ರೋಮಾಪುರದವರಿಗೆ 9:9 - ಕನ್ನಡ ಸತ್ಯವೇದವು J.V. (BSI)9 ಮುಂದಿನ ವರುಷದ ಇದೇ ಕಾಲದಲ್ಲಿ ನಾನು ಬರುವೆನು, ಆಗ ಸಾರಳಿಗೆ ಮಗನು ಇರುವನು ಎಂಬ ಮಾತು ವಾಗ್ದಾನವಾಗಿದೆಯಷ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 “ಮುಂದಿನ ವರ್ಷದಲ್ಲಿ ಇದೇ ಕಾಲದಲ್ಲಿ ನಾನು ಬರುವೆನು ಆಗ ಸಾರಳಿಗೆ ಮಗನು ಇರುವನು” ಎಂಬ ವಾಗ್ದಾನವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆ ವಾಗ್ದಾನ ಹೀಗಿತ್ತು: “ನಿಯಮಿತ ಕಾಲದಲ್ಲಿ ನಾನು ಮರಳಿ ಬರುವೆನು. ಆಗ ಸಾರಳಿಗೆ ಒಬ್ಬ ಮಗನಿರುವನು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವರು ಅವನಿಗೆ, “ನೇಮಿತ ಕಾಲದಲ್ಲಿ ನಾನು ಹಿಂತಿರುಗಿಬರುವೆನು, ಆಗ ಸಾರಳಿಗೆ ಒಬ್ಬ ಮಗನಿರುವನು” ಎಂಬ ವಾಗ್ದಾನ ಮಾಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಏಕೆಂದರೆ, “ನೇಮಕವಾದ ಕಾಲದಲ್ಲಿ ನಾನು ತಿರುಗಿ ಬಂದಾಗ ಸಾರಳಿಗೆ ಒಬ್ಬ ಮಗನಿರುವನು,” ಅದು ವಾಗ್ದಾನದ ಮಾತಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಕಶ್ಯಾಕ್ ಮಟ್ಲ್ಯಾರ್, ದೆವಾನ್ ಹ್ಯಾ ಗೊಸ್ಟಿಯಾಂಚ್ಯಾ ವೈನಾ ಗೊಸ್ಟ್ ದಿಲ್ಯಾನ್,“ಸಮಾ ಎಳಾರ್ ಮಿಯಾ ಯೆತಾ, ಅನಿ ಸಾರಾಕ್ ಎಕ್ ಲೆಕ್ ಹೊಲ್ಲೊ ರ್‍ಹಾತಾ” ಅಧ್ಯಾಯವನ್ನು ನೋಡಿ |