Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೋಮಾಪುರದವರಿಗೆ 9:8 - ಕನ್ನಡ ಸತ್ಯವೇದವು J.V. (BSI)

8 ಆ ಮಾತಿನ ಅರ್ಥವೇನಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ, ವಾಗ್ದಾನಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು ಎಣಿಸಲ್ಪಡುವರು ಎಂಬದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಮಾತಿನ ಅರ್ಥವೇನಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು ಎಣಿಸಲ್ಪಡುವರು ಎಂಬುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ಮಾತಿನ ಅರ್ಥವೇನೆಂದರೆ: ಶರೀರ ಸಂಬಂಧದಿಂದ ಹುಟ್ಟಿದವರೆಲ್ಲರೂ ದೇವರ ಮಕ್ಕಳಾಗುವುದಿಲ್ಲ; ದೈವವಾಗ್ದಾನದ ಪರಿಣಾಮವಾಗಿ ಹುಟ್ಟಿದವರೇ ನಿಜವಾಗಿಯೂ ಅಬ್ರಹಾಮನ ಸಂತತಿ ಎನಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇದರರ್ಥವೇನೆಂದರೆ, ಶರೀರ ಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ದೇವರ (ನಿಜ) ಮಕ್ಕಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದರ ಅರ್ಥ, ಶರೀರಸಂಬಂಧದ ಮಕ್ಕಳು ದೇವರ ಮಕ್ಕಳಾಗಿರದೆ ವಾಗ್ದಾನದ ಮಕ್ಕಳೇ ಅಬ್ರಹಾಮನ ಮಕ್ಕಳೆಂದು ಎನಿಸಿಕೊಳ್ಳುವರು ಎಂಬುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅಶೆ ಮಟ್ಲ್ಯಾರ್ ಅಸೆಚ್ ಸಹಜ್ ಜಲಮಲ್ಲೆ ಸಗ್ಳೆ ಜಾನಾ ದೆವಾಚಿ ಪೊರಾ ನ್ಹಯ್; ಹೆಚ್ಯಾ ಬದ್ಲಾಕ್, ಕಾಯ್ ಮಟ್ಲ್ಯಾರ್ ದೆವಾನ್ ಗೊಸ್ಟ್ ದಿವ್ನ್ ಸಾಂಗಲ್ಲ್ಯಾ ಗೊಸ್ಟಿಕ್‍ ಲಾಗುನ್ ಜೆ ಕೊನ್ ಜಲಮ್ಲ್ಯಾತ್ ತೆನಿ ಖರ್ಯಾ ಘರಾನ್ಯಾಚೆ ಮನುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೋಮಾಪುರದವರಿಗೆ 9:8
14 ತಿಳಿವುಗಳ ಹೋಲಿಕೆ  

ಇವರು ರಕ್ತಸಂಬಂಧದಿಂದಾಗಲಿ ಕಾಮದಿಂದಾಗಲಿ ಪುರುಷಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.


ಯಾರಾರು ದೇವರ ಆತ್ಮನಿಂದ ನಡಿಸಿಕೊಳ್ಳುತ್ತಾರೋ ಅವರು ದೇವರ ಮಕ್ಕಳು.


ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ [ಪ್ರತಿಯೊಂದರ ವಿಷಯ] - ಇದು ಅಲ್ಲಿಯೇ ಹುಟ್ಟಿದ್ದು ಎಂದು ಬರೆಯುವನು. ಸೆಲಾ.


ಆತನನ್ನು ಸೇವಿಸುವವರ ಸಂತಾನದವರು ಯೆಹೋವನ ಸಂತಾನದವರೆಂದು ಎಣಿಸಲ್ಪಡುವರು.


ಅವನು ನಮ್ಮನ್ನು ಅನ್ಯರೆಂದು ಎಣಿಸುತ್ತಾನಲ್ಲಾ; ಅವನು ನಮ್ಮನ್ನು ಮಾರಿ ನಮ್ಮ ಮೂಲಕ ಸಿಕ್ಕಿದ ದ್ರವ್ಯವನ್ನು ತಾನೇ ನುಂಗಿಬಿಟ್ಟನು.


ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು; ಮುಂದಲೆಯನ್ನು ಬೋಳಿಸಿಕೊಳ್ಳಲೂಬಾರದು.


ಅಬ್ರಹಾಮನು ನಮಗೆ ಮೂಲಪುರುಷನಲ್ಲವೇ ಎಂಬುವ ಆಲೋಚನೆಯನ್ನು ಬಿಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ನಾವು ದೇವರ ಮಕ್ಕಳಾಗಿದ್ದೇವೆಂಬದಕ್ಕೆ ಪವಿತ್ರಾತ್ಮನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.


ದೇವಪುತ್ರರ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಜಗತ್ತು ಬಹು ಲವಲವಿಕೆಯಿಂದ ಎದುರುನೋಡುತ್ತಿರುವದು.


ಇದಲ್ಲದೆ ಸಾರಳು ವಾಗ್ದಾನಮಾಡಿದಾತನನ್ನು ನಂಬತಕ್ಕವನೆಂದೆಣಿಸಿ ತಾನು ಪ್ರಾಯ ಮೀರಿದವಳಾಗಿದ್ದರೂ ನಂಬಿಕೆಯಿಂದಲೇ ಗರ್ಭವತಿಯಾಗುವದಕ್ಕೆ ಶಕ್ತಿಯನ್ನು ಹೊಂದಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು