Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:17 - ಕನ್ನಡ ಸತ್ಯವೇದವು J.V. (BSI)

17 ದೇವರು ಫರೋಹನನ್ನು ಕುರಿತು - ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬದಾಗಿ ಶಾಸ್ತ್ರೋಕ್ತಿ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದೇವರು ಫರೋಹನನನ್ನು ಕುರಿತು “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತ ಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬುದಾಗಿ” ಧರ್ಮಶಾಸ್ತ್ರದಲ್ಲಿ ಬರೆಯಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಪವಿತ್ರಗ್ರಂಥದಲ್ಲಿ ಫರೋಹನಿಗೆ ಹೀಗೆಂದು ಹೇಳಲಾಗಿದೆ: “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ಪ್ರದರ್ಶಿಸುವ ಸಲುವಾಗಿ ಹಾಗು ಜಗತ್ತಿನಲ್ಲೆಲ್ಲಾ ನನ್ನ ಹೆಸರನ್ನು ಪ್ರಖ್ಯಾತಪಡಿಸಿಕೊಳ್ಳುವ ಸಲುವಾಗಿ ನಿನ್ನನ್ನು ಉನ್ನತಸ್ಥಾನಕ್ಕೆ ಏರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪವಿತ್ರ ಗ್ರಂಥದಲ್ಲಿ ದೇವರು ಫರೋಹನಿಗೆ, “ನಾನು ನಿನಗೆ ನನ್ನ ಶಕ್ತಿಯನ್ನು ತೋರಿಸಬೇಕೆಂತಲೂ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಿಪಡಿಸಬೇಕೆಂತಲೂ ನಿನ್ನನ್ನು ರಾಜನನ್ನಾಗಿ ಮಾಡಿದೆನು” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ, “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತಸ್ಥಾನಕ್ಕೆ ಏರಿಸಿದೆನು,” ಎಂದು ಪವಿತ್ರ ವೇದದಲ್ಲಿ ದೇವರು ಫರೋಹನಿಗೆ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಕಶ್ಯಾಕ್ ಮಟ್ಲ್ಯಾರ್ ಇಜಿಪ್ತಾಚ್ಯಾ ರಾಜಾಕ್ ದೆವ್ ಮನ್ತಾ, “ಮಿಯಾ ತುಜ್ಯಾ ಭುತ್ತುರ್ ಮಾಜೊ ಬಳ್ ದಾಕ್ವುನ್ ಮಾಜೆ ನಾವ್ ಸಗ್ಳ್ಯಾ ಜಗಾತ್ ಕಳಿ ಸರ್ಕೆ ಹೊವ್ಕ್ ಪಾಜೆ ಮನುನ್ ಮಿಯಾ ತುಕಾ ಮೊಟ್ಯಾ ಜಾಗ್ಯಾ ವರ್‍ತಿ ಬಸ್ವುಲೊ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:17
25 ತಿಳಿವುಗಳ ಹೋಲಿಕೆ  

ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದೆನು.


ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನುಂಟುಮಾಡಿದ್ದಾನೆ.


ನಾನು ಅವರಿಗೆ ನಿನ್ನ ಹೆಸರನ್ನು ತಿಳಿಸಿದ್ದೇನೆ, ಇನ್ನೂ ತಿಳಿಸುವೆನು. ನೀನು ನನ್ನ ಮೇಲೆ ಇಟ್ಟಂಥ ಪ್ರೀತಿಯು ಅವರಲ್ಲಿ ಇರಬೇಕೆಂದೂ ನಾನೂ ಅವರಲ್ಲಿ ಇರಬೇಕೆಂದೂ ಪ್ರಾರ್ಥಿಸುತ್ತೇನೆ ಅಂದನು.


ಯೆಹೋವನೇ, ನಮ್ಮ ದೇವರೇ, ನೀನೇ ಅದ್ವಿತೀಯನಾದ ಯೆಹೋವನೆಂಬದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು.


ನೀನು ಈಗ ಸುಮ್ಮನಿದ್ದು ಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು, ಯಾರು ಬಲ್ಲರು ಎಂದು ಹೇಳಿ ಕಳುಹಿಸಿದನು.


ಅದಕ್ಕೆ ಅವರು - ನಿನ್ನ ಸೇವಕರಾದ ನಾವು ನಿಮ್ಮ ದೇವರಾದ ಯೆಹೋವನ ನಾಮಮಹತ್ತಿನ ನಿವಿುತ್ತ ಬಹುದೂರ ದೇಶದಿಂದ ಬಂದಿದ್ದೇವೆ. ನಮ್ಮ ಹಿರಿಯರೂ ದೇಶನಿವಾಸಿಗಳೂ ಆತನು ಐಗುಪ್ತದಲ್ಲಿ ನಡಿಸಿದ ಮಹತ್ಕಾರ್ಯಗಳ ಸುದ್ದಿಯನ್ನೂ


ಹಾಗಾಗದೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವದರಿಂದ ಉಂಟಾಗುವ ಆ ವಾಗ್ದಾನದ ಫಲವು ನಂಬುವವರಿಗೇ ಕೊಡಲ್ಪಡಬೇಕೆಂದು ಶಾಸ್ತ್ರವು ಸಮಸ್ತವನ್ನು ಪಾಪಕ್ಕೊಳಗಾಗಿದೆಯೆಂದು ತೀರ್ಮಾನಿಸಿತು.


ಅಯ್ಯೋ, ಪ್ರತಾಪವುಳ್ಳ ಈ ದೇವರುಗಳ ಕೈಯಿಂದ ನಮ್ಮನ್ನು ಬಿಡಿಸುವವರಾರು? ಐಗುಪ್ತ್ಯರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೋ!


ಆದರೂ ಶಾಸ್ತ್ರವು ಏನು ಹೇಳುತ್ತದೆ? ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ದಾಸಿಯ ಮಗನು ಧರ್ಮಪತ್ನಿಯ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯನಾಗಬಾರದೆಂದು ಹೇಳುತ್ತದೆ.


ದೇವರು ಅನ್ಯಜನರನ್ನು ನಂಬಿಕೆಯ ನಿವಿುತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬದಾಗಿ ಶಾಸ್ತ್ರವು ಮೊದಲೇ ಕಂಡು ಅಬ್ರಹಾಮನಿಗೆ - ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಶುಭವರ್ತಮಾನವನ್ನು ಮುಂಚಿತವಾಗಿಯೇ ತಿಳಿಸಿತು.


ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ ದೇವರ ಉತ್ತರವೇನಂದರೆ - ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ ಎಂಬದೇ.


ರಾಜಾ, ನೀನು ಬೆಳೆದು ಬಲಗೊಂಡಿದ್ದೀ, ನಿನ್ನ ಮಹಿಮೆಯು ವೃದ್ಧಿಯಾಗಿ ಆಕಾಶಕ್ಕೆ ಮುಟ್ಟಿದೆ, ನಿನ್ನ ಆಳಿಕೆಯು ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.


ಮನುಷ್ಯರ ಕೋಪವೂ ನಿನ್ನ ಘನಕ್ಕೇ ಸಾಧಕವಾಗುವದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ಅವರು ನಿನಗೆ ತಿಳಿಯ ಹೇಳಲಿ, ಸೇನಾಧೀಶ್ವರನಾದ ಯೆಹೋವನು ಐಗುಪ್ತದ ವಿಷಯವಾಗಿ ಉದ್ದೇಶಿಸಿದ್ದನ್ನು ಅರಿತುಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು