Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:27 - ಕನ್ನಡ ಸತ್ಯವೇದವು J.V. (BSI)

27 ಆ ಕನ್ಯೆಯ ಹೆಸರು ಮರಿಯಳು; ಆಕೆಯು ದಾವೀದನ ಮನೆತನದ ಯೋಸೇಫನೆಂಬ ಪುರುಷನಿಗೆ ನಿಶ್ಚಿತಾರ್ಥವಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಕನ್ನಿಕೆಯ ಹೆಸರು ಮರಿಯಳು; ಆಕೆಗೆ ದಾವೀದನ ಮನೆತನದ ಯೋಸೇಫನೆಂಬ ಪುರುಷನೊಂದಿಗೆ ನಿಶ್ಚಿತಾರ್ಥವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆಕೆಗೆ ದಾವೀದರಸನ ವಂಶಜ ನಾದ ಜೋಸೆಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ದಾವೀದನ ವಂಶದ ಯೋಸೇಫನಿಗೆ, ನಿಶ್ಚಯವಾಗಿದ್ದ ಮರಿಯಳೆಂಬ ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಘಾಬ್ರಿಯೆಲ್ ದೆವಾಚೊ ದುತ್ ಮರಿ ಮನ್ತಲ್ಯಾ ಲಗಿನ್ ಹೊಯ್‍ ನಸಲ್ಲ್ಯಾ ಎಕಾ ಚೆಡ್ವಾಕ್ ಎಕ್ ಖಬರ್ ಘೆವ್ನ್ ಯಲ್ಲೊ. ತ್ಯಾ ಚೆಡ್ವಾಚಿ ದಾವಿದ್ ರಾಜಾಚ್ಯಾ ಘರಾನ್ಯಾಚ್ಯಾ ಜುಜೆ ಮನ್ತಲ್ಯಾಚ್ಯಾ ವಾಂಗ್ಡಾ ಲಗ್ನಾಚಿ ಗೊಸ್ಟ್ ಹೊಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:27
9 ತಿಳಿವುಗಳ ಹೋಲಿಕೆ  

ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ - ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯಮಾಡಿರಲಾಗಿ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಬಸುರಾಗಿದ್ದದ್ದು ತಿಳಿದುಬಂತು.


ಇದರಿಂದ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ಯಾಕೋಬನು ಮರಿಯಳ ಗಂಡನಾದ ಯೋಸೇಫನನ್ನು ಪಡೆದನು. ಈ ಮರಿಯಳಲ್ಲಿ ಕ್ರಿಸ್ತನೆಂಬ ಯೇಸು ಹುಟ್ಟಿದನು.


ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆಯುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು ಎಂಬದು. ದೇವರು ನಮ್ಮ ಕೂಡ ಇದ್ದಾನೆಂದು ಈ ಹೆಸರಿನ ಅರ್ಥ.


ದ್ರೋಹಿಯಾದ ಮಗಳೇ, ಎಂದಿನವರೆಗೆ ಅತ್ತಿತ್ತ ಅಲೆದಾಡುವಿ? ಯೆಹೋವನು ಲೋಕದಲ್ಲಿ ಅಪೂರ್ವವಾದದ್ದನ್ನು ಉಂಟುಮಾಡಿದ್ದಾನೆ ನೋಡು, ಹೆಂಗಸು ಗಂಡಸನ್ನು ಕಾಪಾಡುವಳು.


ನಿನಗೂ ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವದು, ನೀನು ಅದರ ಹಿಮ್ಮಡಿಯನ್ನು ಕಚ್ಚುವಿ. ಎಂದು ಹೇಳಿದನು.


ಆ ದೂತನು ಆಕೆಯ ಬಳಿಗೆ ಬಂದು - ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು