Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:27 - ಕನ್ನಡ ಸತ್ಯವೇದವು J.V. (BSI)

27 ಆದರೆ ಹೃದಯಗಳನ್ನು ಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದರೆ ಹೃದಯಗಳನ್ನು ಪರಿಶೋಧಿಸಿ ನೋಡುವಾತನಿಗೆ ಪವಿತ್ರಾತ್ಮನ ಮನೋಭಾವವು ಏನೆಂದು ತಿಳಿದಿದೆ; ಆ ಆತ್ಮನು ದೇವರ ಚಿತ್ತಾನುಸಾರವಾಗಿ ದೇವಜನರಿಗೋಸ್ಕರ ಬೇಡಿಕೊಳ್ಳುವನೆಂದು ಆತನು ಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅಂತರಂಗಗಳನ್ನು ಈಕ್ಷಿಸುವ ದೇವರು ಪವಿತ್ರಾತ್ಮರ ಇಂಗಿತವೇನೆಂದು ಬಲ್ಲರು. ಏಕೆಂದರೆ, ದೇವರ ಚಿತ್ತದ ಪ್ರಕಾರವೇ ಪವಿತ್ರಾತ್ಮರು ದೇವಜನರಿಗಾಗಿ ಬಿನ್ನವಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅಂತರಂಗವನ್ನು ನೋಡಬಲ್ಲ ದೇವರಿಗೆ ಪವಿತ್ರಾತ್ಮನ ಮನಸ್ಸಿನಲ್ಲಿರುವುದೆಲ್ಲಾ ಗೊತ್ತಿದೆ, ಏಕೆಂದರೆ ದೇವರ ಚಿತ್ತಕ್ಕನುಸಾರವಾಗಿಯೇ ಪವಿತ್ರಾತ್ಮನು ದೇವಜನರಿಗೋಸ್ಕರ ದೇವರಲ್ಲಿ ವಿಜ್ಞಾಪಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರು ಪವಿತ್ರಾತ್ಮರ ಮನಸ್ಸನ್ನು ಬಲ್ಲವರಾಗಿದ್ದಾರೆ. ಏಕೆಂದರೆ ಪವಿತ್ರಾತ್ಮರು ದೇವಜನರಿಗಾಗಿ ದೇವರ ಚಿತ್ತದ ಪ್ರಕಾರ ವಿಜ್ಞಾಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಅನಿ ಅಮ್ಚ್ಯಾ ಮನಾನಿತ್ಲೊ ಘುಟ್ಟ್ ಗೊತ್ತ್ ಹೊತ್ತ್ಯಾ ದೆವಾಕ್ ಆತ್ಮ್ಯಾಚಿ ಆಶಾ ಕಾಯ್ ಮನುನ್ ಗೊತ್ತ್ ಹಾಯ್; ಕಶ್ಯಾಕ್ ಮಟ್ಲ್ಯಾರ್ ಪವಿತ್ರ್ ಆತ್ಮೊ ದೆವಾಚ್ಯಾ ಮರ್ಜಿ ಸರ್ಕೆ ರಾವ್ನ್, ದೆವಾಚ್ಯಾ ಖಾಸಿ ಲೊಕಾಂಚ್ಯಾ ಸಾಟ್ನಿಚ್ ತೊ ಮಾಗುನ್‍ಗೆತ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:27
28 ತಿಳಿವುಗಳ ಹೋಲಿಕೆ  

ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು ಹೃದಯವನ್ನು ಪರೀಕ್ಷಿಸುವವನೂ ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.


ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿದ್ದಾನೆ.


ಮತ್ತೀಯನನ್ನೂ ನಿಲ್ಲಿಸಿ ಪ್ರಾರ್ಥನೆ ಮಾಡುತ್ತಾ - ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವದರಿಂದ ಆ ಸ್ಥಾನವನ್ನು ಹೊಂದುವದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿಕೊಂಡವನನ್ನು ತೋರಿಸಿಕೊಡು ಎಂದು ಹೇಳಿದರು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಬೆಳ್ಳಿಬಂಗಾರಗಳನ್ನು ಪುಟಕುಲಿಮೆಗಳು ಶೋಧಿಸುವವು; ಹೃದಯಗಳನ್ನು ಶೋಧಿಸುವವನು ಯೆಹೋವನೇ.


ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರನ್ನು ತನ್ನ ಜನರೆಂದು ಸಾಕ್ಷಿಕೊಟ್ಟನು.


ಹೃದಯರಹಸ್ಯಗಳನ್ನು ಬಲ್ಲವನಾದ ದೇವರು ವಿಚಾರಿಸುತ್ತಿರಲಿಲ್ಲವೋ?


ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನಲ್ಲಾ ಎಂದು ಯೋಚಿಸುವವರಾಗಿ ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತಾಡುತ್ತೇವೆ.


ಆದದರಿಂದ ನೀವು ಅವರ ಹಾಗೆ ಆಗಬೇಡಿರಿ. ನೀವು ನಿಮ್ಮ ತಂದೆಯನ್ನು ಬೇಡಿಕೊಳ್ಳುವದಕ್ಕಿಂತ ಮುಂಚೆಯೇ ನಿಮಗೆ ಏನೇನು ಅಗತ್ಯವೆಂಬದು ಆತನಿಗೆ ತಿಳಿದದೆ.


ಹೃದಯವನ್ನೂ ಅಂತರಿಂದ್ರಿಯವನ್ನೂ ಪರೀಕ್ಷಿಸಿ ಶಿಷ್ಟರನ್ನು ಶೋಧಿಸುವ ಸೇನಾಧೀಶ್ವರನಾದ ಯೆಹೋವನೇ, ನೀನು ನನ್ನ ಹಿಂಸಕರಿಗೆ ಕೊಡುವ ಪ್ರತಿಫಲವನ್ನು ನನ್ನ ಕಣ್ಣು ನೋಡಲಿ; ನಿನಗೇ ನನ್ನ ವ್ಯಾಜ್ಯವನ್ನು ಅರಿಕೆ ಮಾಡಿದ್ದೇನಷ್ಟೆ.


ಹೃದಯವನ್ನೂ ಅಂತರಿಂದ್ರಿಯವನ್ನೂ ಪರೀಕ್ಷಿಸಿ ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆ ಮಾಡಿದ್ದೇನಷ್ಟೆ.


ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.


ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ, ಅದನ್ನು ನೆರವೇರಿಸುವೆನು; ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವದು.


ಆಗ ಆತನು ಅವರಿಗೆ ಹೇಳಿದ್ದೇನಂದರೆ - ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳುಕೊಂಡಿದ್ದಾನೆ. ಮನುಷ್ಯರಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ಮನುಷ್ಯರ ಹೃದಯವನ್ನೂ ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ ಒಬ್ಬರಿಗೋಸ್ಕರ ಒಬ್ಬರು ದೇವರನ್ನು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ವಿಜ್ಞಾಪನೆಯು ಬಹು ಬಲವಾಗಿದೆ.


ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲದ್ದಾಗಿಯೂ ಬೈಲಾದದ್ದಾಗಿಯೂ ಅದೆ. ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.


ಶರೀರಭಾವದವುಗಳ ಮೇಲೆ ಮನಸ್ಸಿಡುವದು ಮರಣ; ಪವಿತ್ರಾತ್ಮನವುಗಳ ಮೇಲೆ ಮನಸ್ಸಿಡುವದು ಜೀವವೂ ಮನಶ್ಶಾಂತಿಯೂ ಆಗಿದೆ.


ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು; ನನ್ನ ನಿಟ್ಟುಸುರು ನಿನಗೆ ಮರೆಯಾಗಿಲ್ಲ.


ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದೀ ಎಂಬದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ ಸ್ವೇಚ್ಫೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವೇಚ್ಫೆಯಿಂದಲೇ ನಿನಗೆ ಕಾಣಿಕೆಗಳನ್ನರ್ಪಿಸಿದ್ದಾರೆಂದು ನೋಡಿ ಸಂತೋಷಿಸುತ್ತೇನೆ.


ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.


ಯೆಹೋವನೇ, ನೀನು ನನ್ನನ್ನು ಪರೀಕ್ಷಿಸಿ ತಿಳುಕೊಂಡಿದ್ದೀ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು