Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:25 - ಕನ್ನಡ ಸತ್ಯವೇದವು J.V. (BSI)

25 ಆದರೆ ಕಾಣದಿರುವದನ್ನು ನಾವು ಎದುರುನೋಡುವವರಾಗಿದ್ದರೆ ತಾಳ್ಮೆಯಿಂದ ಕಾದುಕೊಂಡಿರುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೆ ಕಾಣದಿರುವುದನ್ನು ನಾವು ಎದುರುನೋಡುವವರಾಗಿರುವುದರಿಂದ ತಾಳ್ಮೆಯಿಂದ ಕಾದುಕೊಂಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಪ್ರತ್ಯಕ್ಷವಾಗದೆ ಇರುವುದನ್ನು ನಾವು ನಿರೀಕ್ಷಿಸುವವರಾಗಿದ್ದರೆ, ಅದಕ್ಕಾಗಿ ತಾಳ್ಮೆಯಿಂದ ಕಾದುಕೊಂಡಿರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದರೆ ನಾವಿನ್ನೂ ಹೊಂದಿಕೊಂಡಿಲ್ಲದೆ ಇರುವುದನ್ನು ನಿರೀಕ್ಷಿಸುತ್ತಾ ತಾಳ್ಮೆಯಿಂದ ಅದಕ್ಕಾಗಿ ಕಾಯುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದರೆ ನಾವು ಇನ್ನು ಕಾಣದಿರುವಂಥದ್ದಕ್ಕಾಗಿ ನಿರೀಕ್ಷಿಸುವುದಾದರೆ ಅದಕ್ಕಾಗಿ ತಾಳ್ಮೆಯಿಂದ ಕಾದುಕೊಂಡಿರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಖರೆ ಡೊಳ್ಯಾನಿ ದಿಸ್ತಲ್ಯಾ ವರ್‍ತಿ ನ್ಹಯ್, ಅಮಿ ದಿಸಿನಸಲ್ಲ್ಯಾಚ್ಯಾ ವರ್‍ತಿ ಬರೊಸೊ ಥವ್ನ್ ಹಾಂವ್ ಜಾಲ್ಯಾರ್ ಲೈ ಸಂಬಾಳುನ್ ಘೆವ್ನ್ ತೆಚಿ ಅಮಿ ವಾಟ್ ಬಗುನ್ಗೆತ್ ಹಾಂವ್ ಮನುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:25
26 ತಿಳಿವುಗಳ ಹೋಲಿಕೆ  

ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರ್ರಿ. ಉಪದ್ರವದಲ್ಲಿ ಸೈರಣೆಯುಳ್ಳವರಾಗಿರ್ರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.


ದೇವರ ಚಿತ್ತವನ್ನು ನೆರವೇರಿಸಿ ವಾಗ್ದಾನದ ಫಲವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಬೇಕು.


ಯೆಹೋವನನ್ನು ನಿರೀಕ್ಷಿಸಿಕೊಂಡಿರು; ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.


ಆತನ ಮಹಿಮಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷ್ಠರಾಗಿ ಆನಂದಪೂರ್ವಕವಾದ ತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಯಾವಾಗಲೂ ತೋರಿಸುವವರಾಗಿರಬೇಕೆಂತಲೂ


ನಿಮ್ಮ ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡಕೊಳ್ಳುವಿರಿ.


ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯು ಯಾವಾಗ ಆಗುವದೋ ಎಂದು ನಿರೀಕ್ಷಿಸಿಕೊಂಡಿದ್ದೇನೆ.


ದೇವರ ಪ್ರೀತಿಯಲ್ಲಿಯೂ ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡಿಸಲಿ.


ಆ ದಿನದಲ್ಲಿ ಜನರು - ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನೇ ಯೆಹೋವನು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ, ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು ಎಂದು ಹೇಳಿಕೊಳ್ಳುವರು.


ಇದು ಮಾತ್ರವಲ್ಲದೆ ಪ್ರಥಮ ಫಲವಾಗಿರುವ ಪವಿತ್ರಾತ್ಮವರವನ್ನು ಹೊಂದಿದ ನಾವಾದರೂ ದೇವಪುತ್ರರ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತೇವೆ.


ನಿಮ್ಮ ಸಹೋದರನೂ ಯೇಸುವಿನ ನಿವಿುತ್ತ ಹಿಂಸೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ದ್ವೀಪದಲ್ಲಿದ್ದೆನು.


ನೀವು ಮಂದಮತಿಗಳಾಗಿರದೆ ಯಾರು ವಾಗ್ದಾನಗಳನ್ನು ನಂಬಿ ಅವುಗಳ ಫಲಕ್ಕೋಸ್ಕರ ಬಹು ದಿವಸಗಳವರೆಗೂ ಕಾದಿದ್ದು ಆ ಫಲವನ್ನು ಹೊಂದುತ್ತಾರೋ ಅವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.


ಯಾರು ಪ್ರಭಾವ ಮಾನ ನಿರ್ಲಯತ್ವಗಳನ್ನು ಹೊಂದಬೇಕೆಂದು ಒಳ್ಳೇದನ್ನು ಬೇಸರಗೊಳ್ಳದೆ ಮಾಡುತ್ತಾರೋ ಅವರಿಗೆ ನಿತ್ಯಜೀವವನ್ನು ಕೊಡುವನು.


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ಒಳ್ಳೆಯ ಹೃದಯದಲ್ಲಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ; ಇವರೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವವರು.


ಹೌದು, ಯೆಹೋವನೇ, ನಿನ್ನ ನ್ಯಾಯಕಾರ್ಯಗಳು ತೋರತಕ್ಕ ಮಾರ್ಗದಲ್ಲಿ ನಿನ್ನನ್ನು ಕಾದುಕೊಂಡಿದ್ದೇವೆ; ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಕೇವಲ ಇಷ್ಟವಾಗಿದೆ.


ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವದು. ನನ್ನ ರಕ್ಷಣೆಯು ಆತನಿಂದಲೇ.


ಇದರಲ್ಲಿ ದೇವರ ಆಜ್ಞೆಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ತೋರಿಬರುತ್ತದೆ.


ಆ ವಾಗ್ದಾನದ ಫಲಕ್ಕೋಸ್ಕರ ಅಬ್ರಹಾಮನು ಬಹು ದಿವಸ ಕಾದುಕೊಂಡಿದ್ದು ಆ ಫಲವನ್ನು ದೇವರು ಹೇಳಿದ ಹಾಗೆಯೇ ಹೊಂದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು