Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:42 - ಕನ್ನಡ ಸತ್ಯವೇದವು J.V. (BSI)

42 ಮತ್ತು ಎಲಿಸಬೇತಳು ಪವಿತ್ರಾತ್ಮಭರಿತಳಾಗಿ ಮಹಾಧ್ವನಿಯಿಂದ ಕೂಗಿ - ನೀನು ಸ್ತ್ರೀಯರೊಳಗೆ ಆಶೀರ್ವಾದ ಹೊಂದಿದವಳು ಮತ್ತು ನಿನ್ನಲ್ಲಿ ಹುಟ್ಟುವ ಕೂಸು ಆಶೀರ್ವಾದ ಹೊಂದಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಆಗ ಆಕೆಯು ಮಹಾಧ್ವನಿಯಿಂದ ಕೂಗಿ, “ನೀನು ಸ್ತ್ರೀಯರೊಳಗೆ ಧನ್ಯಳು, ಮತ್ತು ನಿನ್ನಲ್ಲಿ ಹುಟ್ಟುವ ಕೂಸು ಆಶೀರ್ವಾದ ಹೊಂದಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಹರ್ಷೋದ್ಗಾರದಿಂದ ಹೀಗೆಂದಳು: “ಸ್ತ್ರೀಯರಲ್ಲೆಲ್ಲಾ ಧನ್ಯಳು ನೀನು; ನಿನ್ನ ಕರುಳ ಕುಡಿಯೂ ಧನ್ಯ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಹರ್ಷೋದ್ಗಾರದಿಂದ ಹೀಗೆಂದಳು: “ದೇವರು ನಿನ್ನನ್ನು (ಮರಿಯ) ಬೇರೆಲ್ಲಾ ಸ್ತ್ರೀಯರಿಗಿಂತ ಹೆಚ್ಚಾಗಿ ಆಶೀರ್ವದಿಸಿದ್ದಾನೆ. ನಿನ್ನಲ್ಲಿ ಜನಿಸಲಿರುವ ಮಗುವನ್ನು ದೇವರು ಆಶೀರ್ವದಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಮಹಾಧ್ವನಿಯಿಂದ: “ಸ್ತ್ರೀಯರಲ್ಲಿ ನೀನು ಧನ್ಯಳೇ, ನಿನ್ನಲ್ಲಿ ಹುಟ್ಟುವ ಶಿಶುವೂ ಆಶೀರ್ವಾದ ಹೊಂದಿದ್ದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಅನಿ ತೆನಿ ಮೊಟ್ಯಾನ್ “ಸಗ್ಳ್ಯಾ ಬಾಯ್ಕಾಮನ್ಸಾಂಚ್ಯಾನ್ಕಿ ಜಾಸ್ತಿ ಆಶಿರ್ವಾದ್ ಗಾವಲ್ಲಿ ಬಾಯ್ಕೊಮನುಸ್ ತಿಯಾ, ಅನಿ ತುಜ್ಯಾ ಪೊಟಾನಿ ಜಲಮ್ತಲೊ ಪೊರ್‌ಬಿ ಲೈ ಮೊಟೊ ಆಶಿರ್ವಾದ್ ಗಾವಲ್ಲೊ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:42
13 ತಿಳಿವುಗಳ ಹೋಲಿಕೆ  

ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಮಂಗಳ, ಮೇಲಣಲೋಕಗಳಲ್ಲಿ ಮಹಿಮೆ ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವದಕ್ಕೆ ತೊಡಗಿದರು.


ಎಲ್ಲಾ ಸ್ತ್ರೀಯರಲ್ಲಿ ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳಿಗೇ ಆಶೀರ್ವಾದವು; ಗುಡಾರಗಳಲ್ಲಿ ವಾಸಿಸುವ ಸ್ತ್ರೀಯರಲ್ಲಿ ಆಕೆಗೇ ಆಶೀರ್ವಾದವು.


ಆ ದೂತನು ಆಕೆಯ ಬಳಿಗೆ ಬಂದು - ದೇವರ ದಯೆ ಹೊಂದಿದವಳೇ, ನಿನಗೆ ಶುಭವಾಗಲಿ; ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.


ನೀನು ನನ್ನ ಮಾತನ್ನು ಕೇಳಿದ್ದರಿಂದ ಭೂವಿುಯ ಎಲ್ಲಾ ಜನಾಂಗಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವದು ಎಂಬದಾಗಿ ಯೆಹೋವನು ತನ್ನಾಣೆಯಿಟ್ಟು ಹೇಳಿದ್ದಾನೆ ಅಂದನು.


ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇಂದಿನಿಂದ ತಲತಲಾಂತರದವರೆಲ್ಲಾ ನನ್ನನ್ನು ಧನ್ಯಳೆಂದು ಹೊಗಳುವರು.


ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ; ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದ ಪಡಿಸಿದ್ದೀ.


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ಅಬ್ರಹಾಮ ಇಸಾಕ ಯಾಕೋಬರು ಅವರ ಪಿತೃಗಳೇ. ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದವನು, ಆತನು ಎಲ್ಲಾದರ ಮೇಲೆ ಒಡೆಯನೂ ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.


ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; ನಿನ್ನ ಮಾತುಗಳು ಬಹಳ ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬದು ನಿನ್ನ ಬಾಯ ಮಾತುಗಳಿಂದ ಸ್ಪಷ್ಟವಾಗುತ್ತದೆ.


ಎಲಿಸಬೇತಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಹಾರಾಡಿತು.


ನನ್ನ ಸ್ವಾವಿುಯ ತಾಯಿಯು ನನ್ನ ಬಳಿಗೆ ಬರುವಷ್ಟು ಭಾಗ್ಯ ನನಗೆ ಎಲ್ಲಿಂದಾಯಿತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು