Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:58 - ಕನ್ನಡ ಸತ್ಯವೇದವು J.V. (BSI)

58 ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ದಯವನ್ನು ವಿಶೇಷವಾಗಿ ತೋರಿಸಿದ್ದಾನೆಂಬದನ್ನು ಕೇಳಿ ಆಕೆಯ ಕೂಡ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

58 ಆಕೆಯ ನೆರೆಹೊರೆಯವರೂ ಬಂಧುಬಾಂಧವರೂ ಆಕೆಯ ಮೇಲೆ ಕರ್ತನು ತನ್ನ ವಿಶೇಷ ದಯೆಯನ್ನು ತೋರಿಸಿದ್ದಾನೆಂಬುದನ್ನು ಕೇಳಿ ಆಕೆಯ ಸಂಗಡ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

58 ಸರ್ವೇಶ್ವರ ಆಕೆಗೆ ವಿಶೇಷ ಕೃಪೆ ತೋರಿದ್ದಾರೆಂದು ಅರಿತುಕೊಂಡ ನೆರೆಹೊರೆಯವರೂ ಬಂಧುಬಳಗದವರೂ ಬಂದು ಆಕೆಯೊಡನೆ ಸೇರಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

58 ಪ್ರಭುವು ಆಕೆಗೆ ತೋರಿದ ಮಹಾಕರುಣೆಯು ಆಕೆಯ ನೆರೆಹೊರೆಯವರಿಗೆ ಮತ್ತು ಬಂಧುಗಳಿಗೆ ತಿಳಿಯಿತು. ಅವರು ಆಕೆಯ ವಿಷಯದಲ್ಲಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

58 ಕರ್ತದೇವರು ತಮ್ಮ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಯವರೂ ಬಂಧುಗಳೂ ಕೇಳಿ, ಆಕೆಯ ಕೂಡ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

58 ತಿಚ್ಯಾ ಸೆಜಾರ್‍ಯಾನಿ ಅನಿ ಸೊಯ್ರ್ಯಾನಿ ಹಿ ಖಬರ್ ಆಯಿಕ್ಲ್ಯಾನಿ ಅನಿ ದೆವಾನ್ ತಿಚ್ಯಾ ಜಿವನಾತ್ ಕವ್ಡೆ ಮೊಟೆ ಕಾಮ್ ಕರ್‍ಲ್ಯಾನ್, ಮಟ್ಲ್ಯಾನಿ, ಅನಿ ತಿಚ್ಯಾ ವಾಂಗ್ಡಾ ತೆನಿಬಿ ಲೈ ಕುಶಿ ಹೊಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:58
12 ತಿಳಿವುಗಳ ಹೋಲಿಕೆ  

ಸಂತೋಷಪಡುವವರ ಸಂಗಡ ಸಂತೋಷಪಡಿರಿ, ಅಳುವವರ ಸಂಗಡ ಅಳಿರಿ.


ಕರ್ತನು ಈ ಕಾಲದಲ್ಲಿ ನನ್ನನ್ನು ಪರಾಮರಿಸಿ ನನಗೆ ಈ ರೀತಿಯಾಗಿ ಮಾಡಿ ಜನರಲ್ಲಿ ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನಲ್ಲಾ ಅನ್ನುತ್ತಿದ್ದಳು.


ನೀನು ಅವನಿಗೆ ಯೋಹಾನನೆಂದು ಹೆಸರಿಡಬೇಕು. ನಿನಗೆ ಸಂತೋಷವೂ ಉಲ್ಲಾಸವೂ ಉಂಟಾಗುವದು; ಮತ್ತು ಅವನು ಹುಟ್ಟಿದ್ದಕ್ಕೆ ಬಹು ಜನರು ಸಂತೋಷಪಡುವರು.


ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.


ಬಂಜೆಯು ಮಕ್ಕಳೊಂದಿಗಳಾಗಿ ಸಂತೋಷದಿಂದ ಮನೆಯಲ್ಲಿ ವಾಸಿಸುವ ಹಾಗೆ ಮಾಡುತ್ತಾನೆ. ಯಾಹುವಿಗೆ ಸ್ತೋತ್ರ!


ಸಾರಳು - ದೇವರು ನನ್ನನ್ನು ನಗುವಂತೆ ಮಾಡಿದ್ದಾನೆ; ಕೇಳುವವರೆಲ್ಲರೂ ನನ್ನೊಡನೆ ನಗುವರು.


ನೀನು ನಿನ್ನ ದಾಸನ ಮೇಲೆ ದಯವಿಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿಹೋಗಲಾರೆನು: ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು.


ಎಲಿಸಬೇತಳು ದಿನತುಂಬಿ ಗಂಡು ಮಗುವನ್ನು ಹೆತ್ತಳು.


ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನಂದರೆ - ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ ನಿನ್ನ ಅಣ್ಣತಮ್ಮಂದಿರನ್ನಾಗಲಿ ನಿನ್ನ ಬಂಧುಬಾಂಧವರನ್ನಾಗಲಿ ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವದು.


ನಿನ್ನ ತಂದೆತಾಯಿಗಳು ಉಲ್ಲಾಸಗೊಳ್ಳಲಿ, ನಿನ್ನನ್ನು ಹೆತ್ತವಳು ಆನಂದಪಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು