Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:3 - ಕನ್ನಡ ಸತ್ಯವೇದವು J.V. (BSI)

3 ನಾನು ಬುಡದಿಂದ ಎಲ್ಲವನ್ನೂ ಚೆನ್ನಾಗಿ ವಿಚಾರಿಸಿದವನಾದಕಾರಣ ಅವುಗಳನ್ನು ನಿನಗೆ ಕ್ರಮವಾಗಿ ಬರೆಯುವದು ಒಳ್ಳೇದೆಂದು ನನಗೂ ತೋಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಅಮೂಲಾಗ್ರವಾಗಿ ವಿಚಾರಿಸಿದ ಅವೆಲ್ಲವನ್ನು ನಿನಗೋಸ್ಕರ ಕ್ರಮಬದ್ಧವಾಗಿ ಬರೆಯುವುದು ಒಳ್ಳೆಯದೆಂದು ನನಗೂ ತೋಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಾನು ಆಮೂಲಾಗ್ರವಾಗಿ ವಿಚಾರಿಸಿದ ಅವೆಲ್ಲವನ್ನು ನಿನಗೋಸ್ಕರ ಕ್ರಮಬದ್ಧವಾಗಿ ಬರೆಯುವುದು ಉಚಿತವೆಂದು ನನಗೂ ತೋರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಪ್ರತಿಯೊಂದು ಸಂಗತಿಯನ್ನು ಪ್ರಾರಂಭದಿಂದ ನಾನೇ ಶ್ರದ್ಧೆವಹಿಸಿ ಅಧ್ಯಯನ ಮಾಡಿರುವುದರಿಂದ ಅವೆಲ್ಲವನ್ನೂ ನಿನಗೆ ಕ್ರಮಬದ್ಧವಾಗಿ ತಿಳಿಸಲು ಪುಸ್ತಕ ರೂಪದಲ್ಲಿ ಬರೆದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ನಾನು ಸಹ ಮೊದಲಿನಿಂದ ಎಲ್ಲವನ್ನೂ ಸೂಕ್ಷ್ಮವಾಗಿ ಪರಿಶೋಧಿಸಿ, ಅವುಗಳನ್ನು ಕ್ರಮವಾಗಿ ನಿಮಗೆ ಬರೆಯುವುದು ಒಳ್ಳೆಯದೆಂದು ನನಗೆ ತೋಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತೆಚೆಸಾಟ್ನಿ,ಸುರು ಹೊಲ್ಲ್ಯಾಕ್ನಾ ಮಿಯಾಬಿ ಬರೆ ಕರುನ್ ಹೆ ಶಿಕ್ಲೊ ಅನಿ ತುಜ್ಯಾಸಾಟಿ ಎಕಾಚ್ಯಾ ಫಾಟ್ನಾ ಎಕ್ ವಿಶಯ್ ಬರೆ ಕರುನ್ ಪುಸ್ತಕ್ ರುಪಾತ್ ಲಿವ್ನ್ ಥವ್ತಲೆ ಬರೆ,ಮನುನ್ ಮಾಕಾ ದಿಸ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:3
17 ತಿಳಿವುಗಳ ಹೋಲಿಕೆ  

ಥೆಯೊಫಿಲನೇ, ನಾನು ಮೊದಲು ಬರೆದ ಚರಿತ್ರೆಯಲ್ಲಿ ಯೇಸು ಮಾಡುವದಕ್ಕೂ ಉಪದೇಶಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ಹೇಳಿ


ಅದಕ್ಕೆ ಪೌಲನು - ಶ್ರೀಮನ್ ಮಹಾ ಫೆಸ್ತನೇ, ನಾನು ಮರುಳಾಗಿಲ್ಲ; ಸ್ವಸ್ಥಬುದ್ಧಿಯುಳ್ಳವನಾಗಿ ಸತ್ಯವಾದ ಮಾತುಗಳನ್ನಾಡುತ್ತೇನೆ.


ಸುಧಾರಣೆಗಳು ಆಗುವದರಿಂದಲೂ ನಾವು ಈ ಉಪಕಾರಗಳನ್ನು ಕೃತಜ್ಞತೆಯಿಂದ ಒಪ್ಪಿಕೊಳ್ಳುತ್ತೇವೆ.


ಮಹಾರಾಜರಾಜಶ್ರೀ ದೇಶಾಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.


ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿಂದ ಕ್ರಮವಾಗಿ ವಿವರಿಸಿ ಹೇಳಿದ್ದೇನಂದರೆ -


ಹೀಗಿರಲಾಗಿ ನನ್ನ ಅಭಿಪ್ರಾಯ ಏನಂದರೆ - ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.


ಸಹೋದರನಾದ ಅಪೊಲ್ಲೋಸನ ಸಂಗತಿಯೇನಂದರೆ ಸಹೋದರರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ಅವನನ್ನು ಬಹಳವಾಗಿ ಬೇಡಿಕೊಂಡೆನು. ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ. ಒಳ್ಳೇ ಸಮಯ ಸಿಕ್ಕಿದಾಗ ಬರುವನು.


ಆದರೆ ಈ ಕಾರ್ಯವು ಕರ್ತನ ಶಿಷ್ಯರಿಗೆ ತಕ್ಕಂತೆ ನಡೆಯಲಿ. ಆದರೂ ಮದುವೆ ಮಾಡಿಕೊಳ್ಳುವದಕ್ಕಿಂತಲೂ ಇದ್ದ ಹಾಗೆಯೇ ಇರುವದು ಆಕೆಗೆ ಸುಖವೆಂದು ನನ್ನ ಅಭಿಪ್ರಾಯ; ನನಗೂ ದೇವರ ಆತ್ಮವುಂಟೆಂದು ನೆನಸುತ್ತೇನೆ.


ನೀವು ಹೀಗೆ ಮಾಡಿದರೂ ನಾನು ಸುಮ್ಮನೆ ಇದ್ದದರಿಂದ ದೇವರೂ ನಮ್ಮಂಥವನೇ ಎಂದು ನೆನಸಿಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.


ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆಹಿಸುಕಿ ಕೊಂದದ್ದನ್ನೂ ಹಾದರವನ್ನೂ ವಿಸರ್ಜಿಸುವದು ಅವಶ್ಯವಾಗಿದೆ. ಇದಕ್ಕೆ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ವಿಹಿತವಾಗಿ ತೋರಿತು. ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೇದಾಗುವದು. ಶುಭವಾಗಲಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿವಿುತ್ತ ಜೀವದ ಹಂಗನ್ನು ತೊರೆದವರಾದ ನಮ್ಮ ಪ್ರಿಯ ಬಾರ್ನಬ ಪೌಲರ ಜೊತೆಯಲ್ಲಿ ನಿಮ್ಮ ಬಳಿಗೆ ಕಳುಹಿಸಿಕೊಡುವದು ಯುಕ್ತವೆಂದು ನಾವೆಲ್ಲರೂ ಏಕಮನಸ್ಸಾಗಿ ತೀರ್ಮಾನಿಸಿದೆವು.


ಶ್ರೀಮತ್ ಥೆಯೊಫಿಲನೇ, ನಮ್ಮಲ್ಲಿ ನಿಶ್ಚಯಕ್ಕೆ ಬಂದಿರುವ ಕಾರ್ಯಗಳನ್ನು ಮೊದಲಿಂದ ಕಣ್ಣಾರೆ ಕಂಡು ಸುವಾರ್ತಾ ವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಕಾರ್ಯಗಳನ್ನು ಚರಿತ್ರ ರೂಪವಾಗಿ ಬರೆಯುವದಕ್ಕೆ ಅನೇಕರು ಪ್ರಯತ್ನಿಸಿರಲಾಗಿ


ಮತ್ತು ಪ್ರಸಂಗಿಯು ಜ್ಞಾನಿಯಾಗಿದ್ದದ್ದಲ್ಲದೆ ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ ಪರೀಕ್ಷಿಸಿ ಕ್ರಮಪಡಿಸಿದನು.


ಯೆಹೋವನೇ, ನನ್ನ ದೇವರೇ, ನಿನಗೆ ಸಮಾನನಾದ ದೇವರು ಯಾರು? ನಮ್ಮ ಹಿತಕ್ಕಾಗಿ ನೀನು ಮಾಡಿದ ಆಲೋಚನೆಗಳೂ ಅದ್ಭುತಕಾರ್ಯಗಳೂ ಎಷ್ಟೋ ವಿಶೇಷವಾಗಿವೆ; ಅವುಗಳನ್ನು ವಿವರಿಸಿ ಹೇಳೋಣವೆಂದರೆ ಅಸಾಧ್ಯವು; ಅವು ಅಸಂಖ್ಯಾತವಾಗಿವೆ.


ಉಚಿತಾಲೋಚನೆ, ತಿಳುವಳಿಕೆ ಇವುಗಳ ವಿಷಯವಾಗಿ ಇದಕ್ಕೆ ಮುಂಚೆಯೇ ನಿನಗೋಸ್ಕರ ಬರೆದಿದ್ದೇನಲ್ಲವೆ.


ಪೌಲನು ಅಂತಿಯೋಕ್ಯದಲ್ಲಿ ಕೆಲವು ಕಾಲ ಇದ್ದು ತಿರಿಗಿ ಹೊರಟು ಕ್ರಮವಾಗಿ ಗಲಾತ್ಯ ಸೀಮೆಯಲ್ಲಿಯೂ ಫ್ರೂಗ್ಯದಲ್ಲಿಯೂ ಸಂಚಾರಮಾಡುತ್ತಾ ಶಿಷ್ಯರೆಲ್ಲರನ್ನು ದೃಢಪಡಿಸಿದನು.


ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದುವವನಾಗಿ ಕ್ರಿಸ್ತ ಯೇಸುವಿನ ಒಳ್ಳೇ ಸೇವಕನಾಗಿರುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು