ರೋಮಾಪುರದವರಿಗೆ 8:35 - ಕನ್ನಡ ಸತ್ಯವೇದವು J.V. (BSI)35 ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಅನ್ನವಿಲ್ಲದಿರುವದೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಈ ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಕ್ರಿಸ್ತಯೇಸುವಿನ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಯಾರಿಂದ ಸಾಧ್ಯ? ಕಷ್ಟಸಂಕಟ, ಇಕ್ಕಟ್ಟು-ಬಿಕ್ಕಟ್ಟು, ಹಿಂಸೆ ಬಾಧೆ ಇವುಗಳಿಂದ ಸಾಧ್ಯವೆ? ಇಲ್ಲ, ಹಸಿವು ನೀರಡಿಕೆ, ನಗ್ನಸ್ಥಿತಿ, ಆಪತ್ತು-ವಿಪತ್ತು, ಖಡ್ಗಕಠಾರಿಗಳಿಂದ ಸಾಧ್ಯವೆ? ಎಂದಿಗೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಕ್ರಿಸ್ತನ ಪ್ರೀತಿಯಿಂದ ಯಾವುದು ನಮ್ಮನ್ನು ಬೇರ್ಪಡಿಸಬಲ್ಲದು? ಕಷ್ಟಸಂಕಟಗಳಾಗಲಿ ಇಕ್ಕಟ್ಟುಗಳಾಗಲಿ ಹಿಂಸೆಯಾಗಲಿ ಆಹಾರವಿಲ್ಲದಿರುವುದಾಗಲಿ ಬಟ್ಟೆಯಿಲ್ಲದಿರುವುದಾಗಲಿ ಅಪಾಯವಾಗಲಿ ಮರಣವಾಗಲಿ ನಮ್ಮನ್ನು ಕ್ರಿಸ್ತನ ಪ್ರೀತಿಯಿಂದ ಬೇರ್ಪಡಿಸಬಲ್ಲವೇ? ಇಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಕ್ರಿಸ್ತ ಯೇಸುವಿನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಇಕ್ಕಟ್ಟೋ ಹಿಂಸೆಯೋ ಆಹಾರವಿಲ್ಲದಿರುವುದೋ ಬಟ್ಟೆ ಇಲ್ಲದಿರುವುದೋ ಅಪಾಯವೋ ಖಡ್ಗವೋ? ಇವೆಲ್ಲವೂ ನಮ್ಮನ್ನು ಅಗಲಿಸಲಾರವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ತಸೆ ಹೊಲ್ಯಾರ್ ಅಮ್ಕಾ ಕ್ರಿಸ್ತಾಚ್ಯಾ ಪ್ರೆಮಾತ್ನಾ ಎಗ್ಳುಕ್ ಕೊನಾಚ್ಯಾನ್ ಹೊತಾ? ಕಸ್ಟಾನ್, ನಾಹೊಲ್ಯಾರ್ ಅಡ್ಚನಿನ್, ನಾಹೊಲ್ಯಾರ್ ತರಾಸಾನ್, ನಾಹೊಲ್ಯಾರ್ ಭುಕೆನ್, ನಾಹೊಲ್ಯಾರ್ ಕಪ್ಡೆ ನಸಲ್ಲಿ ಪರಿಸ್ಥಿತಿನ್ ನಾಹೊಲ್ಯಾರ್ ಅಪಾಯಾನ್ ನಾ ಹೊಲ್ಯಾರ್ ಮರ್ನಾನ್? ಅಧ್ಯಾಯವನ್ನು ನೋಡಿ |