Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:15 - ಕನ್ನಡ ಸತ್ಯವೇದವು J.V. (BSI)

15 ಎಲಾ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಪಾತಾಳಕ್ಕೇ ಇಳಿಯುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಎಲೈ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಇಲ್ಲ! ಪಾತಾಳಕ್ಕೇ ಇಳಿಯುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೇ ಇಳಿಯುವೆ,” ಎಂದರು ಯೇಸುಸ್ವಾಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯೋ? ಇಲ್ಲ! ನೀನು ಪಾತಾಳಕ್ಕೆ ಇಳಿಯುವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ ಇಳಿಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಅನಿ ತಿಯಾ ಕಪರ್‍ನವ್! ತುಕಾ ಸರ್‍ಗಾ ಪತರ್ ವೈರ್ ಪಾವುಕ್ ಪಾಜೆ ನ್ಹಯ್? ತುಕಾ ನರ್‍ಕಾತ್ ಟಾಕುನ್ ಹೊತಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:15
20 ತಿಳಿವುಗಳ ಹೋಲಿಕೆ  

ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್ ನೆಫ್ತಲೀಮ್ ಎಂಬ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ಮನೆಮಾಡಿಕೊಂಡು ಇದ್ದನು.


ಹೇಗಂದರೆ ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರಬೇಕೆಂದು ಕತ್ತಲೇ ಗುಂಡಿಗಳಿಗೆ ಒಪ್ಪಿಸಿದನು.


ಅಬ್ರಹಾಮ ಇಸಾಕ ಯಾಕೋಬ ಇವರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕುವದನ್ನೂ ನೀವು ನೋಡುವಾಗ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.


ಎಲಾ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಪಾತಾಳಕ್ಕೇ ಇಳಿಯುವಿ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋವಿುನಲ್ಲಿ ನಡೆದಿದ್ದರೆ ಅದು ಇಂದಿನವರೆಗೂ ಉಳಿಯುತ್ತಿತ್ತು.


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ದೇಹ ಎರಡನ್ನೂ ಕೂಡ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ನೀನು ಹದ್ದಿನಂತೆ ಮೇಲಕ್ಕೆ ಏರಿದರೂ ನಿನ್ನ ಗೂಡು ನಕ್ಷತ್ರಮಂಡಲದಲ್ಲಿ ನೆಲೆಗೊಂಡಿದ್ದರೂ ಅಲ್ಲಿಂದ ನಿನ್ನನ್ನು ಇಳಿಸಿಬಿಡುವೆನು; ಇದು ಯೆಹೋವನ ನುಡಿ.


[ಪೂರ್ವದಲ್ಲಿ] ಯಾವ ಸುನ್ನತಿಹೀನ ಶೂರರು ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು ಹತರಾಗಿ ಆಯುಧಸಹಿತ ಪಾತಾಳಕ್ಕೆ ಇಳಿದು ಕತ್ತಿಗಳನ್ನು ತಲೆಗಿಂಬುಮಾಡಿಕೊಂಡು ತಮ್ಮ ಅಸ್ಥಿಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದಾರೋ ಅವರ ನಡುವೆ ಮೆಷೆಕಿನವರೂ ತೂಬಲಿನವರೂ ಒರಗದೆ ಹೋಗುವರೇ?


ಆಹಾ, ಖಡ್ಗಹತರ ಮಧ್ಯದಲ್ಲಿ ಬೀಳುವರು; ಕತ್ತಿಯು ಎತ್ತಿಯಿದೆ; [ಅಧೋಲೋಕದವರೇ,] ಐಗುಪ್ತವನ್ನೂ ಅದರ ಅನಂತ ಪ್ರಜೆಗಳನ್ನೂ ಎಳೆದುಕೊಳ್ಳಿರಿ.


ನರಪುತ್ರನೇ, ನೀನು ಐಗುಪ್ತದ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ ಅವರನ್ನೂ ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.


ಇಂಥಾ ವೈಭವದಿಂದಲೂ ಮಹಿಮೆಯಿಂದಲೂ ಕೂಡಿದ ನೀನು ಏದೆನಿನ ವೃಕ್ಷಗಳಲ್ಲಿ ಯಾವದಕ್ಕಿಂತ ಕಡಿಮೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ತಳ್ಳಲ್ಪಟ್ಟು ಸುನ್ನತಿಹೀನರ ನಡುವೆ ಖಡ್ಗಹತರ ಸಂಗಡ ಒರಗಿಹೋಗುವಿ. ಫರೋಹನೂ ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು ಎಂಬದು ಕರ್ತನಾದ ಯೆಹೋವನ ನುಡಿ.


ಪುರಾತನಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ ನಿರ್ನಿವಾಸಿಯಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು.


ಬಾಬೆಲು ಆಕಾಶದ ತನಕ ಬೆಳೆದು ಎತ್ತರವಾಗಿಯೂ ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು. ಇದು ಯೆಹೋವನ ನುಡಿ.


ಮತ್ತು ಪಾತಾಳವು ಹೆಚ್ಚು ಆತುರದಿಂದ ಅಪಾರವಾಗಿ ಬಾಯಿತೆರೆಯಲು ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲಾ [ಅದರೊಳಗೆ] ಬಿದ್ದುಹೋಗುವವು.


ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿರಿ; ಅಲ್ಲಿ ಹೋಗಿದ್ದ ನಮ್ಮ ಸಹೋದರರು ನಮಗೆ - ಆ ದೇಶದ ಜನರು ನಮಗಿಂತ ಹೆಚ್ಚಾಗಿಯೂ ಉದ್ದವಾಗಿಯೂ ಇದ್ದಾರೆ; ಅವರಿರುವ ಪಟ್ಟಣಗಳು ದೊಡ್ಡವೂ ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಳ್ಳವೂ ಆಗಿವೆ; ಅಲ್ಲಿ ಉನ್ನತಪುರುಷರನ್ನು ನೋಡಿದೆವೆಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ ಅಂದುಕೊಳ್ಳುತ್ತಿದ್ದಿರಿ.


ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವ ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಪಡೆಯೋಣ; ಹೀಗೆ ಮಾಡಿದರೆ ಭೂವಿುಯ ಮೇಲೆಲ್ಲಾ ಚದರುವದಕ್ಕೆ ಆಸ್ಪದವಾಗುವದಿಲ್ಲ ಅಂದುಕೊಂಡರು. ಕಟ್ಟುವಾಗ ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ ಸುಣ್ಣಕ್ಕೆ ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.


ಅವನು ಪಾತಾಳದೊಳಗೆ ಯಾತನೆಪಡುತ್ತಾ ಇರುವಲ್ಲಿ ಕಣ್ಣೆತ್ತಿ ದೂರದಿಂದ ಅಬ್ರಹಾಮನನ್ನೂ ಇವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ನೋಡಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು