Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:29 - ಕನ್ನಡ ಸತ್ಯವೇದವು J.V. (BSI)

29 ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವದಕ್ಕೆ ಅಪೇಕ್ಷಿಸಿ - ನನ್ನ ನೆರೆಯವನು ಯಾರು ಎಂದು ಯೇಸುವನ್ನು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಕೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಆದರೆ ಆ ಶಾಸ್ತ್ರಜ್ಞನು ತನ್ನನ್ನು ತಾನೇ ಸಮರ್ಥಿಸಿಕೊಳ್ಳಲು, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಮತ್ತೆ ಪ್ರಶ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆದರೆ ಆ ಮನುಷ್ಯನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳಲು ಬಯಸಿ, ಯೇಸುವಿಗೆ, “ನಾನು ಪ್ರೀತಿಸಬೇಕಾದ ನೆರೆಯವರು ಯಾರು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆದರೆ ಅವನು ತಾನೇ ನೀತಿವಂತನೆಂದು ತೋರಿಸುವುದಕ್ಕೆ, ಅಪೇಕ್ಷೆಯುಳ್ಳವನಾಗಿ ಯೇಸುವಿಗೆ, “ನನ್ನ ನೆರೆಯವನು ಯಾರು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಖರೆ ತೊ ಮಾನುಸ್ ಅಪ್ನಿಚ್ ಖರೊ ಮನುನ್ ದಾಕ್ವುಸಾಟ್ನಿ “ಮಾಜೊ ಸೆಜಾರಿ ಮಟ್ಲ್ಯಾರ್ ಕೊನ್?” ಮನುನ್ ಜೆಜುಕ್ ಇಚಾರುಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:29
11 ತಿಳಿವುಗಳ ಹೋಲಿಕೆ  

ಆಗ ಆತನು ಅವರಿಗೆ ಹೇಳಿದ್ದೇನಂದರೆ - ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳುಕೊಂಡಿದ್ದಾನೆ. ಮನುಷ್ಯರಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ಇದಲ್ಲದೆ ಕರ್ಮಮಾರ್ಗದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ ನೀತಿವಂತನು ನಂಬಿಕೆಯಿಂದಲೇ ಬದುಕುವನೆಂದು ಬರೆದದೆ.


ಅಬ್ರಹಾಮನು ಪುಣ್ಯಕ್ರಿಯೆಗಳಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವದಕ್ಕೆ ಅವನಿಗೆ ಆಸ್ಪದವಿರುವದು. ಆದರೆ ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಆಸ್ಪದವಿರುವದಿಲ್ಲ.


ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.


ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.


ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು ಎಂದು ಕೇಳಿದ್ದಕ್ಕೆ


ಮನುಷ್ಯನು ಕ್ರಿಯೆಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೇ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೋಡುತ್ತೀರಿ.


ಆಮೇಲೆ ಬೂಜ್ ಕುಲಕ್ಕೂ ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಹತ್ತಿತು.


ಆಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ - ಯಾವನಿಗಾದರೂ ನನ್ನ ಹಿಂದೆ ಬರುವದಕ್ಕೆ ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆ ಬರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು