Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:14 - ಕನ್ನಡ ಸತ್ಯವೇದವು J.V. (BSI)

14 ಆದರೆ ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಸಹನೀಯವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ನ್ಯಾಯತೀರ್ಪಿನ ದಿನದಲ್ಲಿ ನಿನ್ನ ಸ್ಥಿತಿಯು ಟೈರ್ ಮತ್ತು ಸಿದೋನ್‌ಗಳ ಸ್ಥಿತಿಗಿಂತಲೂ ಕಠಿಣವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ನ್ಯಾಯತೀರ್ಪಿನಲ್ಲಿ ನಿಮ್ಮ ಗತಿಗಿಂತಲೂ ಟೈರ್ ಮತ್ತು ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ತಾಳಬಹುದಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಝಡ್ತಿಚ್ಯಾ ದಿಸಿ ತಿರ್ ಅನಿ ಸಿದೊನಾಕ್ ತುಮ್ಚ್ಯಾನ್ಕಿ ಜಾಸ್ತಿ ದಯಾ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:14
10 ತಿಳಿವುಗಳ ಹೋಲಿಕೆ  

ಆದದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಯಾವನಾದರೂ ಸರಿಯೇ, ಉತ್ತರ ಹೇಳುವದಕ್ಕೆ ನಿನಗೆ ಮಾರ್ಗವಿಲ್ಲ. ಹೇಗಂದರೆ ಮತ್ತೊಬ್ಬರಲ್ಲಿ ದೋಷವೆಣಿಸುವದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ನಡಿಸುತ್ತೀಯಲ್ಲಾ.


ಅವನು ಶರೀರದಲ್ಲಿ ಸುನ್ನತಿಯಿಲ್ಲದವನಾಗಿದ್ದು ಧರ್ಮಶಾಸ್ತ್ರದಲ್ಲಿ ಹೇಳಿದ್ದನ್ನು ನೆರವೇರಿಸುವದರಲ್ಲಿ ಶಾಸ್ತ್ರವೂ ಸುನ್ನತಿಯೂ ಇದ್ದು ಧರ್ಮವನ್ನು ಮೀರಿ ನಡೆಯುವ ನಿನ್ನನ್ನು ದೋಷಿಯೆಂದು ನಿರ್ಣಯಿಸುವದಿಲ್ಲವೇ?


ಆ ತೀರ್ಪು ಏನಂದರೆ - ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಹೆಚ್ಚಾಗಿ ಪ್ರೀತಿಸಿದರು.


ಭೂವಿುಯ ಸಕಲಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಅರಿತುಕೊಂಡಿದ್ದೇನೆ; ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನಿಮಗೆ ತಿನ್ನಿಸುವೆನು.


ತೂರೇ, ಚೀದೋನೇ, ಫಿಲಿಷ್ಟಿಯ ರಾಷ್ಟ್ರಗಳೇ, ನನ್ನ ಗೊಡವೆ ನಿಮಗೇಕೆ? ನನಗೆ ಪ್ರತೀಕಾರಮಾಡುವಿರೋ? ಸುಮ್ಮನೆ ತಂಟೆಮಾಡುವಿರೋ? ನೀವು ಮಾಡುವ ಕೇಡನ್ನು ತ್ವರೆಯಾಗಿ, ಶೀಘ್ರವಾಗಿ ನಿಮ್ಮ ತಲೆಗೇ ತರುವೆನು.


ಯೆಹೋವನು ಇಂತೆನ್ನುತ್ತಾನೆ - ತೂರ್ ಪಟ್ಟಣವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಜನರನ್ನು ಗುಂಪುಗುಂಪಾಗಿ ಎದೋವಿುಗೆ ವಶಮಾಡಿಬಿಟ್ಟಿತಷ್ಟೆ;


ನ್ಯಾಯವಿಚಾರಣೆಯ ದಿವಸದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಹೇಗಂದರೆ - ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣೀತಟ್ಟು ಹೊದ್ದುಕೊಂಡು ಬೂದಿಯಲ್ಲಿ [ಕೂತುಕೊಂಡು] ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು