ಲೂಕ 10:21 - ಕನ್ನಡ ಸತ್ಯವೇದವು J.V. (BSI)21 ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನ ಪ್ರೇರಣೆಯಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವದೇ ಒಳ್ಳೇದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಬಳಿಕ ಯೇಸು ಪವಿತ್ರಾತ್ಮನ ಮೂಲಕ ಬಹಳ ಸಂತೋಷಗೊಂಡು ಹೀಗೆ ಪ್ರಾರ್ಥಿಸಿದನು: “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಾನು ನಿನ್ನನ್ನು ಸ್ತುತಿಸುತ್ತೇನೆ. ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಸಂಗತಿಗಳನ್ನು ಮರೆಮಾಡಿದ್ದಕ್ಕಾಗಿ ನಾನು ನಿನ್ನನ್ನು ಸ್ತುತಿಸುತ್ತೇನೆ. ಆದರೆ ನೀನು ಚಿಕ್ಕಮಕ್ಕಳಂತಿರುವ ಜನರಿಗೆ ಈ ಸಂಗತಿಗಳನ್ನು ಪ್ರಕಟಮಾಡಿದೆ. ಹೌದು, ತಂದೆಯೇ, ಅದೇ ನಿನ್ನ ಅಪೇಕ್ಷೆಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆ ಸಮಯದಲ್ಲಿ ಯೇಸು, ಪವಿತ್ರಾತ್ಮರ ಮುಖಾಂತರ ಆನಂದಗೊಂಡು, “ತಂದೆಯೇ, ಪರಲೋಕ, ಭೂಲೋಕಗಳ ಒಡೆಯರೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ. ಹೌದು ತಂದೆಯೇ, ಹೀಗೆ ಮಾಡುವುದು ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋಚಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಎಗ್ದಾ ಜೆಜು ಪವಿತ್ರ್ ಆತ್ಮ್ಯಾನ್ ಕುಶಿ ಹೊಲೊ ಅನಿ “ಬಾಬಾ ಸರ್‍ಗಾಚ್ಯಾ ಅನಿ ಹ್ಯಾ ಜಗಾಚ್ಯಾ ಧನಿಯಾ ಮಿಯಾ ತುಕಾ ಧನ್ಯವಾದ್ ದಿತಾ, ಕಶ್ಯಾಕ್ ಮಟ್ಲ್ಯಾರ್, ಬುದ್ವಂತಾನಿಕ್ನಾ ಅನಿ ಶಿಕಲ್ಲ್ಯಾನಿಕ್ನಾ ನಿಪ್ವುನ್ ಥವಲ್ಲೆ, ಶಿಕುನಸಲ್ಲ್ಯಾಕ್ನಿ ತಿಯಾ ದಾಕ್ವುನ್ ದಿಲೆ. ಹೊಯ್ ಮಾಜ್ಯಾ ಬಾಬಾ, ಹೆ, ತುಕಾ ಕಶೆ ಪಾಜೆ ತಸೆಚ್ ಹೊಲೆ”. ಅಧ್ಯಾಯವನ್ನು ನೋಡಿ |