Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:29 - ಕನ್ನಡ ಸತ್ಯವೇದವು J.V. (BSI)

29 ಯಾಕಂದರೆ ದೇವರು ತನ್ನ ಮಗನಿಗೆ ಅನೇಕ ಮಂದಿ ಸಹೋದರರಿದ್ದು ಅವರಲ್ಲಿ ಆತನೇ ಹಿರಿಯನಾಗಿರಬೇಕೆಂದು ಉದ್ದೇಶಿಸಿ ತಾನು ಯಾರನ್ನು ತನ್ನವರೆಂದು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವದಕ್ಕೆ ಮೊದಲೇ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ದೇವರು ತಾನು ಜಗತ್ತನ್ನು ಸೃಷ್ಟಿಸುವುದಕ್ಕಿಂತ ಮೊದಲೇ ಆ ಜನರನ್ನು ಬಲ್ಲವನಾಗಿದ್ದನು ಮತ್ತು ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂದು ನಿರ್ಧರಿಸಿದನು. ಹೀಗಿರಲಾಗಿ, ಅನೇಕ ಸಹೋದರ ಸಹೋದರಿಯರಲ್ಲಿ ಯೇಸುವೇ ಹಿರಿಯವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅನೇಕ ಸಹೋದರರ ಮಧ್ಯೆ ಜ್ಯೇಷ್ಠಪುತ್ರನೆನಿಸುವಂತೆ ದೇವರು ಯಾರನ್ನು ಮೊದಲು ತಿಳಿದುಕೊಂಡರೋ ಅವರನ್ನು ತಮ್ಮ ಪುತ್ರನ ಹೋಲಿಕೆಗೆ ಸಮಾನರಾಗುವಂತೆ ಮುಂದಾಗಿ ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಜೆ ಕೊನಾಕ್ ದೆವಾನ್ ಎಚುನ್ ಕಾಡ್ಲ್ಯಾನಾಯ್ ತೆಂಕಾ ತೆನಿ ಅದ್ದಿಚ್ ಸೊಡ್ಸುಲ್ಯಾನಾಯ್ , ಅನಿ ಅಪ್ನಾಚ್ಯಾ ಲೆಕಾ ಸರ್ಕೊ ಹೊಯ್ ಸರ್ಕೆ ಕರ್‍ಲ್ಯಾನಾಯ್, ಅಶೆ ಲೆಕ್ ಸುಮಾರ್ ವಿಶ್ವಾಸಾತ್ ಹೊತ್ತ್ಯಾ ಲೊಕಾತ್ನಿ ಪಯ್ಲೆಚೊ ಹೊವ್ನ್ ರಾವ್ಚೆ ಮನ್ತಲಿ ತೆಚಿ ಆಶ್ಯಾ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:29
36 ತಿಳಿವುಗಳ ಹೋಲಿಕೆ  

ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವದಕ್ಕೆ ಮುಂಚೆ ನಿನ್ನನ್ನು ತಿಳಿದಿದ್ದೆನು; ನೀನು ಉದರದಿಂದ ಬರುವದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು; ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇವಿುಸಿದ್ದೇನೆ.


ಇದಲ್ಲದೆ ಆತನಲ್ಲಿ ನಾವು ದೇವರ ಸ್ವಕೀಯ ಪ್ರಜೆಯಾದೆವು, ಬರಬೇಕಾದ ಕ್ರಿಸ್ತನನ್ನು ಎದುರುನೋಡುತ್ತಿದ್ದ ನಾವು ತನ್ನ ಮಹಿಮೆಯನ್ನು ಪ್ರಖ್ಯಾತಿಪಡಿಸಬೇಕೆಂದು ಸಮಸ್ತಕಾರ್ಯಗಳನ್ನು ತನ್ನ ಇಷ್ಟದಂತೆ ನಡಿಸುವ ದೇವರು ತನ್ನ ಸಂಕಲ್ಪದ ಮೇರೆಗೆ ನಮ್ಮನ್ನು ಆದಿಯಲ್ಲಿಯೇ ಆರಿಸಿಕೊಂಡನು.


ಆತನು ನಮ್ಮಲ್ಲಿ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವದಕ್ಕೆ ಕರೆದನು.


ಆತನು ಜಗದುತ್ಪತ್ತಿಗೆ ಮೊದಲೇ ಗೊತ್ತು ಮಾಡಲ್ಪಟ್ಟು ಅಂತ್ಯಕಾಲದಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ನಮಸ್ಕಾರ ಮಾಡುವರು.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು.


ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವದಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇವಿುಸಿ ಇದುವರೆಗೆ ಮರೆಮಾಡಿದ ಜ್ಞಾನವೇ.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ ದೇವರಿಗೆ ವಿಧೇಯರಾಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗುವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನುಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾತನ ಸಾರೂಪ್ಯವನ್ನೂ ಧರಿಸಿಕೊಳ್ಳಬೇಕು.


ಮತ್ತು ಪ್ರಭಾವ ಹೊಂದುವದಕ್ಕೆ ತಾನು ಮುಂದಾಗಿ ಸಿದ್ಧಮಾಡಿದ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.


ಪ್ರಿಯರೇ, ಈಗ ದೇವರ ಮಕ್ಕಳಾಗಿದ್ದೇವೆ; ಮುಂದೆ ನಾವು ಏನಾಗುವೆವೋ ಅದು ಇನ್ನು ಪ್ರತ್ಯಕ್ಷವಾಗಲಿಲ್ಲ. ಕ್ರಿಸ್ತನು ಪ್ರತ್ಯಕ್ಷನಾಕುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು;


ನಾವೆಲ್ಲರೂ ಮುಸುಕುತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ಪ್ರಭಾವದಿಂದ ಅಧಿಕಪ್ರಭಾವಕ್ಕೆ ಹೋಗುತ್ತಾ ಆ ಪ್ರಭಾವದ ಸಾರೂಪ್ಯವುಳ್ಳವರೇ ಆಗುತ್ತೇವೆ; ಇದು ದೇವರಾತ್ಮನಾಗಿರುವ ಕರ್ತನ ಕೆಲಸಕ್ಕನುಸಾರವಾದದ್ದೇ.


ದೇವರು ತಾನು ಮುಂದಾಗಿ ತನ್ನ ಜನರಾಗುವದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಯನ್ನು ತಳ್ಳಿ ಬಿಡಲಿಲ್ಲ. ಎಲೀಯನ ಚರಿತ್ರೆಯಲ್ಲಿ ಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?


ನಾನು ಲೋಕದವನಲ್ಲದೆ ಇರುವ ಪ್ರಕಾರ ಇವರು ಲೋಕದವರಲ್ಲ.


ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸಿ ಪ್ರಭಾವವುಳ್ಳ ತನ್ನ ದೇಹದ ಸಾರೂಪ್ಯವಾಗುವಂತೆ ಮಾಡುವನು.


ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಾನುಗುಣವಾದ ನೀತಿಯುಳ್ಳದ್ದಾಗಿಯೂ ದೇವಭಯವುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.


ಯೆಹೋವನು ಮೋಶೆಗೆ - ನಿನಗೆ ನನ್ನ ಅನುಗ್ರಹ ದೊರಕಿದ್ದರಿಂದಲೂ ನಾನು ನಿನ್ನ ಹೆಸರನ್ನು ಗೊತ್ತುಮಾಡಿದ್ದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು ಎಂದು ಹೇಳಿದನು.


ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ ತಂಗಿಯೂ ತಾಯಿಯೂ ಆಗಬೇಕು ಅಂದನು.


ಮೋಶೆ ಯೆಹೋವನಿಗೆ - ಈ ಜನರನ್ನು ಆ ಸೀಮೆಗೆ ನಡಿಸಿಕೊಂಡುಹೋಗಬೇಕೆಂದು ನೀನು ನನಗೆ ಆಜ್ಞಾಪಿಸಿದಿಯಷ್ಟೆ; ನನ್ನ ಸಂಗಡ ಯಾರನ್ನು ಕಳುಹಿಸುವಿಯೋ ಅದನ್ನು ನನಗೆ ತಿಳಿಸಲಿಲ್ಲ. ನಿನ್ನ ಹೆಸರನ್ನು ಗೊತ್ತುಮಾಡಿದ್ದೇನೆಂದೂ ನಿನಗೆ ನನ್ನ ದಯೆ ದೊರಕಿತೆಂದೂ ನೀನು ನನಗೆ ಹೇಳಿದಿಯಲ್ಲಾ.


ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವದು.


ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ, ಇನ್ನೂ ತಿಳಿಸುವೆನು. ನೀನು ನನ್ನ ಮೇಲೆ ಇಟ್ಟಂಥ ಪ್ರೀತಿಯು ಅವರಲ್ಲಿ ಇರಬೇಕೆಂದೂ ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ ಅಂದನು.


ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.


ಆಗ ನಾನು ಅವರಿಗೆ - ನಾನೆಂದೂ ನಿಮ್ಮ ಗುರುತು ಕಾಣೆನು; ಧರ್ಮವನ್ನು ಮೀರಿನಡೆಯುವವರೇ, ನನ್ನಿಂದ ತೊಲಗಿಹೋಗಿರಿ ಎಂದು ಎಲ್ಲರ ಮುಂದೆ ಹೇಳಿಬಿಡುವೆನು.


ಯೇಸು ಆಕೆಗೆ - ನನ್ನನ್ನು ಹಿಡಿಯಬೇಡ; ಯಾಕಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ - ನಾನು ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ಏರಿಹೋಗುತ್ತೇನೆ ಎಂದು ಅವರಿಗೆ ಹೇಳು ಅಂದನು.


ಇವರು ನಿಜವಾಗಿ ಪ್ರತಿಷ್ಠಿತರಾಗಬೇಕೆಂದು ಇವರಿಗೋಸ್ಕರ ನಾನು ನನ್ನನ್ನು ಪ್ರತಿಷ್ಠೆಪಡಿಸಿಕೊಳ್ಳುತ್ತೇನೆ.


ನಾನಾದರೋ ಅವನನ್ನು ಜ್ಯೇಷ್ಠಪುತ್ರನನ್ನೂ ಭೂರಾಜರಲ್ಲಿ ಉನ್ನತನನ್ನೂ ಮಾಡಿಕೊಳ್ಳುವೆನು.


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಯೇಸು ಅವರಿಗೆ - ಹೆದರಬೇಡಿರಿ; ನನ್ನ ಸಹೋದರರ ಬಳಿಗೆ ಹೋಗಿ ಅವರು ಗಲಿಲಾಯಕ್ಕೆ ಹೋಗಬೇಕೆಂದು ಹೇಳಿರಿ; ಅಲ್ಲಿ ನನ್ನನ್ನು ನೋಡುವರು ಎಂದು ಹೇಳಿದನು.


ಆದರೆ ಯಾವನು ದೇವರನ್ನು ಪ್ರೀತಿಸುತ್ತಾನೋ ಅವನನ್ನೇ ದೇವರು ತಿಳುಕೊಳ್ಳುತ್ತಾನೆ.


ಈ ಸ್ವಭಾವವು ಅದನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ದಿನೇದಿನೇ ನೂತನವಾಗುತ್ತಾ ಪೂರ್ಣಜ್ಞಾನವನ್ನು ಉಂಟುಮಾಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು