Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:13 - ಕನ್ನಡ ಸತ್ಯವೇದವು J.V. (BSI)

13 ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣೀತಟ್ಟು ಹೊದ್ದುಕೊಂಡು ಬೂದಿಯಲ್ಲಿ ಕೂತುಕೊಂಡು ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಕೊರಾಜಿನೇ, ಬೆತ್ಸಾಯಿದವೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮಲ್ಲಿ ನಾನು ಅನೇಕ ಸೂಚಕಕಾರ್ಯಗಳನ್ನು ಮಾಡಿದೆನು. ಅದೇ ಸೂಚಕ ಕಾರ್ಯಗಳು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅವುಗಳ ಜನರು ಬಹಳ ಹಿಂದೆಯೇ, ತಮ್ಮ ಜೀವಿತಗಳನ್ನು ಮಾರ್ಪಡಿಸಿಕೊಂಡು, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು, ಗೋಣಿತಟ್ಟನ್ನು ಧರಿಸಿಕೊಂಡು, ಬೂದಿಯನ್ನು ಬಳಿದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಖೊರಾಜಿನೇ, ನಿನಗೆ ಕಷ್ಟ! ಬೇತ್ಸಾಯಿದವೇ, ನಿನಗೆ ಕಷ್ಟ! ಏಕೆಂದರೆ ನಿಮ್ಮಲ್ಲಿ ನಡೆದ ಅದ್ಭುತಗಳು ಟೈರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅಲ್ಲಿಯವರು ಬಹಳ ಕಾಲದ ಹಿಂದೆಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ದೇವರ ಕಡೆ ತಿರುಗಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 “ಖೊರಾಜಿನಾ! ಬೆತ್ಸಾಯಿದಾ! ತುಜಿ ಗತ್ ಕಾಯ್ ಸಾಂಗು, ತುಮ್ಚ್ಯಾ ಮದ್ದಿ ಕರಲ್ಲಿ ಮೊಟಿ-ಮೊಟಿ ಕಾಮಾ ತಿರ್ ಅನಿ ಸಿದೊನಾತ್ ಕರ್ಲ್ಯಾರ್, ಥೈತ್ಲಿ ಲೊಕಾ ಅಪ್ನಾಚ್ಯಾ ಪಾಪಾನಿತ್ಲಾ ಅಮಿ ಭಾಯ್ರ್ ಯೆಲಾಂವ್ ಮನುನ್ ದಾಕ್ವುಕ್, ಕನ್ನಾಕಿಚ್ ಖಾಲ್ತಿ ಬಸುನ್, ಗೊನಿ ಚಿಲಾ ಆಂಗಾರ್ ಘಾಲುನ್ ಘೆಯ್ ಹೊತ್ತಿ, ಅನಿ ಆಂಗಾರ್ ರಕ್ಕಾ ಘಾಲುನ್ ಘೆಯ್ ಹೊತ್ತಿ, ಕಾಯ್ಕಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:13
17 ತಿಳಿವುಗಳ ಹೋಲಿಕೆ  

[ಯೆಹೋಯಾಖೀನನು ಸೆರೆಯಾದ] ಹನ್ನೊಂದನೆಯ ವರುಷದ [ಒಂದಾನೊಂದು] ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -


ಸುಳ್ಳುಬೋಧಕರು ಬಂದು ಸ್ವಂತ ಮನಸ್ಸಿನಲ್ಲಿ ಅಪರಾಧಿಗಳೆಂಬ ಬರೆಯುಳ್ಳವರಾದರೂ ತಾವು ನೀತಿವಂತರೆಂದು ತೋರ್ಪಡಿಸಿಕೊಂಡು


ದುಃಖಿತರೆಲ್ಲರನ್ನು ಸಂತೈಸುವದಕ್ಕೂ ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವದು.


ಆದಕಾರಣ [ನಾನು ಆಡಿದ್ದನ್ನು] ತಿರಸ್ಕರಿಸಿ ಧೂಳಿಯಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ.


ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣೀತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರುವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಮಾಡುವೆನು.


ಉಪವಾಸವಿದ್ದು ಗೋಣಿತಟ್ಟು ಸುತ್ತಿಕೊಂಡು ಬೂದಿ ಬಳಿದುಕೊಂಡು ಕರ್ತನಾದ ದೇವರ ಕಡೆಗೆ ಮುಖವೆತ್ತಿ ಪ್ರಾರ್ಥನೆ ವಿಜ್ಞಾಪನೆಗಳಲ್ಲಿ ನಿರತನಾದೆನು.


ಯೆಹೋವನು ಇಂತೆನ್ನುತ್ತಾನೆ - ತೂರ್ ಪಟ್ಟಣವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಜನರನ್ನು ಗುಂಪುಗುಂಪಾಗಿ ಎದೋವಿುಗೆ ವಶಮಾಡಿಬಿಟ್ಟಿತಷ್ಟೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು