Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:8 - ಕನ್ನಡ ಸತ್ಯವೇದವು J.V. (BSI)

8 ಶರೀರಭಾವಾಧೀನರು ದೇವರಿಗೆ ಮೆಚ್ಚಿಕೆಯಾಗಿರಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಶರೀರಭಾವಾಧೀನವಾಗಿರುವವರು ದೇವರನ್ನು ಮೆಚ್ಚಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಶರೀರ ಸ್ವಭಾವಕ್ಕೆ ಅನುಸಾರವಾಗಿ ನಡೆಯುವವರು ದೇವರನ್ನು ಮೆಚ್ಚಿಸಲು ಸಾಧ್ಯವೇ ಇಲ್ಲ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ತಮ್ಮ ಪಾಪಸ್ವಭಾವದ ಆಡಳಿತಕ್ಕೆ ಒಳಪಟ್ಟಿರುವ ಆ ಜನರು ದೇವರನ್ನು ಮೆಚ್ಚಿಸಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮಾಂಸಭಾವಕ್ಕೆ ಒಳಗಾದವರು ದೇವರನ್ನು ಮೆಚ್ಚಿಸಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಜೆ ಕೊನ್ ಅಪ್ನಾಚ್ಯಾ ಮಾನುಸ್‍ಪಾನಾಚ್ಯಾ ಸ್ವಬಾವಾಚೆ ಸರ್ಕೆ ಚಲ್ತ್ಯಾತ್ ತೆಂಚ್ಯಾ ವಿಶಯಾತ್ ದೆವ್ ಖುಶಿ ರ್‍ಹಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:8
16 ತಿಳಿವುಗಳ ಹೋಲಿಕೆ  

ನಾವು ಶರೀರಾಧೀನಸ್ವಭಾವವನ್ನು ಅನುಸರಿಸುತ್ತಿದ್ದಾಗ ದುರಾಶೆಗಳು ಧರ್ಮಶಾಸ್ತ್ರದಿಂದಲೇ ಪ್ರೇರಿತವಾಗಿ ನಮ್ಮ ಅಂಗಗಳಲ್ಲಿ ಯತ್ನೈಸುತ್ತಾ ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು.


ನೀವಾದರೋ, ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವದಾದರೆ ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾವನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವನಲ್ಲ.


ಕರ್ತನ ಚಿತ್ತದ ವಿಷಯವಾದ ತಿಳುವಳಿಕೆಯಿಂದ ತುಂಬಿಕೊಂಡು ಆತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯವೆಂಬ ಫಲವನ್ನು ಕೊಡುತ್ತಾ ದೇವಜ್ಞಾನದಿಂದ ಅಭಿವೃದ್ಧಿಯಾಗುತ್ತಿರಬೇಕೆಂತಲೂ


ಅದಕ್ಕೆ ಯೇಸು - ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು ಅಂದನು.


ನೀವು ತನ್ನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಯನ್ನು ನಿಮಗೆ ಅನುಗ್ರಹಿಸಲಿ. ಆತನು ಯೇಸು ಕ್ರಿಸ್ತನ ಮೂಲಕ ತನಗೆ ಸಮರ್ಪಕವಾದದ್ದನ್ನು ನಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ಮತ್ತು ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ಎಣಿಕೆಯಲ್ಲಿ ಮೆಚ್ಚಿಕೆಯಾದ ಕಾರ್ಯಗಳನ್ನು ಮಾಡುವವರಾಗಿರುವದರಿಂದ ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.


ನನ್ನನ್ನು ಕಳುಹಿಸಿಕೊಟ್ಟಾತನು ನನ್ನ ಸಂಗಡ ಇದ್ದಾನೆ, ನಾನು ಆತನಿಗೆ ಮೆಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವದರಿಂದ ಆತನು ನನ್ನನ್ನು ಒಂಟಿಗನಾಗಿ ಬಿಡಲಿಲ್ಲ ಅಂದನು.


ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.


ಕಡೇ ಮಾತೇನಂದರೆ, ಸಹೋದರರೇ, ನಾವು ಕರ್ತನಾದ ಯೇಸುವಿನ ಅಧಿಕಾರದಿಂದ ನಿಮಗೆ ಕೊಟ್ಟ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.


ಆಗ - ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ ಎಂದು ಆಕಾಶವಾಣಿ ಆಯಿತು.


ಇದಲ್ಲದೆ ಪರೋಪಕಾರವನ್ನೂ ಧರ್ಮಮಾಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.


ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳ ಮಾತನ್ನು ಕೇಳಿರಿ;


ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


ಯಾಕಂದರೆ ದೇವರ ವಿಷಯವಾಗಿ ಅವರಿಗೆ ತಿಳುವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಘನಪಡಿಸಲಿಲ್ಲ; ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ವಿಚಾರ ಮಾಡಿಮಾಡಿ ಫಲ ಕಾಣಲಿಲ್ಲ; ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು