Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:7 - ಕನ್ನಡ ಸತ್ಯವೇದವು J.V. (BSI)

7 ಯಾಕಂದರೆ ಶರೀರಭಾವದವುಗಳ ಮೇಲೆ ಮನಸ್ಸಿಡುವದು ದೇವರಿಗೆ ಶತ್ರುತ್ವವು; ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದೂ ಇಲ್ಲ, ಒಳಪಡುವದಕ್ಕಾಗುವದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯಾಕೆಂದರೆ ಶರೀರಭಾವಗಳ ಮೇಲೆ ಮನಸ್ಸಿಡುವುದು ದೇವರಿಗೆ ವಿರುದ್ಧವಾಗಿದೆ; ಅಂಥ ಮನಸ್ಸು ಧರ್ಮನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಶರೀರ ಸ್ವಭಾವದಲ್ಲೇ ಮಗ್ನವಾಗಿರುವ ಮನಸ್ಸು ದೇವರಿಗೆ ಶತ್ರು. ಅಂಥ ಮನಸ್ಸು ದೇವರ ನಿಯಮಕ್ಕೆ ಮಣಿಯುವುದಿಲ್ಲ. ಮಣಿಯಲು ಸಾಧ್ಯವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಏಕೆಂದರೆ ಒಬ್ಬನ ಆಲೋಚನೆಯು ಅವನ ಪಾಪಾಧೀನಸ್ವಭಾವದ ಹಿಡಿತಕ್ಕೆ ಒಳಪಟ್ಟಿದ್ದರೆ, ಅವನು ದೇವರಿಗೆ ವಿರೋಧವಾಗಿದ್ದಾನೆ. ಅವನು ದೇವರ ನಿಯಮಕ್ಕೆ ವಿಧೇಯನಾಗುವುದೂ ಇಲ್ಲ್ಲ, ವಿಧೇಯನಾಗಲು ಸಾಧ್ಯವಿರುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮಾಂಸಭಾವದ ಮನಸ್ಸು ದೇವರಿಗೆ ಶತ್ರುವಾಗಿರುತ್ತದೆ. ಏಕೆಂದರೆ, ಅದು ದೇವರ ನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಆಂಗಾಚಿ ಮಟ್ಲ್ಯಾರ್ ಮಾನುಸ್‍ಪಾನಾಚಿ ಆಶಾ ದೆವಾಕ್ ವಿರೊದ್ ರ್‍ಹಾತಾ, ದೆವಾಚ್ಯಾ ಖಾಯ್ದ್ಯಾಕ್ ಹೆ ಆಂಗ್ ಖಾಲ್ತಿ ಹೊವ್ನ್ ಚಲಿನಾ ಅನಿ ಖಾಲ್ತಿ ಹೊವ್ನ್ ಚಲುಕ್ ಮಾನ್ಸಾಚ್ಯಾ ಸ್ವಬಾವಾಕ್ ಹೊಯ್ಚನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:7
28 ತಿಳಿವುಗಳ ಹೋಲಿಕೆ  

ಪ್ರಾಕೃತಮನುಷ್ಯನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತಾಗಿ ತೋರುತ್ತವೆ; ಅವು ಆತ್ಮವಿಚಾರದಿಂದ ತಿಳಿಯ ತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸಲಾರನು.


ವ್ಯಭಿಚಾರಿಗಳು ನೀವು; ಇಹಲೋಕಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ಅಂತರಾತ್ಮದೊಳಗೆ ದೇವರ ನಿಯಮದಲ್ಲಿ ಆನಂದ ಪಡುವವನಾಗಿದ್ದೇನೆ. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮ ಉಂಟೆಂದು ನೋಡುತ್ತೇನೆ.


ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್‍ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು, ಅವರ ಹೃದಯದ ಮೇಲೆ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ದ್ರೋಹಿಗಳೂ ದುಡುಕಿನವರೂ ಉಬ್ಬಿಕೊಂಡವರೂ ದೇವರನ್ನು ಪ್ರೀತಿಸದೆ ಭೋಗಗಳನ್ನೇ ಪ್ರೀತಿಸುವವರೂ


ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳನ್ನು ಮಾಡುವವರಾಗಿ ದ್ವೇಷಮನಸ್ಸುಳ್ಳವರೂ ಆಗಿದ್ದರೂ


ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮಾನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವದಕ್ಕೆ ಮಾರ್ಗವಾಯಿತು.


ದೇವರಿಗೆ ವೈರಿಗಳಾಗಿದ್ದ ನಾವು ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿರಲಾಗಿ ಆತನ ಕೂಡ ಸಮಾಧಾನವಾದ ನಮಗೆ ಆ ಮಗನಿಗಿರುವ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.


ಇದಲ್ಲದೆ ದೇವರ ಜ್ಞಾನವು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅನಿಷ್ಟಭಾವಕ್ಕೆ ಒಪ್ಪಿಸಿದನು.


ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿಹೇಳುವದರಿಂದ ನನ್ನನ್ನು ಹಗೆಮಾಡುತ್ತದೆ.


ಹಾಗಾದರೆ ನಂಬಿಕೆಯಿಂದ ಧರ್ಮಪ್ರಮಾಣವನ್ನು ನಿರರ್ಥಕಮಾಡುತ್ತೇವೋ? ಎಂದಿಗೂ ಇಲ್ಲ. ಧರ್ಮಪ್ರಮಾಣವನ್ನು ಸ್ಥಿರಪಡಿಸುತ್ತೇವೆ.


ಅವರು ಕಿವಿ ಊದುವವರೂ ಚಾಡಿಹೇಳುವವರೂ ದೇವರನ್ನು ದ್ವೇಷಿಸುವವರೂ ಸೊಕ್ಕಿನವರೂ ಅಹಂಕಾರಿಗಳೂ ಬಡಾಯಿಕೊಚ್ಚುವವರೂ ಕೇಡನ್ನು ಕಲ್ಪಿಸುವವರೂ


ಸರ್ಪಜಾತಿಯವರೇ, ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವದೇ ಬಾಯಲ್ಲಿ ಹೊರಡುವದು.


ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲಚಿತ್ತರನ್ನು ಮರುಳುಗೊಳಿಸುವವರೂ ಲೋಭದಲ್ಲಿ ತೇರ್ಗಡೆಹೊಂದಿದ ಮನಸ್ಸುಳ್ಳವರೂ ಶಾಪಕ್ಕೆ ಪಾತ್ರರೂ ಆಗಿದ್ದಾರೆ.


ಆದದರಿಂದ ಈ ಸಣ್ಣಸಣ್ಣ ಆಜ್ಞೆಗಳಲ್ಲಿಯಾದರೂ ಒಂದನ್ನು ಮೀರಿ ಜನರಿಗೂ ಹಾಗೆ ಮೀರುವದಕ್ಕೆ ಬೋಧಿಸುವವನು ಪರಲೋಕರಾಜ್ಯದಲ್ಲಿ ಬಹಳ ಚಿಕ್ಕವನೆನಿಸಿಕೊಳ್ಳುವನು; ಆದರೆ ತಾನೇ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕರಾಜ್ಯದಲ್ಲಿ ದೊಡ್ಡವನೆನಿಸಿಕೊಳ್ಳುವನು.


ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸೀತೇ? ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು.


ಅವನು ಯೆರೂಸಲೇವಿುಗೆ ಬರಲು ಹನಾನೀಯನ ಮಗನಾದ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು ಅವನಿಗೆ - ನೀನು ಕೆಟ್ಟವನಿಗೆ ಸಹಾಯಮಾಡತಕ್ಕದ್ದೋ? ಯೆಹೋವನ ಹಗೆಗಾರರನ್ನು ಪ್ರೀತಿಸುವದೋ! ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.


ದುರ್ಮತಿಗಳು - ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯಕೃತ್ಯಗಳನ್ನು ನಡಿಸುತ್ತಾರೆ; ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.


ನಾನು ದೇವರ ನೇಮವಿಲ್ಲದವನಲ್ಲ, ಕ್ರಿಸ್ತ ನಿಯಮಕ್ಕೊಳಗಾದವನೇ; ಆದರೂ ನಿಯಮವಿಲ್ಲದವರನ್ನು ಸಂಪಾದಿಸಿಕೊಳ್ಳುವದಕ್ಕಾಗಿ ಅವರಿಗೆ ನಿಯಮವಿಲ್ಲದವನಂತಾದೆನು.


ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ


ಕೆಲವರು ಅತಿ ವಿನಯದಲ್ಲಿಯೂ ದೇವದೂತರ ಪೂಜೆಯಲ್ಲಿಯೂ ಆಸಕ್ತರಾಗಿದ್ದಾರೆ,


ಬಾಯಿಂದ ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ!


ಇಸ್ರಾಯೇಲ್ ವಂಶದವರೆಲ್ಲರೂ ತಮ್ಮ ಬೊಂಬೆಗಳ ನಿವಿುತ್ತ ನನ್ನನ್ನು ತೊರೆದದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲಿ ಸಿಕ್ಕಿಸಿ ಹಿಡಿಯುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು