Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:6 - ಕನ್ನಡ ಸತ್ಯವೇದವು J.V. (BSI)

6 ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಜಕರೀಯನು ಮತ್ತು ಎಲಿಜಬೇತಳು ನಿಜವಾಗಿಯೂ ದೇವರ ದೃಷ್ಟಿಯಲ್ಲಿ ಒಳ್ಳೆಯವರಾಗಿದ್ದರು. ಪ್ರಭುವಿನ (ದೇವರ) ಆಜ್ಞೆಗಳನ್ನೆಲ್ಲಾ ಕೈಕೊಂಡು ನಡೆಯುತ್ತಿದ್ದ ಅವರು, ಅದೇರೀತಿ ಬಾಳಲು ಇತರರಿಗೂ ಉಪದೇಶಿಸುತ್ತಿದ್ದರು. ಅವರು ತಪ್ಪಿಲ್ಲದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇವರಿಬ್ಬರೂ ಕರ್ತದೇವರ ಎಲ್ಲಾ ಆಜ್ಞೆಗಳನ್ನೂ ತೀರ್ಪುಗಳನ್ನೂ ತಪ್ಪಿಲ್ಲದೆ ಕೈಕೊಂಡು, ದೇವರ ಮುಂದೆ ನೀತಿವಂತರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆನಿ ದೊಗೆಬಿ ದೆವಾಚ್ಯಾ ನದ್ರೆತ್ ಬರೆ ಹೊತ್ತೆ, ಅನಿ ಸರ್ವೆಸ್ವರ್ ದೆವಾಚ್ಯಾ ಗೊಸ್ಟಿಯಾ ಅನಿ ಖಾಯ್ದೆ ಬರೆ ಕರುನ್ ಪಾಳಿತ್, ತೆನಿ ಕಸ್ಲ್ಯಾಬಿ ಚುಕೆತ್ ನತ್ತ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:6
33 ತಿಳಿವುಗಳ ಹೋಲಿಕೆ  

ಆಗ ಯೆಹೋವನು ನೋಹನಿಗೆ - ನೀನೂ ನಿನ್ನ ಮನೆಯವರೆಲ್ಲರೂ ನಾವೆಯಲ್ಲಿ ಸೇರಿರಿ; ಈಗಿನವರಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿ ನಡೆಯುವದನ್ನು ನೋಡಿದ್ದೇನೆ.


ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು.


ಹೀಗೆ ನೀವು ನಿರ್ದೋಷಿಗಳೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.


ಇದರ ದೆಸೆಯಿಂದ ದೇವರ ವಿಷಯದಲ್ಲಿಯೂ ಮನುಷ್ಯರ ವಿಷಯದಲ್ಲಿಯೂ ನಾನು ನಿರ್ದೋಷಿ ಎಂದು ಸಾಕ್ಷಿ ಹೇಳುವ ಮನಸ್ಸು ನನಗೆ ಯಾವಾಗಲೂ ಇರಬೇಕೆಂದು ಅಭ್ಯಾಸಮಾಡಿಕೊಳ್ಳುತ್ತೇನೆ.


ನೀನು ನಿನ್ನ ತಂದೆಯಾದ ದಾವೀದನಂತೆ ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ನನಗೆ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುತ್ತಾ ಬರುವದಾದರೆ


ನಮ್ಮ ಕರ್ತನಾದ ಯೇಸು ನಿಮ್ಮ ಹೃದಯಗಳನ್ನು ದೃಢಪಡಿಸಿ ತನ್ನ ಎಲ್ಲಾ ಪರಿಶುದ್ಧ ಪರಿವಾರ ಸಮೇತ ಪ್ರತ್ಯಕ್ಷನಾದಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದನು.


ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆದರೆ ಅದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳುಕೊಳ್ಳುತ್ತೇವೆ.


ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರು ನೋಡುವವರಾಗಿರುವದರಿಂದ ಶಾಂತರಾಗಿದ್ದು ಆತನೆದುರಿನಲ್ಲಿ ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಕಾಣಿಸಿಕೊಳ್ಳುವದಕ್ಕೆ ಪ್ರಯಾಸಪಡಿರಿ.


ಆಗ ಯೆಹೋವನು - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ ಎಂದು ಸೈತಾನನಿಗೆ ಹೇಳಿದನು.


ಪ್ರಿಯರಾದ ಮಕ್ಕಳೇ, ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸುವದಕ್ಕೆ ಯಾರಿಗೂ ಅವಕಾಶ ಕೊಡಬೇಡಿರಿ. ಕ್ರಿಸ್ತನು ಹೇಗೆ ನೀತಿವಂತನಾಗಿದ್ದಾನೋ ಹಾಗೆಯೇ ನೀತಿಯನ್ನನುಸರಿಸುವವನು ನೀತಿವಂತನಾಗಿದ್ದಾನೆ.


ಆತನು ನೀತಿವಂತನಾಗಿದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.


ಆತನು ನಿಮ್ಮನ್ನು ಸಹ ತನ್ನ ಕುಮಾರನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ಈಗ ಸಂಧಾನಪಡಿಸಿಕೊಂಡಿದ್ದಾನೆ; ಮತ್ತು ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಕಟ್ಟಳೆಗಳನ್ನು ಅನುಸರಿಸಿ ನಡಿಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.


ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ - ಸಹೋದರರೇ, ನಾನು ಈ ದಿನದವರೆಗೂ ಒಳ್ಳೇ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ ಅಂದನು.


ಹೀಗೆ ನಿನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸುವವನಾದರೆ ಆಶಾಭಂಗಪಡೆನು.


ನೀನು ಹೇಳಿದ್ದು ಸತ್ಯವೇ ಸರಿ; ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾಗಿರುವದು ಹೇಗೆ?


ಯೆಹೋವನೇ, ನಾನು ನಂಬಿಗಸ್ತನಾಗಿಯೂ ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದದ್ದನ್ನು ನೆನಪು ಮಾಡಿಕೋ ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.


ನೋಹನ ಚರಿತ್ರೆಯು - ನೋಹನು ನೀತಿವಂತನೂ ತನ್ನ ಕಾಲದವರಲ್ಲಿ ತಪ್ಪಿಲ್ಲದವನೂ ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.


ಆಗ ಆತನು ಅವರಿಗೆ ಹೇಳಿದ್ದೇನಂದರೆ - ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳುಕೊಂಡಿದ್ದಾನೆ. ಮನುಷ್ಯರಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಬಹುಕಾಲ ಶುಭವುಳ್ಳವರಾಗಿ ಬದುಕಿಕೊಳ್ಳುವಂತೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ ಮಾರ್ಗದಲ್ಲೇ ನಡೆಯಬೇಕು.


ಯೆರೂಸಲೇಮನ್ನೂ ಇವನ ಸಂತಾನವನ್ನೂ ಉಳಿಸಿದನು.


ಆದರೆ ಎಲಿಸಬೇತಳು ಬಂಜೆಯಾದದರಿಂದ ಅವರಿಗೆ ಮಕ್ಕಳಿರಲಿಲ್ಲ; ಇದಲ್ಲದೆ ಅವರಿಬ್ಬರೂ ದಿನಹೋದವರಾಗಿದ್ದರು.


ಆ ಕಾಲದಲ್ಲಿ ಯೆರೂಸಲೇವಿುನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದು ಇಸ್ರಾಯೇಲ್ ಜನರನ್ನು ಸಂತೈಸುವವನು ಯಾವಾಗ ಬಂದಾನೆಂದು ಹಾರೈಸುತ್ತಿದ್ದನು; ಮತ್ತು ಪವಿತ್ರಾತ್ಮಪ್ರೇರಿತನಾಗಿದ್ದನು.


ಆತನ ವಿಷಯದಲ್ಲಿ ದಾವೀದನು - ಕರ್ತನು ಯಾವಾಗಲೂ ನನ್ನೆದುರಿನಲ್ಲಿರುವದನ್ನು ನೋಡುತ್ತಿದ್ದೆನು. ನಾನು ಕದಲದಂತೆ ಆತನು ನನ್ನ ಬಲಗಡೆಯಲ್ಲಿಯೇ ಇದ್ದಾನೆ.


ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಿಲ್ಲ.


ಹೀಗಿರಲು ಶರೀರಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮಾನುಸಾರವಾಗಿ ನಡೆಯುವವರಾದ ನಮ್ಮಲ್ಲಿ ಧರ್ಮಶಾಸ್ತ್ರದ ನಿಯಮವು ನೆರವೇರುವದಕ್ಕೆ ಮಾರ್ಗವಾಯಿತು.


ಇವನು ಇಸ್ರಾಯೇಲ್ಯರಂತೆ ನಡೆಯದೆ ತನ್ನ ತಂದೆಯ ದೇವರ ಭಕ್ತನಾಗಿ ಆತನ ಆಜ್ಞೆಗಳನ್ನು ಅನುಸರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು