Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:65 - ಕನ್ನಡ ಸತ್ಯವೇದವು J.V. (BSI)

65 ಇದನ್ನು ಕೇಳಿದ ನೆರೆಹೊರೆಯವರಿಗೆಲ್ಲಾ ಹೆದರಿಕೆಯುಂಟಾಯಿತು; ಮತ್ತು ಈ ಎಲ್ಲಾ ಸಂಗತಿಗಳನ್ನು ಕುರಿತು ಯೂದಾಯದ ಮಲೆನಾಡಿನಲ್ಲೆಲ್ಲಾ ಮಾತಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

65 ಇದನ್ನು ಕೇಳಿದ ನೆರೆಹೊರೆಯವರಿಗೆಲ್ಲಾ ಹೆದರಿಕೆಯುಂಟಾಯಿತು ಮತ್ತು ಈ ಎಲ್ಲಾ ಸಂಗತಿಗಳನ್ನು ಕುರಿತು ಯೂದಾಯದ ಮಲೆನಾಡಿನಲ್ಲೆಲ್ಲಾ ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

65 ನೆರೆಹೊರೆಯವರೆಲ್ಲರೂ ತಲ್ಲಣಗೊಂಡರು. ಈ ಸಮಾಚಾರ ಜುದೇಯದ ಗುಡ್ಡಗಾಡು ಪ್ರಾಂತ್ಯದಲ್ಲೆಲ್ಲಾ ಹರಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

65 ಇದನ್ನು ಕೇಳಿ ನೆರೆಹೊರೆಯವರಿಗೆಲ್ಲಾ ಭಯವಾಯಿತು. ಜುದೇಯದ ಗುಡ್ಡಪ್ರದೇಶದಲ್ಲೆಲ್ಲಾ ಈ ಸಂಗತಿಗಳ ಬಗ್ಗೆ ಜನರು ಮಾತನಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

65 ಈ ಘಟನೆಯಿಂದ ಸುತ್ತಲೂ ವಾಸಮಾಡುತ್ತಿದ್ದವರೆಲ್ಲರಿಗೆ ಭಯವುಂಟಾಯಿತು, ಯೂದಾಯದ ಬೆಟ್ಟದ ಪ್ರಾಂತದಲ್ಲೆಲ್ಲಾ ಈ ಸಂಗತಿಗಳನ್ನು ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

65 ಹೆ ಆಯ್ಕಲ್ಲಿ ಅಜು ಬಾಜುಚಿ ಲೊಕಾ ಭಿಂಯಾನ್ ಭರ್‍ಲಿ,ಅನಿ ಹಿ ಖಬರ್ ಜುದೆಯಾಚ್ಯಾ ಮಡ್‍ಯಾಂಚ್ಯಾ ಜಾಗ್ಯಾರ್ ಸಗ್ಳ್ಯಾಕ್ಡೆ ಫರ್ಗಟ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:65
12 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಮರಿಯಳು ಎದ್ದು ಅವಸರದಿಂದ ಮಲೆನಾಡಿಗೆ ಹೊರಟು ಯೆಹೂದದಲ್ಲಿರುವ ಒಂದೂರಿಗೆ ಹೋಗಿ


ಮತ್ತು ಸರ್ವಸಭೆಗೂ ಈ ಸಂಗತಿಗಳನ್ನು ಕೇಳಿದವರೆಲ್ಲರಿಗೂ ಮಹಾ ಭಯಹಿಡಿಯಿತು.


ಈ ಮಾತುಗಳನ್ನು ಅನನೀಯನು ಕೇಳಿದ ಕೂಡಲೆ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಹಿಡಿಯಿತು.


ಎಲ್ಲರಿಗೂ ಭಯ ಉಂಟಾಯಿತು, ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ ಸೂಚಕಕಾರ್ಯಗಳೂ ಅಪೊಸ್ತಲರ ಕೈಯಿಂದ ನಡೆದವು.


ಎಲ್ಲರು ಭಯಹಿಡಿದವರಾಗಿ - ಮಹಾ ಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರಿಗೆ ದರ್ಶನವನ್ನು ಅನುಗ್ರಹಿಸಿದ್ದಾನೆ ಎಂದು ದೇವರನ್ನು ಕೊಂಡಾಡುವವರಾದರು.


ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಹೊಗಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.


ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು.


ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳಕಲಿನ ಪ್ರದೇಶ, ಬೆಟ್ಟಗಳ ಬುಡದ ಪ್ರದೇಶ ಇವುಗಳನ್ನು ಸ್ವತಂತ್ರಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವದೆಲ್ಲವನ್ನೂ ಸಂಹರಿಸಿದನು.


ಗಿಬ್ಯೋನ್ಯರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ದೂತರನ್ನು ಕಳುಹಿಸಿ - ನಿನ್ನ ಸೇವಕರನ್ನು ಕೈಬಿಡಬೇಡ; ಬೇಗ ಬಂದು ಸಹಾಯಮಾಡು; ನಮಗೆ ವಿರೋಧವಾಗಿ ಕೂಡಿ ಬಂದಿರುವ ಈ ಬೆಟ್ಟದ ಸೀಮೆಯ ಎಲ್ಲಾ ಅಮೋರಿಯ ರಾಜರಿಂದ ನಮ್ಮನ್ನು ತಪ್ಪಿಸು ಎಂದು ಬೇಡಿಕೊಂಡರು.


ಅರಸನಾದ ಹೆರೋದನ ದಿನಗಳಲ್ಲಿ ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಲ್ಲಿ ಯೇಸು ಹುಟ್ಟಿದಾಗ ಮೂಡಣದೇಶದ ಜೋಯಿಸರು ಯೆರೂಸಲೇವಿುಗೆ ಬಂದು -


ನೋಡಿದವರೆಲ್ಲರು ಬೆರಗಾಗಿ ದೇವರನ್ನು ಕೊಂಡಾಡಿದರು; ಮತ್ತು ಅವರು ಭಯದಿಂದ ತುಂಬಿದವರಾಗಿ - ನಾವು ಈ ಹೊತ್ತು ಅಪೂರ್ವ ಸಂಗತಿಯನ್ನು ಕಂಡೆವು ಅಂದರು.


ಅದನ್ನು ಕೇಳಿದವರೆಲ್ಲರೂ ತಮಗೆ ಕುರುಬರು ಹೇಳಿದ ಮಾತುಗಳಿಗೆ ಆಶ್ಚರ್ಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು