Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 1:77 - ಕನ್ನಡ ಸತ್ಯವೇದವು J.V. (BSI)

77-78 ನಮ್ಮ ದೇವರು ಅತ್ಯಂತಕರುಣೆಯಿಂದ ದಯಪಾಲಿಸುವ ಪಾಪಪರಿಹಾರವೆಂಬ ರಕ್ಷಣೆಯ ತಿಳುವಳಿಕೆಯನ್ನು ಆತನ ಪ್ರಜೆಗೆ ಕೊಡುವವನಾಗಿಯೂ ಇರುವಿ. ಆ ಕರುಣೆಯಿಂದಲೇ ನಮಗೆ ಮೇಲಿನಿಂದ ಅರುಣೋದಯವು ಉಂಟಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

77-78 ನಮ್ಮ ದೇವರು ಅತ್ಯಂತಕರುಣೆಯಿಂದ ದಯಪಾಲಿಸುವ ಪಾಪಕ್ಷಮೆಯೆಂಬ ರಕ್ಷಣೆಯ ತಿಳಿವಳಿಕೆಯನ್ನು ಆತನ ಪ್ರಜೆಗೆ ತಿಳಿಸಿಕೊಡುವವನಾಗಿಯೂ ಇರುವಿ. ಆ ಕರುಣೆಯಿಂದಲೇ ನಮಗೆ ಮೇಲಿನಿಂದ ಅರುಣೋದಯವು ಉಂಟಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

77 ಸರ್ವೇಶ್ವರನ ಮಾರ್ಗವನು ಸಜ್ಜುಗೊಳಿಸುವೆ, ಮುಂದಾಗಿ ತೆರಳಿ II ಪಾಪಕ್ಷಮೆಯನು ಸಾರುವೆ ಆತನ ಪ್ರಜೆಗೆ I ಈ ಮೂಲಕ ಜೀವೋದ್ಧಾರದ ಜ್ಞಾನವನ್ನೀಯುವೆ ಆ ಜನರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

77 ಪಾಪಕ್ಷಮೆಯ ಮೂಲಕವಾಗಿ ರಕ್ಷಣೆಯಾಗುವುದೆಂಬ ತಿಳುವಳಿಕೆಯನ್ನು ನೀನು ಜನರಿಗೆ ಕೊಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

77 ನೀನು ಜನರ ಪಾಪಕ್ಷಮಾಪಣೆಯ ಮೂಲಕ ರಕ್ಷಣೆ ಹೊಂದುವ ತಿಳುವಳಿಕೆಯನ್ನು ಕೊಡುವೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

77 ಅನಿ ತೆಚ್ಯಾ ಲೊಕಾಕ್ನಿ ತೆಂಚ್ಯಾ ಪಾಪಾನಿತ್ನಾ ಮಾಪ್ ಗಾವಲ್ಲ್ಯಾ ವೈನಾ, ಸುಟ್ಕೆಚಿ ಬುದ್ವಂತ್ಕಿ ದಿತಾ ಮನುನ್ ಸಾಂಗ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 1:77
19 ತಿಳಿವುಗಳ ಹೋಲಿಕೆ  

ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿಹೇಳಿದ್ದಾರೆ ಅಂದನು.


ದೇವರು ಆತನನ್ನೇ ಇಸ್ರಾಯೇಲ್ ಜನರಿಗೆ ಮಾನಸಾಂತರವನ್ನೂ ಪಾಪಪರಿಹಾರವನ್ನೂ ದಯಪಾಲಿಸುವದಕ್ಕಾಗಿ ನಾಯಕನೆಂತಲೂ ರಕ್ಷಕನೆಂತಲೂ ತನ್ನ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಿದನು.


ಪೇತ್ರನು ಅವರಿಗೆ - ನಿಮ್ಮ ಪಾಪಗಳು ಪರಿಹಾರವಾಗುವದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನ ಮೇಲೆ ದೀಕ್ಷಾಸ್ನಾನಮಾಡಿಸಿಕೊಳ್ಳಿರಿ, ಆಗ ನೀವು ಪವಿತ್ರಾತ್ಮದಾನವನ್ನು ಹೊಂದುವಿರಿ;


ಆದದರಿಂದ ದೇವರು ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ತಿರುಗಿದರೆ ದೇವರ ಸನ್ನಿಧಾನದಿಂದ ವಿಶ್ರಾಂತಿಕಾಲಗಳು ಒದಗಿ


ನಾನು ಅದನ್ನು ನೋಡಿ ಈತನೇ ದೇವಕುಮಾರನೆಂದು ಸಾಕ್ಷಿಕೊಟ್ಟಿದ್ದೇನೆ ಅಂದನು.


ಮರುದಿನ ಯೋಹಾನನು ತನ್ನ ಕಡೆಗೆ ಬರುವ ಯೇಸುವನ್ನು ನೋಡಿ - ಅಗೋ [ಯಜ್ಞಕ್ಕೆ] ದೇವರು ನೇವಿುಸಿದ ಕುರಿ, ಲೋಕದ ಪಾಪವನ್ನು ನಿವಾರಣೆ ಮಾಡುವವನು.


ಅವನು ಯೊರ್ದನ್ ಹೊಳೆಯ ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಜನರಿಗೆ - ನೀವು ಪಾಪ ಪರಿಹಾರಕ್ಕಾಗಿ ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಸಾರಿ ಹೇಳುವವನಾದನು.


ಈತನು ನಮಗೋಸ್ಕರ ತನ್ನ ರಕ್ತವನ್ನು ಸುರಿಸಿದ್ದರಿಂದ ನಮ್ಮ ಅಪರಾಧಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು. ಇದು ದೇವರ ಕೃಪಾತಿಶಯವೇ.


ನೆರೆಹೊರೆಯವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು - ಯೆಹೋವನ ಜ್ಞಾನವನ್ನು ಪಡೆಯಿರಿ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು; ನಾನು ಅವರ ಅಪರಾಧವನ್ನು ಕ್ಷವಿುಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ. ಇದು ಯೆಹೋವನ ನುಡಿ.


ಈತನು ತನ್ನ ರಕ್ತವನ್ನು ಸುರಿಸಿ ನಂಬಿಕೆಯಿದ್ದವರಿಗಾಗಿ ಕೃಪಾಧಾರವಾಗಬೇಕೆಂದು ದೇವರು ಈತನನ್ನು ಮುಂದಿಟ್ಟನು.


ಅದಕ್ಕೆ ಪೌಲನು - ಯೋಹಾನನು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರವಾತನಲ್ಲಿ ಅಂದರೆ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬದಾಗಿ ಜನರಿಗೆ ಹೇಳಿದನು ಎಂದು ಹೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು