Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:15 - ಕನ್ನಡ ಸತ್ಯವೇದವು J.V. (BSI)

15 ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯದವನಾಗಿರುವನು; ಅವನು ಹುಟ್ಟಿದಂದಿನಿಂದಲೂ ಪವಿತ್ರಾತ್ಮಭರಿತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರನ ದೃಷ್ಟಿಯಲ್ಲಿ ಅವನು ಮಹಾತ್ಮನಾಗುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಸೇವಿಸನು; ತಾಯಿಯ ಉದರದಿಂದಲೇ ಪವಿತ್ರಾತ್ಮಭರಿತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಪ್ರಭುವಿನ ದೃಷ್ಟಿಯಲ್ಲಿ ಯೋಹಾನನು ಮಹಾಪುರುಷನಾಗಿರುವನು. ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯುವುದಿಲ್ಲ. ಯೋಹಾನನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವನು ಕರ್ತದೇವರ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಕುಡಿಯುವುದಿಲ್ಲ, ಅವನು ತಾಯಿಯ ಗರ್ಭದಿಂದಲೇ ಪವಿತ್ರಾತ್ಮ ಭರಿತನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ದೆವಾಚ್ಯಾ ನದ್ರೆತ್ ತೊ ಮೊಟೊ ಮಾನುಸ್ ಹೊತಾ, ಅನಿ ತೊ ವಾಯ್ನ್ ಹೊಂವ್ದಿ, ನಿಶಾ ಹೊತಲೆ ಕಾಯ್ಬಿ ಹೊಂವ್ದಿ ಫಿ ನಾ. ತೊ ಜಲ್ಮುಚ್ಯಾಕಿ ಅದ್ದಿತ್ನಾಚ್ ತೊ ಪವಿತ್ರ್ ಆತ್ಮ್ಯಾನ್ ಭರಲ್ಲೊ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:15
22 ತಿಳಿವುಗಳ ಹೋಲಿಕೆ  

ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವದಕ್ಕೆ ಮುಂಚೆ ನಿನ್ನನ್ನು ತಿಳಿದಿದ್ದೆನು; ನೀನು ಉದರದಿಂದ ಬರುವದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು; ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇವಿುಸಿದ್ದೇನೆ.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ; ಅದರಿಂದ ಪಟಿಂಗತನವು ಹುಟ್ಟುತ್ತದೆ.


ಆದರೆ ನಾನು ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ ತನ್ನ ಕೃಪೆಯಿಂದ ಕರೆದ ದೇವರು


ಆಗ ಅವರೆಲ್ಲರು ಪವಿತ್ರಾತ್ಮಭರಿತರಾಗಿ ಆ ಆತ್ಮ ತಮತಮಗೆ ನುಡಿಯುವ ಶಕ್ತಿಯನ್ನು ಕೊಡುವ ಪ್ರಕಾರ ಬೇರೆಬೇರೆ ಭಾಷೆಗಳಿಂದ ಮಾತಾಡುವದಕ್ಕೆ ಪ್ರಾರಂಭಿಸಿದರು.


ಹೇಗಂದರೆ ಸ್ನಾನಿಕನಾದ ಯೋಹಾನನು ಬಂದಿದ್ದಾನೆ; ಅವನು ರೊಟ್ಟಿ ತಿನ್ನದವನು, ದ್ರಾಕ್ಷಾರಸ ಕುಡಿಯದವನು; ನೀವು - ಅವನಿಗೆ ದೆವ್ವ ಹಿಡಿದದೆ ಅನ್ನುತ್ತೀರಿ.


ಆ ದಿವಸ ಯೆಹೋವನು ಯೆಹೋಶುವನನ್ನು ಇಸ್ರಾಯೇಲ್ಯರೆಲ್ಲರ ದೃಷ್ಟಿಯಲ್ಲಿ ಘನಪಡಿಸಿದ್ದರಿಂದ ಅವರು ಮೋಶೆಯಲ್ಲಿ ಹೇಗೋ ಹಾಗೆಯೇ ಇವನಲ್ಲಿಯೂ ಇವನು ಜೀವದಿಂದಿದ್ದ ಕಾಲವೆಲ್ಲಾ ಭಯಭಕ್ತಿಯುಳ್ಳವರಾಗಿದ್ದರು.


ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಯೋಹಾನನಿಗಿಂತ ದೊಡ್ಡವನು ಒಬ್ಬನೂ ಇಲ್ಲ; ಆದರೂ ದೇವರ ರಾಜ್ಯದಲ್ಲಿ ಚಿಕ್ಕವನು ಅವನಿಗಿಂತಲೂ ದೊಡ್ಡವನೆಂದು ನಿಮಗೆ ಹೇಳುತ್ತೇನೆ.


ನೀನು ಹೋದಲ್ಲೆಲ್ಲಾ ನಿನ್ನ ಸಂಗಡ ಇದ್ದೆನು. ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು.


ಆಗ ಯೆಹೋವನು ಯೆಹೋಶುವನಿಗೆ - ನಾನು ಇಂದಿನಿಂದ ನಿನ್ನನ್ನು ಇಸ್ರಾಯೇಲ್ಯರೆಲ್ಲರ ಮುಂದೆ ಘನಪಡಿಸುವೆನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರುವೆನೆಂಬದು ಅವರಿಗೆ ಗೊತ್ತಾಗುವದು.


ಸೇನಾಧೀಶ್ವರ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು [ಶತ್ರುಗಳನ್ನು] ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; [ರಕ್ತವನ್ನು] ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ ಯಜ್ಞವೇದಿಯ ಮೂಲೆಗಳ ಹಾಗೂ ರಕ್ತಪೂರ್ಣರಾಗಿರುವರು.


ತಾಯಿಯ ಗರ್ಭದೊಳಗಿಂದ ನನ್ನನ್ನು ಬರಮಾಡಿದವನು ನೀನೇ ಅಲ್ಲವೇ. ತಾಯಿಯ ಎದೆಯಲ್ಲಿ ನನ್ನನ್ನು ನಿಶ್ಚಿಂತೆಯಿಂದ ಇರಿಸಿದವನು ನೀನೇ ಅಲ್ಲವೇ.


ಪ್ರಭಾವೈಶ್ವರ್ಯಗಳು ನಿನ್ನ ಸನ್ನಿಧಿಯಿಂದ ಬರುತ್ತವೆ; ನೀನು ಸರ್ವಾಧಿಕಾರಿಯು; ಬಲಪರಾಕ್ರಮಗಳು ನಿನ್ನ ಹಸ್ತದಲ್ಲಿರುತ್ತವೆ; ಎಲ್ಲಾ ದೊಡ್ಡಸ್ತಿಕೆಗೂ ಶಕ್ತಿಗೂ ನೀನೇ ಮೂಲನು.


ಅದರೆ ಅವನ ತಂದೆ ಒಪ್ಪದೆ - ಮಗನೇ, ನಾನು ಬಲ್ಲೆ, ಬಲ್ಲೆ; ಇವನಿಂದಲೂ ಜನಾಂಗವುಂಟಾಗುವದು; ಇವನೂ ಬಲಿಷ್ಠನಾಗುವನು; ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು; ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು ಎಂದು ಹೇಳಿದನು.


ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.


ಯೋಹಾನನು ಉರಿಯುವ ದೀಪದೋಪಾದಿಯಲ್ಲಿ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪಕಾಲ ವಿನೋದಗೊಳ್ಳುವದಕ್ಕೆ ಮನಸ್ಸುಮಾಡಿದಿರಿ.


ಅದಕ್ಕವರು - ನಾವು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲ; ನಮ್ಮ ಪಿತೃವಾದ ರೇಕಾಬನ ಮಗನಾದ ಯೋನಾದಾಬನು ನಮಗೆ - ನೀವಾಗಲಿ ನಿಮ್ಮ ಸಂತಾನದವರಾಗಲಿ ಯುಗಯುಗಾಂತರಕ್ಕೂ ದ್ರಾಕ್ಷಾರಸ ಕುಡಿಯಬಾರದು;


ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು. ನಿನಗೆ ಸಂತೋಷವೂ ಉಲ್ಲಾಸವೂ ಉಂಟಾಗುವದು; ಮತ್ತು ಅವನು ಹುಟ್ಟಿದ್ದಕ್ಕೆ ಬಹು ಜನರು ಸಂತೋಷಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು