Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 8:9 - ಕನ್ನಡ ಸತ್ಯವೇದವು J.V. (BSI)

9 ನೀವಾದರೋ, ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವದಾದರೆ ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾವನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದಾಗ್ಯೂ, ನೀವೂ ದೇವರ ಆತ್ಮನ ಸ್ವಭಾವದ ಮೇಲೆ ಆತುಕೊಂಡು ಜೀವಿಸುವವರೇ ಹೊರತು ದೇಹಸ್ವಭಾವದವರಲ್ಲಾ. ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವುದಾದರೆ ನೀವು ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾರಲ್ಲಿ ಕ್ರಿಸ್ತನ ಆತ್ಮನು ಇಲ್ಲವೋ ಅವನು ಕ್ರಿಸ್ತನವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನಿಮ್ಮಲ್ಲಿ ನಿಜವಾಗಿಯೂ ದೇವರ ಆತ್ಮವು ನೆಲಸಿದ್ದರೆ ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಜೀವಿಸದೆ ಪವಿತ್ರಾತ್ಮ ಅವರ ಚಿತ್ತಕ್ಕೆ ಅನುಸಾರವಾಗಿ ಜೀವಿಸುತ್ತೀರಿ. ಯಾರಲ್ಲಿ ಕ್ರಿಸ್ತಯೇಸುವಿನ ಆತ್ಮ ಇಲ್ಲವೋ ಅಂಥವನು ಕ್ರಿಸ್ತಯೇಸುವಿಗೆ ಸೇರಿದವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ನೀವು ನಿಮ್ಮ ಪಾಪಸ್ವಭಾವದ ಆಡಳಿತಕ್ಕೆ ಒಳಗಾಗಿಲ್ಲ. ದೇವರಾತ್ಮನು ನಿಮ್ಮಲ್ಲಿ ನಿಜವಾಗಿಯೂ ವಾಸವಾಗಿದ್ದರೆ, ನೀವು ಪವಿತ್ರಾತ್ಮನ ಆಡಳಿತಕ್ಕೆ ಒಳಗಾಗಿದ್ದೀರಿ ಯಾವನಲ್ಲಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ, ಅವನು ಕ್ರಿಸ್ತನಿಗೆ ಸೇರಿದವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ದೇವರ ಆತ್ಮವು ನಿಮ್ಮಲ್ಲಿ ಇರುವುದು ನಿಜವಾಗಿದ್ದರೆ ನೀವು ಮಾಂಸಭಾವಾಧೀನರಾಗಿರದೆ ದೇವರ ಆತ್ಮನಿಗೆ ಅಧೀನರಾಗಿದ್ದೀರಿ. ಕ್ರಿಸ್ತ ಯೇಸುವಿನ ಆತ್ಮ ಇಲ್ಲದವನು ಕ್ರಿಸ್ತ ಯೇಸುವಿಗೆ ಸೇರಿದವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ತುಮಿ ತುಮ್ಚೊ ಮಾನುಸ್‍ಪಾನಾಚೊ ಸ್ವಬಾವ್ ಕಸೊ ಸಾಂಗ್ತಾ ತಸೆ ಚುಲುನಕಾಶಿ. ಹೆಚ್ಯಾ ಬದ್ಲಾಕ್, ಪವಿತ್ರ್ ಆತ್ಮೊ ಕಶೆ ಸಾಂಗ್ತಾ ತಸೆ ತುಮಿ ಚಲಾ. ಅಶೆ ಹೊಲ್ಯಾರ್ ಆತ್ಮೊಚ್ ತುಮ್ಚ್ಯಾ ಭುತ್ತುರ್ ಜಿವನ್ ಕರ್‍ತಾ. ಜೆ ಕೊನಾಕ್ಡೆ ಕ್ರಿಸ್ತಾಚೊ ಆತ್ಮೊ ನಾ ತೆನಿ ತೆಕಾ ಸಮಂದ್ ಪಡಲ್ಲೆ ನ್ಹಯ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 8:9
35 ತಿಳಿವುಗಳ ಹೋಲಿಕೆ  

ನೀವು ಪುತ್ರರಾಗಿರುವದರಿಂದ ದೇವರು ಅಪ್ಪಾ ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.


ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?


ನಿನ್ನ ವಶಕ್ಕೆ ಕೊಡಲ್ಪಟ್ಟಿರುವದನ್ನು ಶ್ರೇಷ್ಠವೆಂದು ತಿಳಿದು ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ಕಾಪಾಡು.


ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಗರ್ಭಗುಡಿಯಾಗಿದೆಂಬದು ನಿಮಗೆ ತಿಳಿಯದೋ?


ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.


ಆ ಸಹಾಯಕನು ಯಾರಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದರಿಂದ ಆತನನ್ನು ಹೊಂದಲಾರದು. ನೀವು ಆತನನ್ನು ಬಲ್ಲಿರಿ; ಹೇಗಂದರೆ ನಿಮ್ಮ ಬಳಿಯಲ್ಲಿ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.


ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.


ಕ್ರಿಸ್ತ ಯೇಸುವಿನವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ ಸ್ವೇಚ್ಫಾಭಿಲಾಷೆ ಸಹಿತ ಶಿಲುಬೆಗೆ ಹಾಕಿದವರು.


ಆತನಲ್ಲಿ ನೀವು ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವದಕ್ಕಾಗಿ ನಮ್ಮ ಸಂಗಡ ಕಟ್ಟಲ್ಪಡುತ್ತಾ ಇದ್ದೀರಿ.


ಯಾಕಂದರೆ ಜೀವವನ್ನುಂಟುಮಾಡುವ ಪವಿತ್ರಾತ್ಮನಿಂದಾದ ನಿಯಮವು ನಿನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ಕ್ರಿಸ್ತ ಯೇಸುವಿನ ಮೂಲಕ ಬಿಡಿಸಿತು.


ದೇಹದಿಂದ ಹುಟ್ಟಿದ್ದು ದೇಹವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ.


ಯಾಕಂದರೆ ನನಗೆ ಸಂಭವಿಸಿರುವದು ನೀವು ದೇವರಿಗೆ ಮಾಡುವ ವಿಜ್ಞಾಪನೆಯಿಂದಲೂ ಕ್ರಿಸ್ತನು ಹೇರಳವಾಗಿ ದಯಪಾಲಿಸುವ ಆತ್ಮನ ಸಹಾಯದಿಂದಲೂ ನನ್ನ ಪರಮಹಿತಕ್ಕೆ ಅನುಕೂಲಿಸುವದೆಂದು ಬಲ್ಲೆನು.


ದೇವರು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸಿದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳುತ್ತೇವೆ.


ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು;


ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೇ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವರವನ್ನು ಕೊಡುವನಲ್ಲವೇ ಅಂದನು.


ಪ್ರಿಯರಾದ ಮಕ್ಕಳೇ, ನೀವಂತೂ ದೇವರಿಂದ ಹುಟ್ಟಿದವರಾಗಿದ್ದೀರಿ; ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಹೆಚ್ಚಿನವನಾಗಿರುವದರಿಂದ ನೀವು ಆ ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ.


ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿರುವನು. ಕ್ರಿಸ್ತನು ಪ್ರಥಮಫಲ; ತರುವಾಯ ಕ್ರಿಸ್ತನ ಪ್ರತ್ಯಕ್ಷತೆಯಲ್ಲಿ ಆತನವರು ಎದ್ದುಬರುವರು.


ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ನೆಲೆಗೊಂಡಿರುತ್ತಾನೆ, ಆತನು ಇವನಲ್ಲಿ ನೆಲೆಗೊಂಡಿರುತ್ತಾನೆ. ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ಬಲ್ಲೆವು.


ದೇವರ ಮಂದಿರಕ್ಕೂ ವಿಗ್ರಹಗಳಿಗೂ ಒಪ್ಪಿಗೆ ಏನು? ನಾವು ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ. ಇದರ ಸಂಬಂಧವಾಗಿ ದೇವರು ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.


ಹೇಗಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮವರವನ್ನು ಅಳತೆಮಾಡದೆ ಅನುಗ್ರಹಿಸುವದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬದನ್ನು ಅವರು ಪರಿಶೋಧನೆ ಮಾಡಿದರು.


ಯಾವನ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ನಮಸ್ಕಾರ ಮಾಡುವರು.


ನೀವು ಮುಖದ ಮುಂದೆ ಇರುವಂಥದನ್ನು ನೋಡಿರಿ. ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ನಂಬಿಕೊಂಡರೆ ಅವನು ತಿರಿಗಿ ಆಲೋಚನೆ ಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ತಿಳುಕೊಳ್ಳಲಿ.


ಯೇಸು ಅವನಿಗೆ - ಯಾರಾದರೂ ನನ್ನನ್ನು ಪ್ರೀತಿಸುವವನಾದರೆ ನನ್ನ ಮಾತನ್ನು ಕೈಕೊಂಡು ನಡೆಯುವನು; ಅವನನ್ನು ನನ್ನ ತಂದೆಯು ಪ್ರೀತಿಸುವನು, ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು ಅವನ ಬಳಿಯಲ್ಲಿ ಬಿಡಾರವನ್ನು ಮಾಡಿಕೊಳ್ಳುವೆವು.


ಮೂಸ್ಯಕ್ಕೆ ಎದುರಾಗಿ ಬಂದಾಗ ಬಿಥೂನ್ಯಕ್ಕೆ ಹೋಗುವ ಪ್ರಯತ್ನಮಾಡಿದರು. ಅಲ್ಲಿಯೂ ಯೇಸುವಿನ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.


ನಾವು ಶರೀರಾಧೀನಸ್ವಭಾವವನ್ನು ಅನುಸರಿಸುತ್ತಿದ್ದಾಗ ದುರಾಶೆಗಳು ಧರ್ಮಶಾಸ್ತ್ರದಿಂದಲೇ ಪ್ರೇರಿತವಾಗಿ ನಮ್ಮ ಅಂಗಗಳಲ್ಲಿ ಯತ್ನೈಸುತ್ತಾ ಮರಣಕ್ಕೆ ಫಲವನ್ನು ಹುಟ್ಟಿಸುತ್ತಿದ್ದವು.


ಆದದರಿಂದ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ಅಪರಾಧನಿರ್ಣಯವು ಈಗ ಇಲ್ಲವೇ ಇಲ್ಲ.


ಕರ್ತನ ಸಂಸರ್ಗದಲ್ಲಿರುವವನಾದರೋ ಆತನೊಂದಿಗೆ ಒಂದೇ ಆತ್ಮವಾಗಿದ್ದಾನೆ.


ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವ ಹಾಗೆಯೂ ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು