Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:7 - ಕನ್ನಡ ಸತ್ಯವೇದವು J.V. (BSI)

7 ಹಾಗೆಯೇ ಅಬ್ರಹಾಮನ ವಂಶದಲ್ಲಿ ಹುಟ್ಟಿದ ಮಾತ್ರಕ್ಕೆ ಅವರೆಲ್ಲರು ಮಕ್ಕಳೆಂದು ಎಣಿಸಲ್ಪಡುವದಿಲ್ಲ. ಆದರೆ - ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು ಎಂದು ದೇವರು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹಾಗೆಯೇ ಅಬ್ರಹಾಮನ ವಂಶದಲ್ಲಿ ಹುಟ್ಟಿದ ಮಾತ್ರಕ್ಕೆ ಅವರೆಲ್ಲರೂ ಮಕ್ಕಳೆಂದು ಎಣಿಸಲ್ಪಡುವುದಿಲ್ಲ. ಆದರೆ “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು.” ಎಂದು ದೇವರು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಂತೆಯೇ ಅಬ್ರಹಾಮನ ಸಂತತಿಯಲ್ಲಿ ಹುಟ್ಟಿದ ಮಾತ್ರಕ್ಕೆ ಎಲ್ಲರೂ ಅಬ್ರಹಾಮನ ಮಕ್ಕಳಾಗುವುದಿಲ್ಲ. “ಇಸಾಕನಿಂದ ಹುಟ್ಟುವವರು ನಿನ್ನ ಸಂತತಿ ಎನಿಸಿಕೊಳ್ಳುವರು,” ಎಂದು ದೇವರು ಅಬ್ರಹಾಮನಿಗೆ ನುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅಬ್ರಹಾಮನ ಸಂತತಿಗಳವರಲ್ಲಿ ಕೆಲವರು ಮಾತ್ರ ಅಬ್ರಹಾಮನ ನಿಜವಾದ ಮಕ್ಕಳಾಗಿದ್ದಾರೆ. ದೇವರು ಅವನಿಗೆ, “ಇಸಾಕನು ಮಾತ್ರ ನಿಮಗೆ ನ್ಯಾಯಬದ್ಧವಾದ ಮಗನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅಥವಾ ಅಬ್ರಹಾಮನ ಸಂತತಿಯವರೆಲ್ಲ ಅವನ ಮಕ್ಕಳಲ್ಲ. ಆದರೆ, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು,” ಎಂದು ಹೇಳಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ನಾಹೊಲ್ಯಾರ್ ಅಬ್ರಾಹಾಮಾಚ್ಯಾ ಘರಾನ್ಯಾಚೆ ಸಗ್ಳೆ ಜಾನಾಬಿ ದೆವಾಚಿ ಪೊರಾ ನ್ಹಯ್. ದೆವಾನ್ ಅಬ್ರಾಹಾಮಾಕ್, “ ಇಸಾಕಾ ವೈನಾ ಪಿಳ್ಗಿ ಯೆತಾ ತಿಚ್ ತುಜಿ ಪಿಳ್ಗಿ ವಾಡ್ತಾ.” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:7
11 ತಿಳಿವುಗಳ ಹೋಲಿಕೆ  

ಆದರೆ ದೇವರು ಅವನಿಗೆ - ಮಗನ ಮತ್ತು ದಾಸಿಯ ದೆಸೆಯಿಂದ ನಿನಗೆ ಕರಕರೆಯಾಗಬಾರದು; ಸಾರಳು ಹೇಳಿದಂತೆಯೇ ಮಾಡು; ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು;


ತೊತ್ತಿನ ಮಗನು ಸ್ವಾಭಾವಿಕವಾಗಿ ಹುಟ್ಟಿದನು. ಧರ್ಮಪತ್ನಿಯ ಮಗನೋ ವಾಗ್ದಾನದ ಫಲವಾಗಿ ಹುಟ್ಟಿದನು.


ನಿಜವಾದ ಸುನ್ನತಿಯವರು ಯಾರಂದರೆ - ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವೇ.


ಹಾಗಾದರೆ ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿತೆಂಬದನ್ನು ತಕ್ಕ ಫಲಗಳಿಂದ ತೋರಿಸಿರಿ. ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂದು ನಿಮ್ಮೊಳಗೆ ಅಂದುಕೊಳ್ಳುವವರಾಗಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ಅದಕ್ಕವರು - ನಾವು ಅಬ್ರಹಾಮನ ಸಂತಾನದವರು; ನಾವು ಯಾರಿಗೂ ಎಂದೂ ದಾಸರಾಗಿಲ್ಲ; ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಳುವದು ಹೇಗೆ? ಅಂದರು.


ಅವನು - ತಂದೆಯೇ, ಅಬ್ರಹಾಮನೇ, ಹಾಗಲ್ಲ; ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ದೇವರ ಕಡೆಗೆ ತಿರುಗಿಕೊಳ್ಳುವರು ಅಂದನು.


ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂಬುವ ಆಲೋಚನೆಯನ್ನು ಬಿಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ಸಹೋದರರೇ, ನಾವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು