Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 10:35 - ಕನ್ನಡ ಸತ್ಯವೇದವು J.V. (BSI)

35 ಮರುದಿನ ಅವನು ಎರಡು ಹಣಗಳನ್ನು ತೆಗೆದು ಛತ್ರದವನಿಗೆ ಕೊಟ್ಟು - ಇವನನ್ನು ಆರೈಕೆಮಾಡು; ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಮರುದಿನ ಅವನು ಎರಡು ದಿನಾರಿಗಳನ್ನು ತೆಗೆದು ಛತ್ರದವನಿಗೆ ಕೊಟ್ಟು, ‘ಇವನನ್ನು ಆರೈಕೆಮಾಡು, ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಮಾರನೆಯ ದಿನ ಎರಡು ದಿನಾರಿ ನಾಣ್ಯಗಳನ್ನು ಛತ್ರದವನಿಗೆ ಕೊಟ್ಟು, ‘ಇವನನ್ನು ಚೆನ್ನಾಗಿ ನೋಡಿಕೊ, ಇದಕ್ಕಿಂತ ಹೆಚ್ಚು ವೆಚ್ಚ ಆದರೆ ನಾನು ಹಿಂದಿರುಗಿ ಬರುವಾಗ ಸಲ್ಲಿಸುತ್ತೇನೆ,’ ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಮರುದಿನ, ಸಮಾರ್ಯದವನು ಎರಡು ಬೆಳ್ಳಿ ನಾಣ್ಯಗಳನ್ನು ಆ ಛತ್ರದವನಿಗೆ ಕೊಟ್ಟು, ‘ಗಾಯಗೊಂಡ ಇವನನ್ನು ಆರೈಕೆ ಮಾಡು. ಇದಕ್ಕಿಂತ ಹೆಚ್ಚಾಗಿ ಖರ್ಚಾದರೆ ನಾನು ಮತ್ತೆ ಬಂದಾಗ ನಿನಗೆ ಕೊಡುತ್ತೇನೆ’ ಎಂದು ಹೇಳಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ಬೆಳ್ಳಿ ನಾಣ್ಯವನ್ನು ತೆಗೆದು ಛತ್ರದ ಯಜಮಾನನಿಗೆ ಕೊಟ್ಟು ಅವನಿಗೆ, ‘ಇವನನ್ನು ಆರೈಕೆ ಮಾಡು, ನೀನು ಏನಾದರೂ ಹೆಚ್ಚು ವೆಚ್ಚಮಾಡಿದರೆ, ನಾನು ತಿರುಗಿ ಬರುವಾಗ ಕೊಟ್ಟು ತೀರಿಸುತ್ತೇನೆ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ದುಸ್ರ್ಯಾ ದಿಸಿ ತ್ಯಾ ಘರಾಚ್ಯಾ ಧನಿಯಾಕ್, ದೊನ್ ಚಾಂದಿಚೆ ಪೈಸೆ ದಿಲ್ಯಾನ್, ಅನಿ “ತೆಕಾ ಬರೆ ಕರುನ್ ಬಗಾ ಅನಿ ಜಾಸ್ತಿ ಖರಚ್ ಹೊಲ್ಯಾರ್, ಮಿಯಾ ಹ್ಯಾ ವಾಟೆನ್ ಯೆಲ್ಲ್ಯಾ ತನ್ನಾ ತುಮ್ಕಾ ಹಾನುನ್ ದಿತಾ” ಮನುನ್ ಸಾಂಗುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 10:35
7 ತಿಳಿವುಗಳ ಹೋಲಿಕೆ  

ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು; ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.


ಆದರೆ ನೀನು ಔತಣ ಮಾಡಿಸುವಾಗ ಬಡವರು ಊನವಾದವರು ಕುಂಟರು ಕುರುಡರು ಇಂಥವರನ್ನು ಕರೆ;


ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.


ಆಳಿಗೆ ದಿನಕ್ಕೆ ಒಂದು ಪಾವಲಿಯಂತೆ ಕೂಲಿ ಗೊತ್ತುಮಾಡಿ ಅವರನ್ನು ದ್ರಾಕ್ಷೇತೋಟಕ್ಕೆ ಕಳುಹಿಸಿದನು.


ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಹಣಾ ಕೊಡಬೇಕಾದ ಒಬ್ಬ ಜೊತೇಸೇವಕನನ್ನು ಕಂಡು ಅವನನ್ನು ಹಿಡಿದು - ಎಲಾ, ನನ್ನ ಸಾಲ ತೀರಿಸು ಎಂದು ಹೇಳಿ ಕುತ್ತಿಗೆ ಹಿಸಿಕಿದನು.


ಕನಿಕರಿಸಿ ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಲ್ಲಿ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಕಟ್ಟಿ ತನ್ನ ಸ್ವಂತ ವಾಹನದ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರಕೊಂಡು ಹೋಗಿ ಅವನನ್ನು ಆರೈಕೆಮಾಡಿದನು.


ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು ಎಂದು ಕೇಳಿದ್ದಕ್ಕೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು