Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:49 - ಕನ್ನಡ ಸತ್ಯವೇದವು J.V. (BSI)

49 ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಏಕೆಂದರೆ ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಏಕೆನೆ ಮಾಡಿಹನೆನಗೆ ಸರ್ವಶಕ್ತನು ಮಹತ್ಕಾರ್ಯ I ನಿಜಕ್ಕೂ ಆತನ ನಾಮಧೇಯ ಪರಮಪೂಜ್ಯ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಏಕೆಂದರೆ ಸರ್ವಶಕ್ತನು (ದೇವರು) ನನಗೆ ಮಹಾಕಾರ್ಯಗಳನ್ನು ಮಾಡಿದ್ದಾನೆ. ಆತನ ಹೆಸರು ಅತಿ ಪರಿಶುದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಪರಾಕ್ರಮಿಯಾದ ದೇವರು ನನಗೆ ಮಹಾಕಾರ್ಯಗಳನ್ನು ಮಾಡಿದ್ದಾರೆ, ಅವರ ಹೆಸರು ಪವಿತ್ರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ಕಶ್ಯಾಕ್ ಮಟ್ಲ್ಯಾರ್ ಮೊಟ್ಯಾ ದೆವಾನ್ ಮಾಜೆಸಾಟಿ ಮೊಟಿ-ಮೊಟಿ ಕಾಮಾ ಕರ್‍ಲ್ಯಾನಾಯ್. ತೆಚೆ ನಾವ್ ಎಗ್ದಮ್ ಪವಿತ್ರ್ ಹಾಯ್;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:49
21 ತಿಳಿವುಗಳ ಹೋಲಿಕೆ  

ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನುಂಟುಮಾಡಿದ್ದಾನೆ; ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; ಆತನ ನಾಮವು ಪರಿಶುದ್ಧವೂ ಭಯಂಕರವೂ ಆಗಿದೆ.


ಅವರು ಯೆಹೋವನ ಪೂಜ್ಯವಾದ ಮಹಾನಾಮವನ್ನು ಕೊಂಡಾಡಲಿ; ಆತನು ಪರಿಶುದ್ಧನು.


ಯೆಹೋವನೇ, ನಿನ್ನ ಸಮಾನನು ಯಾವನೂ ಇಲ್ಲ; ನೀನು ಮಹತ್ತಮನು, ನಿನ್ನ ನಾಮವೂ ಸಾಮರ್ಥ್ಯದಿಂದ ಕೂಡಿ ಮಹತ್ತಮವಾಗಿದೆ.


ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಶಕ್ತಿಯ ಪ್ರಕಾರ ನಾವು ಬೇಡುವದಕ್ಕಿಂತಲೂ ಯೋಚಿಸುವದಕ್ಕಿಂತಲೂ


ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಕರ್ತನೇ, ನಿನ್ನ ನಾಮಕ್ಕೆ ಭಯಪಡದವರೂ ಅದನ್ನು ಘನವಾದದ್ದೆಂದು ಒಪ್ಪಿಕೊಳ್ಳದವರೂ ಯಾರಾದರೂ ಇದ್ದಾರೇ? ನೀನೊಬ್ಬನೇ ಪರಿಶುದ್ಧನು; ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಾಶಕ್ಕೆ ಬಂದದರಿಂದ ಎಲ್ಲಾ ಜನಾಂಗಗಳು ಬಂದು ನಿನ್ನ ಸನ್ನಿಧಾನದಲ್ಲಿ ನಮಸ್ಕಾರ ಮಾಡುವರು ಎಂದು ಹೇಳಿದರು.


ನಮ್ಮ ಯೆಹೋವದೇವರನ್ನು ಘನಪಡಿಸಿರಿ; ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ. ನಮ್ಮ ಯೆಹೋವದೇವರು ಪರಿಶುದ್ಧನು.


ಯೆಹೋವನಂಥ ಪರಿಶುದ್ಧನು ಇಲ್ಲವೇ ಇಲ್ಲ; ನಿನ್ನ ಹೊರತು ದೇವರು ಯಾರು? ನಮ್ಮ ದೇವರೇ ಅಸಮಾನವಾದ ಆಶ್ರಯದುರ್ಗವು.


ಯೆಹೋವನೇ, ದೇವರುಗಳಲ್ಲಿ ನಿನ್ನ ಸಮಾನನು ಯಾವನು? ಪರಿಶುದ್ಧತ್ವದಿಂದ ಸರ್ವೋತ್ತಮನೂ ಪ್ರಖ್ಯಾತ ಕೃತ್ಯಗಳನ್ನು ಮಾಡಿರುವದರಿಂದ ಭಯಂಕರನೂ ಅದ್ಭುತಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನನು ಎಲ್ಲಿ?


ಆಗ ಒಬ್ಬನು ಮತ್ತೊಬ್ಬನಿಗೆ - ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ ಎಂದು ಕೂಗಿ ಹೇಳಿದನು.


ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು; ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತಾವಮಾನಕ್ಕೆ ಒಳಗಾಗುವರು.


ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಆ ಜೀವಿಗಳಿಗೆ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರವಿುಸಿಕೊಳ್ಳದೆ - ದೇವರಾದ ಕರ್ತನು ಪರಿಶುದ್ಧನು ಪರಿಶುದ್ಧನು ಪರಿಶುದ್ಧನು; ಆತನು ಸರ್ವಶಕ್ತನು, ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಂಥವನು ಎಂದು ಹೇಳುತ್ತವೆ.


ಆತನು - ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು ಆ ದೆವ್ವಗಳು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಆ ಗುಂಪು ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ಅಲ್ಲಿ ಉಸುರುಕಟ್ಟಿ ಸತ್ತಿತು. ಹೆಚ್ಚು ಕಡಿಮೆ ಎರಡು ಸಾವಿರ ಹಂದಿಗಳಿದ್ದವು.


ಇಂತಿರಲು ಕರ್ತನೂ ಸೇನಾಧೀಶ್ವರನೂ ಇಸ್ರಾಯೇಲ್ಯರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ - ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು;


ಮಹಾಪ್ರಭಾವವುಳ್ಳ ಈ ಅರಸನು ಯಾರು? ಮಹಾ ಬಲಿಷ್ಠನೂ ವಿಶೇಷ ಪರಾಕ್ರವಿುಯೂ ಆಗಿರುವ ಯೆಹೋವ, ಯುದ್ಧವೀರನಾಗಿರುವ ಯೆಹೋವ.


ಆಹಾ, ರಕ್ತವರ್ಣದ ಉಡುಪನ್ನುಟ್ಟು ಘನವಸ್ತ್ರಗಳನ್ನು ಧರಿಸಿಕೊಂಡು ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ ಎದೋವಿುನ ಬೊಚ್ರದಿಂದ ಬರುವ ಈತನು ಯಾರು? ಸತ್ಯಾನುಸಾರವಾಗಿ ಮಾತಾಡುವ, ರಕ್ಷಿಸಲು ಸಮರ್ಥನಾದ ನಾನೇ.


ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇಂದಿನಿಂದ ತಲತಲಾಂತರದವರೆಲ್ಲಾ ನನ್ನನ್ನು ಧನ್ಯಳೆಂದು ಹೊಗಳುವರು.


ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ದಯವು ತಲತಲಾಂತರದವರೆಗೂ ಇರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು