Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:19 - ಕನ್ನಡ ಸತ್ಯವೇದವು J.V. (BSI)

19 ಆ ದೂತನು - ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನ ಕೂಡ ಮಾತಾಡಿ ಈ ಶುಭವರ್ತಮಾನವನ್ನು ನಿನಗೆ ತಿಳಿಸುವದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದಕ್ಕೆ ಆ ದೂತನು, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನೊಂದಿಗೆ ಮಾತನಾಡಿ ಈ ಶುಭವಾರ್ತೆಯನ್ನು ನಿನಗೆ ತಿಳಿಸುವುದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆಗ ದೇವದೂತನು, “ನಾನು ದೇವರ ಸನ್ನಿಧಿಯಲ್ಲಿ ಸೇವೆಮಾಡುವ ಗಬ್ರಿಯೇಲನು; ಈ ಶುಭಸಮಾಚಾರವನ್ನು ನಿನಗೆ ತಿಳಿಸುವುದಕ್ಕಾಗಿ ದೇವರ ಅಪ್ಪಣೆಯ ಪ್ರಕಾರ ಬಂದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವದೂತನು, “ನನ್ನ ಹೆಸರು ಗಬ್ರಿಯೇಲ. ನಾನು ದೇವರ ಸನ್ನಿಧಿಯಲ್ಲಿ ನಿಂತುಕೊಂಡಿರುವವನು. ನಿನಗೆ ಈ ಶುಭಸಮಾಚಾರವನ್ನು ತಿಳಿಸಲು ದೇವರು ನನ್ನನ್ನು ಕಳುಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅದಕ್ಕೆ ಆ ದೂತನು ಉತ್ತರವಾಗಿ, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು. ನಿನ್ನ ಸಂಗಡ ಮಾತನಾಡುವುದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವುದಕ್ಕೂ ದೇವರು ನನ್ನನ್ನು ಕಳುಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತನ್ನಾ ದೆವಾಚ್ಯಾ ದುತಾನ್ “ದೆವಾಚ್ಯಾ ಇದ್ರಾಕ್ ರ್‍ಹಾತಲೊ ಘಾಬ್ರಿಯೆಲ್ ಮಿಯಾ, ತುಜೆಕ್ಡೆ ಬೊಲುಕ್ ಅನಿ ತುಕಾ ಹಿ ಬರಿ ಖಬರ್ ಸಾಂಗುಕ್ ಮನುನ್ ದೆವಾನ್ ಮಾಕಾ ಧಾಡುನ್ ದಿಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:19
8 ತಿಳಿವುಗಳ ಹೋಲಿಕೆ  

ಆರನೆಯ ತಿಂಗಳಲ್ಲಿ ದೇವರು ಗಬ್ರಿಯೇಲನೆಂಬ ತನ್ನ ದೂತನನ್ನು ಗಲಿಲಾಯ ಸೀಮೆಯ ನಜರೇತೆಂಬ ಊರಿಗೆ ಒಬ್ಬ ಕನ್ಯೆಯ ಬಳಿಗೆ ಕಳುಹಿಸಿದನು;


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡಬಾರದು ನೋಡಿರಿ; ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಲಿದ್ದಾರೆ ಎಂದು ನಿಮಗೆ ಹೇಳುತ್ತೇನೆ.


ಆಗ - ಗಬ್ರಿಯೇಲನೇ, ಕನಸಿನ ಅರ್ಥವನ್ನು ಇವನಿಗೆ ತಿಳಿಯಪಡಿಸು ಎಂದು ಮನುಷ್ಯಧ್ವನಿಯಂಥ ಒಂದು ವಾಣಿಯು ಊಲಾಕಾಲುವೆಯ ದಡಗಳ ನಡುವೆ ನನಗೆ ಕೇಳಿಸಿತು.


ಆಕಾಶಮಂಡಲಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಪ್ರತಿಜ್ಞೆಯನ್ನು ಬಿಡದೆ ಹಿಡಿಯೋಣ.


ಆ ದೂತನು ಅವರಿಗೆ - ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭಸಮಾಚಾರವನ್ನು ನಿಮಗೆ ತಿಳಿಸುತ್ತೇನೆ.


ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವದು; ಆದರೆ ನೀನು ಅದನ್ನು ನಂಬದೆಹೋದದ್ದರಿಂದ ಅದೆಲ್ಲಾ ಸಂಭವಿಸುವ ದಿನದವರೆಗೂ ಮಾತನಾಡಲಾರದೆ ಮೂಕನಾಗಿರುವಿ ಎಂದು ಅವನಿಗೆ ಉತ್ತರಕೊಟ್ಟನು.


ಆದರೆ ಬರುವದಕ್ಕಿರುವ ಇವೆಲ್ಲವುಗಳೊಳಗಿಂದ ತಪ್ಪಿಸಿಕೊಳ್ಳುವದಕ್ಕೂ ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವದಕ್ಕೂ ನೀವು ಪೂರ್ಣ ಶಕ್ತರಾಗುವಂತೆ ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆ ಮಾಡಿಕೊಳ್ಳುತ್ತಾ ಎಚ್ಚರವಾಗಿರ್ರಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು