Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:11 - ಕನ್ನಡ ಸತ್ಯವೇದವು J.V. (BSI)

11-12 ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದೆಯೂ ಇದ್ದಾಗ - ಹಿರಿಯನು ಕಿರಿಯನಿಗೆ ಸೇವೆ ಮಾಡುವನೆಂಬದಾಗಿ ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಸ್ಥಿರವಾಗಿರಬೇಕೆಂದು ತೋರಿಸಿದನು. ಆ ಸಂಕಲ್ಪವು ಪುಣ್ಯಕ್ರಿಯೆಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11-12 ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ, ಒಳ್ಳೆದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡುವ ಮೊದಲೇ “ಹಿರಿಯನು ಕಿರಿಯನಿಗೆ ಸೇವೆಮಾಡುವನೆಂಬುದಾಗಿ” ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಒಳ್ಳೆಯ ಕಾರ್ಯಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11-12 ಅವರು ಹುಟ್ಟುವುದಕ್ಕೆ ಮುಂಚೆಯೇ, ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡುವುದಕ್ಕೆ ಮೊದಲೇ, “ಹಿರಿಯವನು ಕಿರಿಯವನಿಗೆ ಸೇವೆಮಾಡುವನು,” ಎಂದು ಆಕೆಗೆ ಹೇಳಲಾಗಿತ್ತು. ಇದರಿಂದ ದೇವರು ತಮಗಿಷ್ಟಬಂದವರನ್ನು ಆರಿಸಿಕೊಳ್ಳುತ್ತಾರೆಂಬ ಸಂಕಲ್ಪವು ಸ್ಥಿರಗೊಂಡಿತು. ಈ ಸಂಕಲ್ಪ ಮಾನವನು ಸಾಧಿಸುವ ಸತ್ಕಾರ್ಯಗಳ ಮೇಲೆ ಅಲ್ಲ, ಕರೆನೀಡುವ ದೇವರ ಚಿತ್ತದ ಮೇಲೆ ನೆಲೆಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11-12 ಆದರೆ ಆ ಇಬ್ಬರು ಗಂಡುಮಕ್ಕಳು ಹುಟ್ಟುವ ಮೊದಲೇ, ದೇವರು ರೆಬೆಕ್ಕಳಿಗೆ, “ಹಿರಿಯವನು ಕಿರಿಯವನ ಸೇವೆ ಮಾಡುವನು” ಎಂದು ಹೇಳಿದನು. ಆ ಬಾಲಕರು ಯಾವ ಒಳ್ಳೆಯದಾಗಲಿ ಕೆಟ್ಟದ್ದಾಗಲಿ ಮಾಡುವ ಮೊದಲೇ ಇದಾಯಿತು. ದೇವರು ಆ ಬಾಲಕನನ್ನು ತನ್ನ ಸ್ವಂತ ಯೋಜನೆಗನುಸಾರವಾಗಿ ಆರಿಸಿಕೊಂಡಿದ್ದರಿಂದ ಆ ಬಾಲಕರು ಹುಟ್ಟುವದಕ್ಕಿಂತ ಮೊದಲೇ ಹೀಗೆ ಹೇಳಿದನು. ದೇವರು ಅವನನ್ನು ಆರಿಸಿಕೊಂಡಿದ್ದರಿಂದ ಅವನನ್ನೇ ಕರೆಯಬೇಕೆಂದಿದ್ದನು. ಆದರೆ ಅದು ಆ ಬಾಲಕರ ಯಾವುದೇ ಕಾರ್ಯಗಳ ಮೇಲೆ ಆಧಾರಗೊಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹೀಗೆ, ಆ ಮಕ್ಕಳು ಹುಟ್ಟುವುದಕ್ಕೆ ಮುಂಚೆ, ಒಳ್ಳೆಯದು ಅಥವಾ ಕೆಟ್ಟದ್ದನ್ನು ಮಾಡುವುದಕ್ಕೆ ಮುಂಚೆಯೇ, ದೇವರ ಆಯ್ಕೆಯ ಉದ್ದೇಶವು ಕೃತ್ಯಗಳಿಗೆ ಅನುಸಾರವಲ್ಲವೆಂಬುದು ಸ್ಥಿರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತಸೆ ರ್‍ಹಾಲ್ಯಾರ್‍ಬಿ ತಿ ಪೊರಾ ಜಲ್ಮುಚ್ಯಾ ಅದ್ದಿಚ್ ತೆನಿ ಬರೆ ಹೊಂವ್ದಿ, ವಾಯ್ಟ್ ಹೊಂವ್ದಿ ಕರುಚ್ಯಾ ಫಿಡೆಚ್, ದೆವಾನ್ ಥೊರ್ಲೊ ಧಾಕ್ಲ್ಯಾಚಿ ಚಾಕ್ರಿ ಕರ್‍ತಾ, ಮನುನ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:11
22 ತಿಳಿವುಗಳ ಹೋಲಿಕೆ  

ಆತನು ನಮ್ಮಲ್ಲಿ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವದಕ್ಕೆ ಕರೆದನು.


ಆದದರಿಂದ ಸಹೋದರರೇ, ದೇವರು ನಿಮ್ಮನ್ನು ಕರೆದದ್ದನ್ನೂ ಆದುಕೊಂಡದ್ದನ್ನೂ ದೃಢಪಡಿಸಿಕೊಳ್ಳುವದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡಹುವದಿಲ್ಲ.


ನಾವು ಮಾಡಿದ ಪುಣ್ಯಕ್ರಿಯೆಗಳ ನಿವಿುತ್ತದಿಂದಲ್ಲ ಆತನ ಕರುಣೆಯಲ್ಲಿಯೇ ಪುನರ್ಜನ್ಮವನ್ನು ಸೂಚಿಸುವ ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನು ನಮ್ಮಲ್ಲಿ ನೂತನಸ್ವಭಾವವನ್ನು ಉಂಟುಮಾಡುವದರ ಮೂಲಕವಾಗಿಯೂ ಆತನು ನಮ್ಮನ್ನು ರಕ್ಷಿಸಿದನು.


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವದೇನಂದರೆ - ನಾನು ಸಂಕಲ್ಪಿಸಿದ್ದೇ ನೆರವೇರುವದು, ಉದ್ದೇಶಿಸಿದ್ದೇ ನಿಲ್ಲುವದು, ಖಂಡಿತ.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.


ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇವಿುಸಿದ್ದೇನೆಂದು ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಅಬ್ರಹಾಮನು ನಮ್ಮೆಲ್ಲರಿಗೂ ದೇವರ ಸನ್ನಿಧಿಯಲ್ಲಿ ಮೂಲ ಪಿತೃವಾಗಿದ್ದಾನೆ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲದ್ದನ್ನು ಇರುವದಾಗಿ ಕರೆಯುವವನಾಗಿಯೂ ಇದ್ದಾನೆಂದು ಅಬ್ರಹಾಮನು ನಂಬಿದನು.


ಅದು ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.


ಹುಟ್ಟಿದಂದಿನಿಂದ ನಾನು ಪಾಪಿಯೇ; ಮಾತೃಗರ್ಭವನ್ನು ಹೊಂದಿದ ದಿನದಿಂದ ದ್ರೋಹಿಯೇ.


ದೇವರು ಪ್ರೀತಿಸಿದ ಸಹೋದರರೇ, ಆತನು ನಿಮ್ಮನ್ನು ಆದುಕೊಂಡನೆಂಬದನ್ನೂ


ನಾವೆಲ್ಲರೂ ಪೂರ್ವದಲ್ಲಿ ಅವಿಧೇಯರಾಗಿದ್ದು ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಫೆಗಳನ್ನು ನೆರವೇರಿಸುತ್ತಾ ನಡೆದು ವಿುಕ್ಕಾದವರಂತೆ ಸ್ವಭಾವಸಿದ್ಧವಾಗಿ ದೇವರ ಕೋಪಕ್ಕೆ ಗುರಿಯಾಗಿದ್ದೆವು.


ಗರ್ವದ ಸಕಲ ವೈಭವವನ್ನು ಹೊಲಸುಮಾಡಬೇಕೆಂತಲೂ ಲೋಕಮಾನ್ಯರೆಲ್ಲರನ್ನು ಅವಮಾನ ಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.


ತನ್ನ ರಾಜ್ಯಪ್ರಭಾವಗಳಲ್ಲಿ ಪಾಲುಗಾರರಾಗುವದಕ್ಕೆ ಕರೆಯುವ ದೇವರಿಗೆ ಯೋಗ್ಯರಾಗಿ ನೀವು ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೇ ತಿಳಿದದೆ.


ದೇಶವೆಲ್ಲಾ ನೊಂದು ನಡುಗುತ್ತದೆ; ಏಕಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು