೊರೆಯುವಂಥದು ನಿತ್ಯಜೀವ.


ಬದುಕಿಸುವಂಥದು ಆತ್ಮವೇ; ಮಾಂಸವು ಯಾವದಕ್ಕೂ ಬರುವದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಅವೆ.


ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ; ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ಒರತೆಯಾಗಿದ್ದು ನಿತ್ಯಜೀವವನ್ನು ಉಂಟುಮಾಡುವದು ಎಂದು ಹೇಳಿದನು.


ಅದಕ್ಕೆ ಯೇಸು - ದೇವರು ಕೊಡುವ ವರವೇನೆಂಬದೂ ಕುಡಿಯುವದಕ್ಕೆ ನೀರುಕೊಡು ಎಂದು ನಿನಗೆ ಹೇಳಿದವನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಅವನನ್ನು ಬೇಡಿಕೊಳ್ಳುತ್ತಿದ್ದಿ, ಅವನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಅಂದನು.


ಕ್ರಿಸ್ತನು ನಮ್ಮನ್ನು ಸ್ವತಂತ್ರದಲ್ಲಿರಿಸಬೇಕೆಂದು ನಮಗೆ ಬಿಡುಗಡೆಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.


ನಾನಂತೂ ದೇವರಿಗಾಗಿ ಜೀವಿಸುವದಕ್ಕೋಸ್ಕರ ಧರ್ಮಪ್ರಮಾಣದ ಮೂಲಕವಾಗಿ ಧರ್ಮಪ್ರಮಾಣದ ಪಾಲಿಗೆ ಸತ್ತೆನು.


ಹೀಗೆ ಪಾಪವು ಮರಣವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸಿದ ಹಾಗೆಯೇ ದೇವರ ಕೃಪೆಯು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನೀತಿಯನ್ನು ಕೊಟ್ಟು ನಿತ್ಯಜೀವವನ್ನುಂಟುಮಾಡುತ್ತಾ ಅಧಿಕಾರವನ್ನು ನಡಿಸುವದು.


ಹೀಗಿರಲಾಗಿ ಒಳ್ಳೇದನ್ನು ಮಾಡಬೇಕೆಂದಿರುವ ನನಗೆ ಕೆಟ್ಟದ್ದೇ ಸಿದ್ಧವಾಗಿದೆಯೆಂಬ ನಿಯಮ ನನಗೆ ಕಾಣಬರುತ್ತದೆ.


ನಿನ್ನ ರಕ್ಷಣಾನಂದವನ್ನು ನಾನು ತಿರಿಗಿ ಅನುಭವಿಸುವಂತೆ ಮಾಡು; ನನ್ನಲ್ಲಿ ಸಿದ್ಧಮನಸ್ಸನ್ನು ಹುಟ್ಟಿಸಿ ನನಗೆ ಆಧಾರನಾಗು.


ಆಮೇಲೆ ಅವನು ಸ್ಫಟಿಕದಂತೆ ಪ್ರಕಾಶಮಾನವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಯಾದಾತನ ಸಿಂಹಾಸನದಿಂದ ಹೊರಟು ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು.


ಹಾಗಾದರೆ ಹೊಗಳಿಕೊಳ್ಳುವದಕ್ಕೆ ಆಸ್ಪದವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಪ್ರಮಾಣದಿಂದ? ಕರ್ಮಮಾರ್ಗವನ್ನು ಅನುಸರಿಸುವದರಿಂದಲೋ? ಅಲ್ಲ; ವಿಶ್ವಾಸ ಮಾರ್ಗವನ್ನು ಅನುಸರಿಸುವದರಿಂದಲೇ.


ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಹೊಗಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.


ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದಾಗಿದೆ.


ಆದದರಿಂದ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ಅಪರಾಧನಿರ್ಣಯವು ಈಗ ಇಲ್ಲವೇ ಇಲ್ಲ.


ಕ್ರಿಸ್ತ ಯೇಸುವಿನ ಸೇವೆಯಲ್ಲಿ ನನ್ನ ಜೊತೆಕೆಲಸದವರಾದ ಪ್ರಿಸ್ಕಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ಹೇಳಿರಿ.


ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.


ಆದರೆ ಬಿಡುಗಡೆಯನ್ನುಂಟುಮಾಡುವ ಸರ್ವೋತ್ತಮ ಧರ್ಮಪ್ರಮಾಣವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು ವಾಕ್ಯವನ್ನು ಕೇಳಿ ಮರೆತು ಹೋಗುವವನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ನಡತೆಯಿಂದ ಧನ್ಯನಾಗುವನು.


ಅವು ಮುಂದರಿಯುವಾಗ ಇವೂ ಮುಂದರಿಯುತ್ತಿದ್ದವು, ಅವು ನಿಂತುಹೋಗುವಾಗ ಇವೂ ನಿಂತುಹೋಗುತ್ತಿದ್ದವು, ಅವು ನೆಲದಿಂದ ಮೇಲಕ್ಕೆ ಏಳುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು; ಏಕಂದರೆ ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು