Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:22 - ಕನ್ನಡ ಸತ್ಯವೇದವು J.V. (BSI)

22 ಜಗತ್ತೆಲ್ಲಾ ಇಂದಿನವರೆಗೂ ನರಳುತ್ತಾ ಪ್ರಸವ ವೇದನೆಪಡುತ್ತಾ ಇರುತ್ತದೆಂದು ನಾವು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸೃಷ್ಟಿಯೆಲ್ಲಾ ಇಂದಿನವರೆಗೂ ನರಳುತ್ತಾ, ಪ್ರಸವ ವೇದನೆಪಡುತ್ತಾ ಇದೆಯೆಂದು ನಾವು ಬಲ್ಲೆವು. ಇದು ಮಾತ್ರವಲ್ಲದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸೃಷ್ಟಿಸಮಸ್ತವು ಇಂದಿನವರೆಗೆ ನರಳುತ್ತಾ ಪ್ರಸವವೇದನೆಪಡುತ್ತಾ ಇದೆ ಎಂಬುದು ನಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರು ಸೃಷ್ಟಿಮಾಡಿದ ಪ್ರತಿಯೊಂದೂ, ಪ್ರಸವವೇದನೆ ಪಡುತ್ತಿರುವ ಸ್ತ್ರೀಯಂತೆ ನೋವಿನಿಂದ ನರಳುತ್ತಾ ಇಂದಿನವರೆಗೂ ಕಾಯುತ್ತಿದೆ ಎಂಬುದು ನಮಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಈವರೆಗೂ ಸೃಷ್ಟಿಯೆಲ್ಲ ಪ್ರಸವ ವೇದನೆಯಂಥ ನೋವಿನಿಂದ ನರಳುತ್ತಿದೆ ಎಂದು ನಾವು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಕಶ್ಯಾಕ್ ಮಟ್ಲ್ಯಾರ್ ಬಾನತ್‍ಪಾನಾಚ್ಯಾ ಅದ್ದಿ ಯೆತಲ್ಯಾ ಯೆನಾಂಚ್ಯಾ ಸರ್ಕೆ ಸಗ್ಳಿ ರಚ್ನಾ ಅಪ್ನಾಚ್ಯಾ ಹರಿ ಎಕ್ ರಚ್ನೆಚ್ಯಾ ವಾಂಗ್ಡಾ ಅಜುನ್ ಪತರ್ ತರಾಸಾಚೆ ಉಸ್ಕಾರೆ ಸೊಡುನ್‍ಗೆತ್ ಹಾಯ್. ಮನುನ್ ಅಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:22
9 ತಿಳಿವುಗಳ ಹೋಲಿಕೆ  

ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವದರಿಂದ ಮೃಗಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವದೇ ಇಲ್ಲ ಎಂದು ಹೇಳಿದ್ದಾರಷ್ಟೆ.


ಹೌದು, ಹಾಳು ಮಾಡಿದ್ದಾರೆ, ಅದು ಹಾಳಾಗಿ ನನಗೆ ಗೋಳಿಡುತ್ತದೆ; ಯಾವನೂ ಮನಸ್ಸಿಗೆ ತಾರದ್ದರಿಂದ ದೇಶವೆಲ್ಲಾ ಹಾಳುಬಿದ್ದಿದೆ.


ಒಬ್ಬ ಸ್ತ್ರೀ ಹೆರುವಾಗ ತನ್ನ ಬೇನೆಯ ಕಾಲ ಬಂತೆಂದು ಆಕೆಗೆ ದುಃಖವಾಗುತ್ತದೆ; ಆದರೆ ಕೂಸನ್ನು ಹೆತ್ತ ಮೇಲೆ ಲೋಕದಲ್ಲಿ ಒಬ್ಬ ಮನುಷ್ಯನು ಹುಟ್ಟಿದನೆಂಬ ಆನಂದದಿಂದ ಆ ಬೇನೆಯನ್ನು ನೆನಸುವದಿಲ್ಲ.


ಜಗತ್ತು ವ್ಯರ್ಥತ್ವಕ್ಕೆ ಒಳಗಾಯಿತು; ಹೀಗೆ ಒಳಗಾದದ್ದು ಸ್ವೇಚ್ಫೆಯಿಂದಲ್ಲ, ಅದನ್ನು ಒಳಪಡಿಸಿದವನ ಸಂಕಲ್ಪದಿಂದಲೇ.


ನೀವು ಕೇಳಿದಂಥ ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರುವದಾದರೆ ಆ ಪದವಿ ನಿಮಗೆ ಪ್ರಾಪ್ತವಾಗುವದು.


ಆಕೆಯು ಗರ್ಭಿಣಿಯಾಗಿದ್ದು ಪ್ರಸವವೇದನೆಯಿಂದ ಸಂಕಟಪಡುತ್ತಾ ಕೂಗುತ್ತಿದ್ದಳು. ಪರಲೋಕದಲ್ಲಿ ಮತ್ತೊಂದು ಲಕ್ಷಣವು ಕಾಣಿಸಿತು.


ಆಮೇಲೆ ಅವರಿಗೆ - ನೀವು ಲೋಕದ ಎಲ್ಲಾ ಕಡೆಗೆ ಹೋಗಿ ಜಗತ್ತಿಗೆಲ್ಲಾ ಸುವಾರ್ತೆಯನ್ನು ಸಾರಿರಿ.


ಕಂಪನವೂ ಹೆರುವವಳಂತೆ ವೇದನೆಯೂ ಅವರಿಗುಂಟಾಯಿತು.


ನೀವು ಅದರಲ್ಲಿ ವಾಸವಾಗಿದ್ದಾಗ ಅದಕ್ಕೆ ತಕ್ಕ ಕಾಲದಲ್ಲಿ ದೊರೆಯದ ವಿಶ್ರಾಂತಿಯನ್ನು, ಅದು ಹಾಳುಬಿದ್ದಿರುವ ಎಲ್ಲಾ ದಿವಸಗಳಲ್ಲಿ ಅನುಭವಿಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು