Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:20 - ಕನ್ನಡ ಸತ್ಯವೇದವು J.V. (BSI)

20 ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವದು; ಆದರೆ ನೀನು ಅದನ್ನು ನಂಬದೆಹೋದದ್ದರಿಂದ ಅದೆಲ್ಲಾ ಸಂಭವಿಸುವ ದಿನದವರೆಗೂ ಮಾತನಾಡಲಾರದೆ ಮೂಕನಾಗಿರುವಿ ಎಂದು ಅವನಿಗೆ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇಗೋ, ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವುದು; ಆದರೆ ನೀನು ಇದನ್ನು ನಂಬದೆಹೋದುದರಿಂದ ಅದೆಲ್ಲಾ ಸಂಭವಿಸುವ ದಿನದ ವರೆಗೂ ಮಾತನಾಡಲಾರದೆ ಮೂಕನಾಗಿರುವೆ” ಎಂದು ಅವನಿಗೆ ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾನು ತಿಳಿಸಿದ ಸಂದೇಶವು ಸಕಾಲದಲ್ಲಿ ನೆರವೇರುವುದು. ಆದರೆ ನೀನು ಅದನ್ನು ನಂಬದೆಹೋದ ಕಾರಣ ಅದೆಲ್ಲಾ ಈಡೇರುವ ತನಕ ಮಾತನಾಡಲಾಗದೆ ಮೂಕನಾಗಿರುವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಈಗ ಕೇಳು! ಈ ಸಂಗತಿಗಳು ನೆರವೇರುವ ತನಕ ನೀನು ಮೂಕನಾಗಿರುವೆ. ಏಕೆಂದರೆ ನೀನು ನನ್ನ ಮಾತನ್ನು ನಂಬಲಿಲ್ಲ. ಆದರೆ ನಾನು ಹೇಳಿದ ಈ ಸಂಗತಿಗಳು ಖಂಡಿತವಾಗಿ ನೆರವೇರುತ್ತವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಸಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದಕಾರಣ, ಈ ಸಂಗತಿಗಳು ಈಡೇರುವ ದಿನದವರೆಗೆ ನೀನು ಮಾತನಾಡಲಾರದೆ ಮೂಕನಾಗಿರುವಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಸಮಾ ಎಳಾಕ್ ಖರೆ ಹೊತಲ್ಯಾ, ಮಿಯಾ ಸಾಂಗಲ್ಲ್ಯಾ ಖಬ್ರೆರ್ ತಿಯಾ ವಿಶ್ವಾಸ್ ಕರುಕ್ನೆ, ಹೆಚೆಸಾಟ್ನಿ ಮಿಯಾ ಸಾಂಗಲ್ಲಿ ಗೊಸ್ಟ್ ಖರಿ ಹೊಯ್‍ ಪತರ್ ತುಕಾ ಬೊಲುಕ್ ಹೊಯ್ನಾ; ತಿಯಾ ಮುಕ್ಕೊ ಹೊವ್ನ್ ರ್‍ಹಾತೆ”, ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:20
22 ತಿಳಿವುಗಳ ಹೋಲಿಕೆ  

ಇದಲ್ಲದೆ ನಿನ್ನ ನಾಲಿಗೆಯು ಸೇದಿಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ನೀನು ಅವರನ್ನು ಖಂಡಿಸದಿರುವಿ; ಅವರು ದ್ರೋಹಿವಂಶದವರು.


ಆ ದಿನದಲ್ಲಿ ತಪ್ಪಿಸಿಕೊಂಡವನಿಗಾಗಿ ನೀನು ಬಾಯಿಬಿಡುವಿ, ನಿನ್ನ ಮೂಕತನವನ್ನು ಕಳಕೊಂಡು ಮಾತಾಡುವಿ; ಹೀಗೆ ನೀನು ಅವರಿಗೆ ಗುರುತಾಗಲು ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.


ಆಶ್ರಯವನ್ನು ಹೊಂದಬೇಕೆಂದು ಓಡಿಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಎರಡು ನಿಶ್ಚಲವಾದ ಆಧಾರಗಳು ಇರುವ ಕಾರಣ ಬಲವಾದ ಧೈರ್ಯವುಂಟಾಯಿತು.


ಅವನು ಹೊರಗೆ ಬಂದಾಗ ಅವರ ಕೂಡ ಏನೂ ಮಾತಾಡಲಾರದೆ ಇರಲು ಅವರು - ಇವನಿಗೆ ದೇವಾಲಯದಲ್ಲಿ ಏನೋ ದಿವ್ಯದರ್ಶನವಾಗಿರಬೇಕು ಎಂದು ತಿಳುಕೊಂಡರು. ಅವನು ಅವರಿಗೆ ಕೈಸನ್ನೆ ಮಾಡುತ್ತಾ ಮೂಕನಾಗಿಯೇ ಇದ್ದನು.


ನಾವು ಅಪನಂಬಿಗಸ್ತರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ತನ್ನ ಸ್ವಭಾವಕ್ಕೆ ವಿರುದ್ಧವಾಗಿ ಏನೂ ಮಾಡಲಾರನು.


ನಂಬಿದವಳಾದ ನೀನು ಧನ್ಯಳೇ; ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು.


ತರುವಾಯ ಹನ್ನೊಂದು ಮಂದಿ ಶಿಷ್ಯರು ಊಟಕ್ಕೆ ಕೂತಿದ್ದಾಗ ಆತನು ಅವರಿಗೂ ಕಾಣಿಸಿಕೊಂಡನು. ತಾನು ಜೀವಿತನಾಗಿ ಎದ್ದು ಬಂದ ಮೇಲೆ ತನ್ನನ್ನು ಕಂಡವರ ಮಾತನ್ನು ಅವರು ನಂಬಲಿಲ್ಲವಾದ ಕಾರಣ ಆತನು ಅವರ ಅಪನಂಬಿಕೆಗೂ ಅವರ ಮನಸ್ಸಿನ ಕಾಠಿಣ್ಯಕ್ಕೂ ಅವರನ್ನು ಗದರಿಸಿದನು.


ಅದಕ್ಕಾತನು - ಎಲಾ, ನಂಬಿಕೆಯಿಲ್ಲದಂಥ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ, ಅನ್ನಲು


ಅರುವತ್ತೈದು ವರುಷಗಳೊಳಗೆ ಎಫ್ರಾಯೀಮ್ಯರು ಭಂಗಪಟ್ಟು ಜನಾಂಗವೆನಿಸಿಕೊಳ್ಳರು. ನಿಮಗೆ ನಂಬಿಕೆಯು ಸ್ಥಿರವಿಲ್ಲದಿದ್ದರೆ ನಿಮಗೆ ಸ್ಥಿರತೆಯೇ ಇಲ್ಲ ಎಂಬದೇ.


ಯೆಹೋವನು ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು ಅಂದದರಿಂದ ದೇವರ ಮನುಷ್ಯನು ಅವನಿಗೆ - ನೀನು ಅದನ್ನು ಕಣ್ಣಾರೆ ಕಾಣುವಿ; ಆದರೆ ಅನುಭವಿಸುವದಿಲ್ಲ ಎಂದು ನುಡಿದಿದ್ದನು.


ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೇವರ ಮನುಷ್ಯನಿಗೆ - ಯೆಹೋವನು ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ - ಅದು ಸಂಭವಿಸುವದನ್ನು ನೀನು ಕಣ್ಣಾರೆ ಕಾಣುವಿ, ಆದರೆ ಅದನ್ನು ಅನುಭವಿಸುವದಿಲ್ಲ ಎಂದು ಹೇಳಿದನು.


ಆಗ ಯೆಹೋವನು ಮೋಶೆ ಆರೋನರಿಗೆ - ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲ್ಯರ ಎದುರಿನಲ್ಲಿ ನನ್ನ ಗೌರವವನ್ನು ಕಾಪಾಡದೆಹೋದದರಿಂದ ಈ ಸಮೂಹದವರನ್ನು ನಾನು ಅವರಿಗೆ ವಾಗ್ದಾನ ಮಾಡಿದ ದೇಶದೊಳಕ್ಕೆ ನೀವು ಕರಕೊಂಡು ಹೋಗಕೂಡದು ಎಂದು ಹೇಳಿದನು.


ಮನುಷ್ಯರಿಗೆ ಬಾಯಿ ಕೊಟ್ಟವರಾರು? ಒಬ್ಬನು ಮೂಕನಾಗಿ ಮತ್ತೊಬ್ಬನು ಕಿವುಡನಾಗಿ ಒಬ್ಬನು ಕಣ್ಣುಳ್ಳವನಾಗಿ ಮತ್ತೊಬ್ಬನು ಕಣ್ಣಿಲ್ಲದವನಾಗಿ ಇರಬೇಕೆಂದು ನೇವಿುಸಿದವರಾರು? ಯೆಹೋವನಾಗಿರುವ ನಾನಲ್ಲವೇ.


ಅವರಲ್ಲಿ ಕೆಲವರು ನಂಬದೆ ಹೋಗಿದ್ದರೇನು? ಅವರು ನಂಬದೆ ಹೋದದರಿಂದ ದೇವರು ವಚನಕ್ಕೆ ತಪ್ಪುವವನಾದನೋ? ಎಂದಿಗೂ ಇಲ್ಲ;


ಅವನು ಈ ಮಾತುಗಳನ್ನು ನನಗೆ ಹೇಳಿದ ಕೂಡಲೆ ನಾನು ಮುಖವನ್ನು ತಗ್ಗಿಸಿಕೊಂಡು ಬಾಯಿಬಿಡಲಾರದೆ ಹೋದೆನು.


ಆ ದೂತನು - ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು; ನಿನ್ನ ಕೂಡ ಮಾತಾಡಿ ಈ ಶುಭವರ್ತಮಾನವನ್ನು ನಿನಗೆ ತಿಳಿಸುವದಕ್ಕಾಗಿ ನಾನು ಕಳುಹಿಸಲ್ಪಟ್ಟಿದ್ದೇನೆ.


ಇಷ್ಟರೊಳಗೆ ಜನರು ಜಕರೀಯನನ್ನು ಕಾದುಕೊಂಡಿದ್ದು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.


ಕೂಡಲೆ ಅವನಿಗೆ ಬಾಯಿ ಬಂತು, ನಾಲಿಗೆ ಸಡಿಲವಾಯಿತು, ಅವನು ಮಾತಾಡುವ ಶಕ್ತಿಯುಳ್ಳವನಾಗಿ ದೇವರನ್ನು ಕೊಂಡಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು