Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:32 - ಕನ್ನಡ ಸತ್ಯವೇದವು J.V. (BSI)

32 ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ; ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ದೇವರು ತನ್ನ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೊಸ್ಕರ ಕೊಟ್ಟನು. ಆದ್ದರಿಂದ ಈಗ, ದೇವರು ಯೇಸುವಿನೊಂದಿಗೆ ನಮಗೆ ಎಲ್ಲವನ್ನು ಖಂಡಿತವಾಗಿ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ದೇವರು ತಮ್ಮ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೋಸ್ಕರ ಕ್ರಿಸ್ತ ಯೇಸುವನ್ನು ಕೊಟ್ಟ ಮೇಲೆ ನಮಗೆ ಉದಾರವಾಗಿ ಅವರೊಂದಿಗೆ ಎಲ್ಲವನ್ನು ಸಹ ಕೊಡದೆ ಇರುವರೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ದೆವಾನ್ ಅಪ್ನಾಚ್ಯಾ ಸ್ವತಾಚ್ಯಾ ಲೆಕಾಕ್ ಸೈತ್ ಅಪ್ನಾಸಾಟ್ನಿ ಥವ್ನ್ ಘೆಯ್ನಸ್ತಾನಾ, ಅಮ್ಚ್ಯಾಸಾಟ್ನಿ ದಿವ್ನ್ ಸೊಡ್ಲ್ಯಾನ್! ಅಪ್ಲ್ಯಾ ಲೆಕಾಕುಚ್ ದಿಲ್ಲೊ ದೆವ್ ಸಗ್ಳೆಬಿ ಅಮ್ಕಾ ಫುಕೊಟ್ ದಿ ನಸ್ತಾನಾ ರ್‍ಹಾಯ್ಲ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:32
19 ತಿಳಿವುಗಳ ಹೋಲಿಕೆ  

ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.


ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಅನುಕೂಲವಾಗುತ್ತವೆ ಎಂದು ನಮಗೆ ಗೊತ್ತದೆ.


ಯೆಹೋವದೇವರು ಸೂರ್ಯನೂ ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನು?


ನಾವು ದೇವರನ್ನು ಪ್ರೀತಿಸಿದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತನ್ನ ಮಗನನ್ನು ಕಳುಹಿಸಿಕೊಟ್ಟದರಲ್ಲಿಯೇ ಪ್ರೀತಿಯ ನಿಜ ಗುಣವು ತೋರಿ ಬರುತ್ತದೆ.


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ದಯಪಾಲಿಸಿರುವ ಕೃಪಾವರಗಳನ್ನು ತಿಳುಕೊಳ್ಳುವದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದೆವು.


ಯಾಕಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಉಚಿತಾರ್ಥವರವು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ದೇವರು ಆತನನ್ನು ನಮ್ಮ ಅಪರಾಧಗಳ ನಿವಿುತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ನಿವಿುತ್ತ ಜೀವದಿಂದ ಎಬ್ಬಿಸಿದನು.


ಅವನನ್ನು ಜಜ್ಜುವದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು; ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವದು;


ಆಗ - ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.


ಜಯಹೊಂದುವವನು ಇವುಗಳಿಗೆ ಬಾಧ್ಯನಾಗುವನು; ನಾನು ಅವನಿಗೆ ದೇವರಾಗಿರುವೆನು, ಅವನು ನನಗೆ ಮಗನಾಗಿರುವನು.


ಆ ದೂತನು ಅವನಿಗೆ - ನಿನ್ನ ಹುಡುಗನ ಮೇಲೆ ಕೈಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನಾದರೂ ನನಗೆ ಸಮರ್ಪಿಸುವದಕ್ಕೆ ಹಿಂದೆಗೆಯಲಿಲ್ಲವಾದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂಬದು ಈಗ ತೋರಬಂತು ಎಂದು ಹೇಳಿದನು.


ಆ ಬಾಧೆಗಳೆಲ್ಲಾ ನಿಮ್ಮ ಹಿತಕ್ಕಾಗಿಯೇ ನಮಗೆ ಸಂಭವಿಸುತ್ತವೆ. ಅವುಗಳಲ್ಲಿ ಅಧಿಕವಾಗಿ ದೊರಕುವ ದೈವಕೃಪೆಯು ಬಹುಜನರೊಳಗೆ ಕೃತಜ್ಞತೆಯನ್ನು ಹುಟ್ಟಿಸುವದರಿಂದ ದೇವರಿಗೆ ಹೆಚ್ಚಾದ ಸ್ತೋತ್ರವನ್ನು ಉಂಟುಮಾಡುವದು.


ಗರ್ವಪಡಬೇಡ, ಭಯದಿಂದಿರು; ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವದಿಲ್ಲ.


ದುಃಖಪಡುವವರಾಗಿದ್ದರೂ ಯಾವಾಗಲೂ ಸಂತೋಷಪಡುವವರೂ, ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯವನ್ನುಂಟುಮಾಡುವವರೂ, ಏನೂ ಇಲ್ಲದವರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು