Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:26 - ಕನ್ನಡ ಸತ್ಯವೇದವು J.V. (BSI)

26 ಹಾಗೆ ಪವಿತ್ರಾತ್ಮನು ಸಹ ನಮ್ಮ ಅಶಕ್ತಿಯನ್ನು ನೋಡಿ ಸಹಾಯಮಾಡುತ್ತಾನೆ. ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದಂಥ ನರಳಾಟದಿಂದ ನಮಗೋಸ್ಕರ ಬೇಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಹಾಗೆ ಪವಿತ್ರಾತ್ಮನು ಸಹ ನಮ್ಮ ಬಲಹೀನತೆಯನ್ನು ನೋಡಿ ನಮಗೆ ಸಹಾಯಮಾಡುತ್ತಾನೆ. ಹೇಗೆಂದರೆ ನಾವು ಯಾವಾಗ ಏನು ಬೇಡಿಕೊಳ್ಳಬೇಕೋ ಎನ್ನುವುದು ನಮಗೆ ತಿಳಿದಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದ ನರಳಾಟದಿಂದ ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಅಂತೆಯೇ ಪವಿತ್ರಾತ್ಮರು ಸಹ ನಮ್ಮ ದೌರ್ಬಲ್ಯದಲ್ಲಿ ನೆರವು ನೀಡುತ್ತಾರೆ. ಹೇಗೆ ಪ್ರಾರ್ಥಿಸಬೇಕು, ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದನ್ನು ನಾವು ತಿಳಿಯದವರು. ಪವಿತ್ರಾತ್ಮರೇ ಮಾತಿಗೆಟುಕದ ರೀತಿಯಲ್ಲಿ ಆತ್ಮಧ್ವನಿಯಿಂದ ನಮ್ಮ ಪರವಾಗಿ ದೇವರಲ್ಲಿ ವಿಜ್ಞಾಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಾವು ಬಲಹೀನರಾಗಿರುವುದರಿಂದ ನಮ್ಮ ಬಲಹೀನತೆಯಲ್ಲಿ ಪವಿತ್ರಾತ್ಮನು ನಮಗೆ ಸಹಾಯ ಮಾಡುತ್ತಾನೆ. ನಾವು ಹೇಗೆ ಪ್ರಾರ್ಥಿಸಬೇಕು ಮತ್ತು ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದು ನಮಗೆ ತಿಳಿಯದು. ಆದರೆ ಪವಿತ್ರಾತ್ಮನು ತಾನೇ ನಮಗೋಸ್ಕರ ದೇವರಲ್ಲಿ ವಿವರಿಸಲಾಗದ ಅಂತರ್ಭಾವದಿಂದ ಬೇಡಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಅದೇ ರೀತಿಯಲ್ಲಿ ಪವಿತ್ರಾತ್ಮರು ನಮ್ಮ ಬಲಹೀನತೆಯಲ್ಲಿ ನಮಗೆ ಸಹಾಯ ಮಾಡುತ್ತಾರೆ. ಯಾವುದಕ್ಕಾಗಿ ಹೇಗೆ ಪ್ರಾರ್ಥಿಸಬೇಕೆಂದು ನಾವು ತಿಳಿಯದವರಾಗಿದ್ದೇವೆ. ಆದರೆ ಪವಿತ್ರಾತ್ಮರು ತಾವೇ ಮಾತುಗಳಿಂದ ವ್ಯಕ್ತಪಡಿಸಲು ಸಾಧ್ಯವಾಗದ ನರಳಾಟದೊಂದಿಗೆ ನಮಗೋಸ್ಕರ ಪ್ರಾರ್ಥಿಸುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತಸೆಚ್ ಪವಿತ್ರ್ ಆತ್ಮೊಬಿ ಅಮ್ಚೊ ಬರೊಸ್ಯಾಚೊ ಬಳ್ ಕಮಿ ಹೊಲ್ಲ್ಯಾ ತನ್ನಾ ಅಮ್ಕಾ ಮಜತ್ ಕರುಕ್ ಯೆತಾ. ಕಶ್ಯಾಕ್ ಮಟ್ಲ್ಯಾರ್ ಕಾಯ್ ಅನಿ ಕಶೆ ಮಾಗ್ನಿ ಕರ್‍ತಲೆ ಮನುನ್ ಅಮ್ಕಾ ಗೊತ್ತ್ ನಾ, ತಸೆಚ್ ಪವಿತ್ರ್ ಆತ್ಮೊಚ್ ಅಮ್ಚ್ಯಾನ್ ಸಾಂಗುಕ್ ಹೊಯ್‍ ನಸಲ್ಲ್ಯಾ ಗೊಸ್ಟಿಯಾನಿ ಅಪ್ನಾಚ್ಯಾ ಉಸ್ಕಾರಾನಿ ಮಾಗುನ್ಗೆತ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:26
33 ತಿಳಿವುಗಳ ಹೋಲಿಕೆ  

ಮಾತಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತಾಡುವನು.


ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.


ನೀವು ಪುತ್ರರಾಗಿರುವದರಿಂದ ದೇವರು ಅಪ್ಪಾ ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.


ಆಗ ನಾನು ತಂದೆಯನ್ನು ಕೇಳಿಕೊಳ್ಳುವೆನು; ಆತನು ನಿಮಗೆ ಬೇರೊಬ್ಬ ಸಹಾಯಕನನ್ನು ಸದಾಕಾಲ ನಿಮ್ಮ ಸಂಗಡ ಇರುವದಕ್ಕೆ ಕೊಡುವನು.


ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.


ನೀವು ತಿರಿಗಿ ಭಯದಲ್ಲಿ ಬೀಳುವ ಹಾಗೆ ದಾಸನ ಭಾವವನ್ನು ಹೊಂದಿದವರಲ್ಲ, ಮಗನ ಭಾವವನ್ನು ಹೊಂದಿದವರಾಗಿದ್ದೀರಿ. ಈ ಭಾವದಿಂದ ನಾವು ದೇವರನ್ನು ಅಪ್ಪಾ, ತಂದೆಯೇ, ಎಂದು ಕೂಗುತ್ತೇವೆ.


ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.


ಯಾಕಂದರೆ ನಮಗಿರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದನು, ಪಾಪ ಮಾತ್ರ ಮಾಡಲಿಲ್ಲ.


ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸಬೇಕೆಂಬ ದುರಭಿಪ್ರಾಯಪಟ್ಟು ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.


ದೃಢವಾದ ನಂಬಿಕೆಯುಳ್ಳ ನಾವು ನಮ್ಮ ಸುಖವನ್ನು ನೋಡಿಕೊಳ್ಳದೆ ದೃಢವಿಲ್ಲದವರ ಅನುಮಾನಗಳನ್ನು ಸಹಿಸಿಕೊಳ್ಳಬೇಕು.


ಆತನು ಮನೋವ್ಯಥೆಯುಳ್ಳವನಾಗಿ ಇನ್ನೂ ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ ಆತನ ಬೆವರು ಭೂವಿುಗೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳೋಪಾದಿಯಲ್ಲಿತ್ತು.


ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಈ ಗುಡಾರದಲ್ಲಿರುವವರಾದ ನಾವು ಭಾರ ಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿ ಹೋಗಬೇಕೆಂದು ನಮ್ಮ ಇಷ್ಟವಲ್ಲ; ಮರ್ತ್ಯವಾದದ್ದು ನುಂಗಿಹೋಗಿ ಜೀವವೊಂದೇ ಉಳಿಯುವಂತೆ ಈ ಗುಡಾರದ ಮೇಲೆ ಆ ನಿವಾಸವನ್ನು ಧರಿಸಿಕೊಳ್ಳಬೇಕೆಂಬದೇ ನಮ್ಮ ಇಷ್ಟ.


ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದೀ; ಅವರ ಹೃದಯವನ್ನು ಧೈರ್ಯಪಡಿಸುತ್ತೀ; ಅವರ ಮೊರೆಗೆ ಕಿವಿಗೊಡುತ್ತೀ.


ನಾವು ಈಗಿನ ದೇಹದಲ್ಲಿರುವವರೆಗೂ ನರಳುತ್ತೇವೆ. ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ನಾವು ದೇಹದ ಮೇಲೆ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇವೆ,


ಅದಕ್ಕೆ ಯೇಸು - ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾತ್ರೆಯಲ್ಲಿ ನೀವು ಕುಡಿಯುವದು ನಿವ್ಮಿುಂದಾದೀತೇ ಎಂದು ಕೇಳಲು ಅವರು - ಆಗುವದು ಅಂದರು.


ನಿಟ್ಟುಸುರಿನಿಂದ ನನ್ನಲ್ಲಿ ಎಲುಬು ತೊಗಲು ಮಾತ್ರ ಉಳಿದಿರುತ್ತವೆ.


ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ; ಯೆಹೋವನೇ, ಎಷ್ಟರವರೆಗೂ [ನನ್ನ ಕೈ ಬಿಟ್ಟಿರುವಿ]?


ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರನ್ನೂ ಮಾರ್ಗತಪ್ಪಿ ನಡೆಯುವವರನ್ನೂ ತಾಳ್ಮೆಯಿಂದ ಸಹಿಸಿಕೊಳ್ಳುವದಕ್ಕೆ ಶಕ್ತನಾಗಿರುವನು.


ಅಯ್ಯೋ, ನಾನು ಎಂಥ ದುರವಸ್ಥೆಯಲ್ಲಿ ಬಿದ್ದ ಮನುಷ್ಯನು! ಇಂಥ ಮರಣಕ್ಕೆ ಒಳಗಾದ ಈ ದೇಹದಿಂದ ನನ್ನನ್ನು ಬಿಡಿಸುವವನು ಯಾರು?


ಮೊರೆಯಿಟ್ಟಿಟ್ಟು ಬೇಸತ್ತು ಹೋಗಿದ್ದೇನೆ; ಗಂಟಲು ಒಣಗಿಹೋಯಿತು. ನನ್ನ ದೇವರನ್ನು ನಿರೀಕ್ಷಿಸುತ್ತಾ ದೃಷ್ಟಿ ಮಂದವಾಯಿತು.


ಸೆರೆಯವರ ಗೋಳಾಟವನ್ನು ಲಕ್ಷಿಸಿ ಮರಣಪಾತ್ರರನ್ನು ಬಿಡಿಸಿ


ಆತನಿಗೆ ಹೇಳತಕ್ಕದ್ದನ್ನು ನಮಗೆ ನೀನೇ ತಿಳಿಸು, ಅಂಧಕಾರವು ನಮಗೆ ಕವಿದಿರುವದರಿಂದ ವಾಕ್ಯವನ್ನು ಸರಿಪಡಿಸಿಕೊಳ್ಳಲಾರೆವು.


ನೀನು ನನ್ನ ಧ್ವನಿಯನ್ನು ಕೇಳಿದಿ; (ನನ್ನ ನಿಟ್ಟುಸುರಿಗೂ ಮೊರೆಗೂ ಕಿವಿಯನ್ನು ಮರೆಮಾಡಿಕೊಳ್ಳಬೇಡ!)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು